ಗಣಿತ ಪರೀಕ್ಷೆ ಸುಸೂತ್ರ
Team Udayavani, Jun 28, 2020, 4:15 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಆಲಮಟ್ಟಿ: ಆಲಮಟ್ಟಿಯ ಮಂಜಪ್ಪ ಹರ್ಡೇಕರ ಸ್ಮಾರಕ ಪ.ಪೂ. ಮಹಾವಿದ್ಯಾಲಯದ ಪ್ರೌಢಶಾಲಾ ವಿಭಾಗದ ಪರೀಕ್ಷಾ ಕೇಂದ್ರ ಹಾಗೂ ಆರ್.ಬಿ.ಪಿ.ಜಿ. ಹಳಕಟ್ಟಿ ಪರೀಕ್ಷಾ ಕೇಂದ್ರಗಳಲ್ಲಿ ಶನಿವಾರ ವಿದ್ಯಾರ್ಥಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಗಣಿತ ಪರೀಕ್ಷೆ ಬರೆದರು.
ಆಲಮಟ್ಟಿ ಹಾಗೂ ನಿಡಗುಂದಿ ಆಸ್ಪತ್ರೆಗಳ ಸಿಬ್ಬಂದಿ ಪರೀಕ್ಷಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಿ ಕೈಗಳಿಗೆ ಸ್ಯಾನಿಟೈಸರ್ ಹಾಕಿ ಕೊಠಡಿಗಳಿಗೆ ಕಳುಹಿಸಿಕೊಟ್ಟರು. ಎಂ.ಎಚ್.ಎಂ. ಪರೀಕ್ಷಾ ಕೇಂದ್ರದಲ್ಲಿ 147 ವಿದ್ಯಾರ್ಥಿಗಳು ಮತ್ತು 121 ವಿದ್ಯಾರ್ಥಿನಿಯರು ದಾಖಲಾತಿ ಪಡೆದಿದ್ದು ಶನಿವಾರ ನಡೆದ ಗಣಿತ ವಿಷಯದ ಪರೀಕ್ಷೆಗೆ 142 ವಿದ್ಯಾರ್ಥಿಗಳು, 112 ವಿದ್ಯಾರ್ಥಿನಿಯರು ಸೇರಿ ಒಟ್ಟು 254 ಪರೀಕ್ಷಾರ್ಥಿಗಳು ಹಾಜರಾಗಿದ್ದು 14 ಗೈರು ಹಾಜರಾಗಿದ್ದಾರೆ.
ಆರ್.ಬಿ.ಪಿ.ಜಿ. ಹಳಕಟ್ಟಿ ಪರೀಕ್ಷಾ ಕೇಂದ್ರದಲ್ಲಿ 153 ವಿದ್ಯಾರ್ಥಿಗಳು, 121 ವಿದ್ಯಾರ್ಥಿನಿಯರು ಸೇರಿ ಒಟ್ಟು 274 ಪರೀಕ್ಷಾರ್ಥಿಗಳು ದಾಖಲಾತಿ ಹೊಂದಿದ್ದು, ಅದರಲ್ಲಿ 146 ವಿದ್ಯಾರ್ಥಿಗಳು, 108 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದರೆ 20 ಪರೀಕ್ಷಾರ್ಥಿಗಳು ಗೈರು ಹಾಜರಾಗಿದ್ದಾರೆ. ಪರೀಕ್ಷೆ ಕೇಂದ್ರದ ಆವರಣ ಮತ್ತು ಪರೀಕ್ಷಾ ಕೊಠಡಿಗಳಲ್ಲಿ ಆಲಮಟ್ಟಿ ಗ್ರಾಪಂ ವತಿಯಿಂದ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗಿತ್ತು. ಸ್ಕೌಟ್ಸ್, ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರು, ಪೊಲೀಸರು, ಆಶಾ ಕಾರ್ಯಕರ್ತೆಯರು ಪರೀಕ್ಷಾರ್ಥಿಗಳಲ್ಲಿ ಜಾಗೃತಿಯೊಂದಿಗೆ ಭದ್ರತೆ ಒದಗಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.