ಅಂಗನವಾಡಿ ನೌಕರರ ಪ್ರತಿಭಟನಾ ಮೆರವಣಿಗ


Team Udayavani, Jan 19, 2018, 1:09 PM IST

vij-5.jpg

ವಿಜಯಪುರ: 42ನೇ ಭಾರತೀಯ ಕಾರ್ಮಿಕರ ಸಮಾವೇಶದ ನಿರ್ಣಯಗಳನ್ನು ಜಾರಿಗೆ ತರಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮಹಾಮಂಡಳಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಅಂಗನವಾಡಿ ನೌಕರರು ಪ್ರತಿಭಟನೆ ನಡೆಸಿದರು.

ನಗರದ ಸಿದ್ಧೇಶ್ವರ ದೇವಸ್ಥಾನದಿಂದ ಮೆರವಣಿಗೆ ಆರಂಭಿಸಿದ ಪ್ರತಿಭಟನಾಕಾರರು, ಮಹಾತ್ಮಾ ಗಾಂಧೀಜಿ ವೃತ್ತ, ಬಸವೇಶ್ವರ ವೃತ್ತ, ಡಾ| ಬಿ.ಆರ್‌.ಅಂಬೇಡ್ಕರ್‌ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಧರಣಿ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಜಿಲ್ಲಾಧ್ಯಕ್ಷೆ ನೀಲಮ್ಮ ಬೋರಾವತ್‌, ರಾಜ್ಯದಲ್ಲಿ 65,911 ಅಂಗನವಾಡಿ ಕೇಂದ್ರಗಳಿದ್ದು, 34 ಸಾವಿರ ಸ್ವಂತ ಕಟ್ಟಡಗಳಿವೆ. 26 ಸಾವಿರ ಅಂಗನವಾಡಿಗೆ ಸ್ವತಂ ಕಟ್ಟಡ ಭಾಗ್ಯ ದೊರೆತಿಲ್ಲ. ಮತ್ತೂಂದೆಡೆ ಸಾಧಕ-ಬಾಧಕ ಪರಾಮರ್ಶಿಸದೇ ಕಳೆದ ಅಕ್ಟೋಬರ್‌ 2ರಿಂದ ಮಾತೃಪೂರ್ಣ ಯೋಜನೆ
ಪ್ರಾರಂಭವಾಗಿದೆ. ಗರ್ಭಿಣಿ, ಬಾಣಂತಿಯರು ಅಂಗನವಾಡಿ ಕೇಂದ್ರಗಳಿಗೆ 3-4 ಕಿ.ಮೀ. ದೂರದಿಂದ ಅಲೆಯುತ್ತಿದ್ದಾರೆ.
ಮತ್ತೂಂದೆಡೆ ಶೇ.40 ರಷ್ಟು ಪೌಷ್ಟಿಕ ಆಹಾರದ ದುರುಪಯೋಗವಾಗುತ್ತಿದೆ ಎಂದು ಹರಿಹಾಯ್ದರು.

ಅಂಗನವಾಡಿ ನೌಕರರಿಗೆ ಮಾಸಿಕ 18 ಸಾವಿರ ರೂ. ವೇತನ ಹಾಗೂ 3 ಸಾವಿರ ರೂ, ನಿವೃತ್ತಿ ವೇತನ ನೀಡಬೇಕು. ಬಾಲ ವಿಕಾಸ ಸಮಿತಿಯ ಪುನರ್‌ ರಚನೆಗೆ ಸ್ಥಳೀಯ ಸಂಸ್ಥೆ ಸದಸ್ಯರನ್ನು ಖಾತೆ ತೆರೆಯಲು ಕಡ್ಡಾಯ ಮಾಡಿದ್ದನ್ನು ಹಿಂಪಡೆಯಬೇಕು.

ಅಂಗನವಾಡಿ ಕೇಂದ್ರದ ಕೆಲಸ ವೇಳೆಯನ್ನು ಬೆಳಗ್ಗೆ 9:30 ರಿಂದ ಮಧ್ಯಾಹ್ನ 1:30 ರವರೆಗೆ ನಿಗದಿ ಮಾಡಬೇಕು. ಮಿನಿ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಿ, ಸಹಾಯಕಿಯರನ್ನು ನೇಮಿಸಬೇಕು. ರಾಜ್ಯದ ಎಲ್ಲ ಅಂಗನವಾಡಿಗೆ ಸ್ವಂತ ಕಟ್ಟಡ, ಕುಡಿಯುವ ನೀರು, ಅನಿಲ ಸಿಲಿಂಡರ್‌, ಗರ್ಭಿಣಿ-ಬಾಣಂತಿಯರು ಅನುಕೂಲಕ್ಕೆ ಶೌಚಾಲಯ, ಪೀಠೊಪಕರಣ ಒದಗಿಸಬೇಕು ಎಂದು ಆಗ್ರಹಿಸಿದರು.

ಸಂಘಟನೆಯ ಪ್ರಮುಖರಾದ ಶೋಭಾ ಕಾಖಂಡಕಿ, ಅನಿತಾ ಲಮಾಣಿ, ನಿರ್ಮಲಾ ಕಾಂಬಳೆ, ಅಯ್ಯಮ್ಮ ವನಕಿಹಾಳ, ನಿಂಬೆಕ್ಕ ಕಾಳಾಪೂರ, ಮೈಬೂ ಬಾಗಲಕೋಟ ಸೇರಿದಂತೆ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಕೇಂದ್ರ ಸಚಿವ ಜಿಗಜಿಣಗಿ ಕಚೇರಿ ಎದುರು ನಿರಶನ
ವಿಜಯಪುರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ಕೇಂದ್ರ
ಸಚಿವ ರಮೇಶ ಜಿಗಜಿಣಗಿ ಅವರ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ನಗರದ ಬಾರಾಕಮಾನ್‌ ನಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಅಂಗನವಾಡಿ ನೌಕರರು, ಸ್ಟೇಶನ್‌ ರಸ್ತೆಯಲ್ಲಿರುವ ಕೇಂದ್ರ ಸಚಿವ ರಮೇಶ ಜಿಗಜಿಣಗಿ ಅವರ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆ ರಾಜ್ಯ ಕಾರ್ಯಾಧ್ಯಕ್ಷೆ ಶಾಂತಾ ಘಂಟಿ, ಕೇಂದ್ರ ಸರ್ಕಾರ ಬರುವ ಬಜೆಟ್‌ನಲ್ಲಿ ಅಂಗನವಾಡಿ ನೌಕರರ ಸಮಸ್ಯೆಗಳ ಕುರಿತು ಚರ್ಚಿಸಿ, ಅಗತ್ಯ ಸೌಲಭ್ಯ ಕಲ್ಪಿಸಬೇಕು. ಗೌರವಧನ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ಗೌರಮ್ಮ ಪಾಟೀಲ, ಭಾರತಿ ವಾಲಿ, ರಾಯಚೂರಿನ ಪದ್ಮಾವತಿ, ಸುನಂದಾ ನಾಯಕ, ಸುರೇಖಾ ರಜಪೂತ,
ಲಕ್ಷ್ಮಣ ಹಂದ್ರಾಳ, ಬಿಸಿಯೂಟದ ಗಿರಿಯಪ್ಪ ಸಿದ್ದಮ್ಮ ಮಾತನಾಡಿ, 45 ಎಲ್‌ಐಸಿ ಯ ಶಿಫಾರಸ್ಸುಗಳಾದ
(ಭಾರತೀಯ ಕಾರ್ಮಿಕ ಸಮ್ಮೇಳನ) ಸ್ಕೀಮ್‌ ಗಳಲ್ಲಿ ದುಡಿಯುತ್ತಿರುವವರನ್ನು ಕಾರ್ಮಿಕರೆಂದು ಪರಿಗಣಿಸಿ 18 ಸಾವಿರ ಕನಿಷ್ಠ ವೇತನ, ಸಾಮಾಜಿಕ ಭದ್ರತಾ ಸೌಲಭ್ಯಗಳಾದ ಕನಿಷ್ಠ 3 ಸಾವಿರ ರೂ. ನಿವೃತ್ತಿ ವೇತನ ನೀಡುವುದು ಸೇರಿದಂತೆ ಹಲವು ಸೌಲಭ್ಯ ನೀಡಬೇಕು ಎಂದು ಆಗ್ರಹಿಸಿದರು.

ಮನವಿ ಸ್ವೀಕರಿಸಿದ ಸಚಿವ ರಮೇಶ ಜಿಗಜಿಣಗಿ, ಅಂಗನವಾಡಿ ನೌಕರರ ಸಮಸ್ಯೆಗಳ ಇತ್ಯರ್ಥಕ್ಕೆ ಸಂಬಂಧಿಸಿದ ಇಲಾಖೆ ಸಚಿವರೊಂದಿಗೆ ಚರ್ಚಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಬಾಗಲಕೋಟೆಯ ಹಣಮಂತ ದಾಸರ, ವರಲಕ್ಷ್ಮೀ, ಸುರೇಖಾ ಯಾದಗಿರಿ, ಬಸಲಿಂಗಮ್ಮ, ಸುಶೀಲಾ ಹತ್ತಿ, ಶ್ರೀದೇವಿ ಚುಡೆ, ದಾನಮ್ಮ ಗುಗ್ಗರೆ, ಸುವರ್ಣ ಹಲಗಣಿ, ಅಶ್ವಿ‌ನಿ ತಳವಾರ, ಎಲ್‌.ವೈ. ನದಾಫ್‌, ಜಯಶ್ರೀ ಪೂಜಾರಿ, ಸರಸ್ವತಿ ಮಠ, ಸರೋಜಿನ ಪಾಟೀಲ, ಶೈಲಾ ಕಟ್ಟಿ, ಶೋಭಾ ಕೊಡತೆ, ದಾಕ್ಷಾಯಿಣಿ ಅವಟಿ ಇದ್ದರು.

ಟಾಪ್ ನ್ಯೂಸ್

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.