ಅಕ್ಟೋಬರ್‌ಗೆ ಅಮೃತ ಯೋಜನೆ ಕಾಮಗಾರಿ ಮುಗಿಸಲು ತಾಕೀತು

Team Udayavani, Jul 11, 2020, 11:15 AM IST

ಅಕ್ಟೋಬರ್‌ಗೆ ಅಮೃತ ಯೋಜನೆ ಕಾಮಗಾರಿ ಮುಗಿಸಲು ತಾಕೀತು

ವಿಜಯಪುರ: ಕೇಂದ್ರ ಪುರಸ್ಕೃತ ಅಮೃತ ಯೋಜನೆಯಲ್ಲಿ ನಗರದಲ್ಲಿ ಅನುಷ್ಠಾನದಲ್ಲಿರುವ ಕುಡಿಯುವ ನೀರು ಸರಬರಾಜು ಯೋಜನೆ ಪ್ರಗತಿ ನಿರೀಕ್ಷಿತ ಪ್ರಗತಿ ಕಂಡಿಲ್ಲ. ಅಕ್ಟೋಬರ್‌ ಮಾಸಾಂತ್ಯದೊಳಗೆ ಕಾಮಗಾರಿ ಪೂರ್ಣ ಪ್ರಮಾಣದಲ್ಲಿ ಮುಗಿಸುವಂತೆ ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಮೃತ ಯೋಜನೆಯಡಿ ಸಾಧಿಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, 177 ಕೋಟಿ ರೂ. ವೆಚ್ಚದ ಈ ಯೋಜನೆಯಲ್ಲಿ ಈವರೆಗೆ 6 ವಲಯಗಳಲ್ಲಿ ಮಾತ್ರ ಕಾಮಗಾರಿ ಪೂರ್ಣಗೊಂಡಿದೆ. ಇತರೆ ವಲಯಗಳಲ್ಲಿ ಆರ್ಥಿಕ ಗುರಿಗೆ ತಕ್ಕಂತೆ ಭೌತಿಕ ಪ್ರಗತಿ ಕಂಡಿಲ್ಲ. ಇನ್ನುಳಿದ 9 ವಲಯಗಳಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿ ಜನರಿಗೆ ಕುಡಿಯುವ ನೀರಿನ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳಲು ಸೂಚಿಸಿದರು.

ಸದರಿ ಯೋಜನೆಯಲ್ಲಿ 53,453 ಕುಡಿಯುವ ನೀರು ಸಂಪರ್ಕ ನಳ ಜೋಡಿಸುವ ಗುರಿ ಇದ್ದರೂ ಆರ್ಥಿಕ ಸಾಧನೆಗೆ ತಕ್ಕಂತೆ ಭೌತಿಕ ಪ್ರಗತಿ ಸಾಧನೆಯಾಗಿಲ್ಲ. ಅಧಿಕಾರಿಗಳು ಯಾವುದೇ ರೀತಿಯ ಸಬೂಬು ನೀಡದೆ ಮುಂದಿನ ಅಕ್ಟೋಬರ್‌ ಅಂತ್ಯದೊಳಗೆ ಯೋಜನೆ ಪೂರ್ಣಗೊಳಿಸಿ ನಾಗರಿಕರಿಗೆ ನೆರವಾಗುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಅದರಂತೆ ಈ ಯೋಜನೆಯ ಅನುಷ್ಠಾನ ಜವಾಬ್ದಾರಿ ಹೊಂದಿರುವ ಜೈನ್‌ ಸಂಸ್ಥೆ ಮಂದಗತಿ ಕಾಮಗಾರಿ ಕುರಿತಂತೆ ಸಂಬಂಧಪಟ್ಟ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಮಾಹಿತಿ ರವಾನಿಸುವುದರ ಜೊತೆಗೆ ಸರ್ಕಾರದ ಗಮನಕ್ಕೆ ತರಲಾಗುವುದು. ಅದರಂತೆ ಸಂಬಂಧಿಸಿದ ನೀರು ಸರಬರಾಜು ಮಂಡಳಿಯ ಕಾರ್ಯನಿರ್ವಾಹಕ ಅಭಿಯಂತರರು ಕೂಡಾ ಈ ಯೋಜನೆಯಡಿ ಸಾಧಿಸಿದ ಆರ್ಥಿಕ ಮತ್ತು ಭೌತಿಕ ಸೇರಿದಂತೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ ನೀಡಿದರು.

ನಗರದಲ್ಲಿ 15 ವಲಯಗಳ ಪೈಕಿ 6 ವಲಯಗಳಲ್ಲಿ ಕಾಮಗಾರಿ ಪೂರ್ಣಗೊಂಡಿದೆ. ಜುಲೈ ಅಂತ್ಯಕ್ಕೆ ಇನ್ನು ಮೂರು ವಲಯಗಳಲ್ಲಿ ಈ ಕಾಮಗಾರಿ ಪೂರ್ಣಗೊಳ್ಳಲಿದೆ. ಅಕ್ಟೋಬರ್‌ ಅಂತ್ಯಕ್ಕೆ ಎಲ್ಲ 15 ವಲಯಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಈ ಯೋಜನೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ಕಾರ್ಯನಿರ್ವಾಹಕ ಅಭಿಯಂತರ ಪಟ್ಟಣಶಟ್ಟಿ ಅವರು ಸಭೆಗೆ ತಿಳಿಸಿದರು. ಪಾಲಿಕೆ ಆಯುಕ್ತ ಹರ್ಷಾ ಶಟ್ಟಿ ಇದ್ದರು.

ಟಾಪ್ ನ್ಯೂಸ್

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Exam

Udupi:ಕಾಲೇಜುಗಳಲ್ಲಿ ಯುವನಿಧಿ ನೋಂದಣಿ

1-aaaa

ಬಡ ದಂಪತಿಗೆ ಮಾಜಿ ಮೇಯರ್‌ ಸುಧೀರ್‌ ಶೆಟ್ಟಿ ನಿರ್ಮಿಸಿಕೊಟ್ಟ 12 ಲ.ರೂ. ಮನೆಯ ಗೃಹ ಪ್ರವೇಶ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.