ಆಲಮಟ್ಟಿ ಜಲಾಶಯ ಭರ್ತಿಗೆ ದಿನಗಣನೆ
Team Udayavani, Jul 12, 2020, 2:00 PM IST
ಆಲಮಟ್ಟಿ: ಕೃಷ್ಣೆಯ ಉಗಮಸ್ಥಾನ ಹಾಗೂ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುತ್ತಿರುವುದು ಆಲಮಟ್ಟಿ ಜಲಾಶಯಕ್ಕೆ ಹರಿದುಬರುತ್ತಿರುವ ನೀರಿನಲ್ಲಿ ವ್ಯಾಪಕವಾಗಿ ಏರಿಕೆಯಾಗುತ್ತಿದೆ. ಇದರಿಂದ ಜಲಾಶಯ ಭರ್ತಿಗೆ ದಿನಗಣನೆ ಆರಂಭವಾಗಿದೆ.
ಉತ್ತರ ಕರ್ನಾಟಕದ ಜೀವನಾಡಿ ಕೃಷ್ಣಾ ನದಿಯ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವುದರಿಂದ ಕೃಷ್ಣೆಯ ಒಡಲಮಕ್ಕಳ ಸಂತಸ ಇಮ್ಮಡಿಗೊಂಡಂತಾಗಿದೆ. 519.6 ಮೀ. ಗರಿಷ್ಠ ಎತ್ತರದಲ್ಲಿ 123.081ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಶನಿವಾರ 517.36 ಮೀ. ಎತ್ತರವಾಗಿ 89.013 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಇದರಲ್ಲಿ ಜಲಚರಗಳಿಗೆ 17.62 ಟಿಎಂಸಿ ಅಡಿ ನೀರು ಮೀಸಲಾಗಿದ್ದು, ಇನ್ನುಳಿದ 71.393 ಟಿಎಂಸಿ ಅಡಿ ನೀರನ್ನು ಬಳಸಿಕೊಳ್ಳಬಹುದಾಗಿದೆ.
ಲಾಲ ಬಹದ್ದೂರಶಾಸ್ತ್ರಿ ಜಲಾಶಯಕ್ಕೆ ಶನಿವಾರ 73,791 ಕ್ಯೂಸೆಕ್ ನೀರು ಹರಿದುಬಂದಿದೆ. ಇನ್ನುಳಿದಂತೆ ಜಲಾಶಯದ ಬಲಭಾಗದಲ್ಲಿರುವ ಕೆಪಿಸಿಎಲ್‌ನ ಆಲಮಟ್ಟಿ ಜಲವಿದ್ಯುದಾಗಾರದ ಮೂಲಕವಾಗಿ 35 ಸಾವಿರ ಕ್ಯೂಸೆಕ್ ನೀರನ್ನು ನದಿಪಾತ್ರಕ್ಕೆ ಹರಿದು ಬಿಡಲಾಗುತ್ತಿದೆ. ಇನ್ನುಳಿದಂತೆ 600 ಕ್ಯೂಸೆಕ್ ನೀರನ್ನು ಮುಳವಾಡ ಏತನೀರಾವರಿ ಯೋಜನೆ ವ್ಯಾಪ್ತಿಯ ವಿವಿಧ ಕಾಲುವೆಗಳ ಮೂಲಕಜನ-ಜಾನುವಾರುಗಳ ಕುಡಿಯುವ ನೀರಿಗಾಗಿ ಕೆರೆಗಳನ್ನು ತುಂಬಿಸಲು ಮತ್ತು ಬಹುಹಳ್ಳಿ ಕುಡಿಯುವ ನೀರಿನ ಘಟಕಗಳಿಗೆ ಹಾಗೂ ಶಾಸ್ತ್ರಿ ಜಲಾಶಯದ ಹಿನ್ನೀರಿನ ಭಾಷ್ಪೀಭವನ ಸೇರಿದಂತೆ 500 ಕ್ಯೂಸೆಕ್ ಸೇರಿ ಒಟ್ಟು 36,110 ಕ್ಯೂಸೆಕ್ ನೀರು ಹೊರಹೋಗುತ್ತಿದೆ. ಕಳೆದ ವರ್ಷ ಇದೇ ದಿನ 514.90 ಮೀ. ಎತ್ತರದಲ್ಲಿ 1,04,290 ಕ್ಯೂಸೆಕ್ ನೀರು ಶಾಸ್ತ್ರಿ ಜಲಾಶಯಕ್ಕೆ ನೀರು ಹರಿದುಬರುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.