ಜಲಾಶಯಕ್ಕೆ ಒಳಹರಿವು ಆರಂಭ
Team Udayavani, Jun 21, 2020, 4:53 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಆಲಮಟ್ಟಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದ್ದು ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಶನಿವಾರ 57,346 ಕ್ಯೂಸೆಕ್ ನೀರು ಹರಿದು ಬಂದಿದ್ದು ವಾಡಿಕೆಗಿಂತ ಮುಂಚಿತವಾಗಿ ಜಲಾಶಯ ತುಂಬುವ ಸಾಧ್ಯತೆಯಿದೆ.
ಮಹಾರಾಷ್ಟ್ರದ ಮಹಾಬಲೇಶ್ವರ, ರತ್ನಗಿರಿ, ಕರಾಡ ಸೇರಿದಂತೆ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವಾಡಿಕೆಗಿಂತಲೂ ಮುಂಚಿತವಾಗಿ ಮಳೆಯಾಗುತ್ತಿದೆ ಹಾಗೂ ಹಿಪ್ಪರಗಿ ಬ್ಯಾರೇಜಿನ ಗೇಟುಗಳ ದುರಸ್ತಿಗಾಗಿ ನದಿ ಪಾತ್ರಕ್ಕೆ ನೀರು ಬಿಟ್ಟಿದ್ದು ಜೂನ್ ಮೊದಲ ವಾರದಲ್ಲಿಯೇ ಶಾಸ್ತ್ರಿ ಜಲಾಶಯಕ್ಕೆ ಒಳಹರಿವು ಆರಂಭವಾಗಿದೆ.
ಗರಿಷ್ಠ 519.60ಮೀ. ಎತ್ತರದಲ್ಲಿ 123.081ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯದ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದಲ್ಲಿ ಶನಿವಾರ ಬೆಳಗಿನ ಮಾಹಿತಿಯಂತೆ 512.62ಮೀ. ಎತ್ತರವಾಗಿ 44.894 ಟಿಎಂಸಿ ಅಡಿ ನೀರು ಸಂಗ್ರಹವಾಗಿ ಜಲಾಶಯಕ್ಕೆ 57,346 ಕ್ಯೂಸೆಕ್ ನೀರು ಹರಿದು ಬರುತ್ತಿದೆ. 530 ಕ್ಯೂಸೆಕ್ ನೀರು ಭಾಷ್ಪೀಭವನ ಹಾಗೂ ಕುಡಿಯಲು ಉಪಯೋಗಿಸಲಾಗುತ್ತಿದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 508.03 ಮೀ. ಎತ್ತರದಲ್ಲಿ 29.523 ಟಿಎಂಸಿ ಅಡಿ ಸಂಗ್ರಹವಿದ್ದು ಒಳಹರಿವು ಇರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
Vijayapura: ವಕ್ಫ್ ವಿರುದ್ಧ ಹಲವು ಮಠಾಧೀಶರ ನೇತೃತ್ವದಲ್ಲಿ ಹೋರಾಟ
Waqf Issue: ಲ್ಯಾಂಡ್ ಟೆರರಿಸಂ, ಲ್ಯಾಂಡ್ ಜಿಹಾದ್ ನಿಂದ ಬಚಾವಾಗಬೇಕು: ಶೋಭಾ ಕರಂದ್ಲಾಜೆ
MUST WATCH
ಹೊಸ ಸೇರ್ಪಡೆ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್ ಗಂಡು ಸಿಂಹ’ ಆಗಮನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.