ಬೇಡಿಕೆ ಈಡೇರಿಕೆಗೆ ಅಂಗನವಾಡಿ ಕಾರ್ಯಕರ್ತೆಯರ ಆಗ್ರಹ
Team Udayavani, Jul 27, 2022, 5:31 PM IST
ಮುದ್ದೇಬಿಹಾಳ: ತಾಲೂಕಿನಲ್ಲಿ ಐದು ವರ್ಷಗಳಿಂದ ಅಂಗನವಾಡಿ ಬಾಡಿಗೆಯನ್ನು ಮಾಲೀಕರಿಗೆ ಕೊಡದೇ ಇರುವುದು, ಜು.2019ರ ಗೌರವಧನ ಕಾರ್ಯಕರ್ತೆಯರು, ಸಹಾಯಕಿಯರಿಗೆ ಮುಟ್ಟದೇ ಇರುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಮಂಗಳವಾರ ತಾಲೂಕಾಡಳಿತಕ್ಕೆ ಮನವಿ ಸಲ್ಲಿಸಿದರು.
ರಾಜ್ಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಸೇವಾ ಸಂಘದ ಅಧ್ಯಕ್ಷ ನೀಲಮ್ಮ ಬೋರಾವತ್ ಮಾತನಾಡಿ, ತಾಲೂಕಿನ ತಂಗಡಗಿ ಭಾಗದಲ್ಲಿ 2019ರಲ್ಲಿ ಏಳು ತಿಂಗಳ ಮೊಟ್ಟೆ ಬಿಲ್ ಬಾಕಿ ತೆಗೆಯಬೇಕು.ಅಲ್ಲದೇ ಸರ್ವಿಸ್ಸಾದ ಕಾರ್ಯಕರ್ತೆಯರನ್ನು ಮೇಲ್ವಿಚಾರಕಿ ಎಂದು ಬಡ್ತಿ ನೀಡಬೇಕು. ನಿವೃತ್ತರಾದ ಅಂಗನವಾಡಿ ನೌಕರರಿಗೆ ಎನ್‌ಪಿಎಸ್ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದರು.
ನಿಂಬೆಕ್ಕ ಕಾಳಾಪುರ, ಅಯ್ಯಮ್ಮ ವಣಕ್ಯಾಳ, ಶೋಭಾ ಕಾಖಂಡಕಿ, ಶಿವಮ್ಮ ಅಂಗಡಗೇರಿ, ಗೌರಮ್ಮ ಕರ್ಜಗಿ, ಈರಮ್ಮ ಹಿರೇಮಠ, ಯಮನಕ್ಕ ವಡ್ಡರ, ಸುರೇಖಾ ಕುಲಕರ್ಣಿ, ಅಂಬುಜಾ ಕುಲಕರ್ಣಿ, ಕಾಶೀಬಾಯಿ ತುಂಬಗಿ, ಗುರುಬಾಯಿ ಕಲಬುರ್ಗಿ, ಲೀಲಾವತಿ ಕುಂಟೋಜಿ, ವಿದ್ಯಾ ಪಾಟೀಲ ಸೇರಿದಂತೆ ತಾಲೂಕಿನ ವಿವಿಧೆಡೆಯಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತೆಯರು, ಸಹಾಯಕಿಯರು ಇದ್ದರು.
ಇದೇ ವೇಳೆ ಬ.ಸಾಲವಾಡಗಿಯ ಅಂಗನವಾಡಿ ಸಹಾಯಕಿ ಶಾಂತಮ್ಮ ಮೇಟಿ ನಿಧನ ಹಿನ್ನೆಲೆಯ ಕಾರ್ಯಕರ್ತೆಯರು ಮನವಿ ಸಲ್ಲಿಕೆಗೂ ಮುನ್ನ ನಡೆಸಲು ಉದ್ದೇಶಿಸಿದ್ದ ಪ್ರತಿಭಟನಾ ರ್ಯಾಲಿ ಕೈ ಬಿಟ್ಟು ನೇರವಾಗಿ ತಹಶೀಲ್ದಾರ್ ಕಚೇರಿಗೆ ಆಗಮಿಸಿ ಶಿರಸ್ತೇದಾರ್ ತೊನಶ್ಯಾಳ ಅವರಿಗೆ ಮನವಿ ಸಲ್ಲಿಸಿದರು. ಇದಕ್ಕೂ ಮುನ್ನ ಅಂಗನವಾಡಿ ಸಹಾಯಕಿಯ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.