ಕೃಷಿಕರ ಬದುಕಿನ ಆಶಾಕಿರಣವಾದ ಅಂತರ ಬೆಳೆ ವಿಧಾನ .. ಏನಿದು?


Team Udayavani, Sep 9, 2021, 5:05 PM IST

antharabele

ಸಿಂದಗಿ: ನೈಸರ್ಗಿಕ ವೈಪರೀತ್ಯದ ಪರಿಣಾಮ ಅಲ್ಪ ಮಳೆ ಹಾಗೂ ಅಧಿಕ ಬಿಸಿಲು ಇರುವ ಬಯಲು ಸೀಮೆಯಲ್ಲಿ ಕೃಷಿ ಕಷ್ಟವಾಗುತ್ತಿದೆ. ಆರಂಭದಲ್ಲಿ ಸಾಂಪ್ರದಾಯಿಕ ಕೃಷಿ ಮತ್ತು ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿದ್ದರು. ಜನಸಂಖ್ಯೆ ಬೆಳವಣಿಗೆ ತಕ್ಕಂತೆ ಆಹಾರ ಉತ್ಪಾದನೆಯು ಹೆಚ್ಚು ಮಾಡಬೇಕಾಗುತ್ತದೆ. ತಾಂತ್ರಿಕತೆ ಬಳಕೆ ಮಾಡಬೇಕಾಗುತ್ತದೆ. ಅಲ್ಲದೇ ಕೃಷಿ ಪದ್ದತಿಯಲ್ಲಿ ಬದಲಾವಣೆ ಮಾಡುವ ಮೂಲಕ ಆಹಾರ ಉತ್ಪಾದನೆ ಹೆಚ್ಚಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಕೃಷಿಕರು ಆದಾಯ ಕೊಡುವಂತಹ ಅಂತರ ಬೆಳೆ ಕೃಷಿ ಪದ್ಧತಿ ಅನುಸರಿಸುತ್ತಿದ್ದಾರೆ.

ಅಂತರ ಬೆಳೆ ಒಂದೇ ಭೂಮಿಯಲ್ಲಿ ಎರಡು ಅಥವಾ ಹೆಚ್ಚಿನ ಬೆಳೆಗಳನ್ನು ಏಕಕಾಲದಲ್ಲಿ ಬೆಳೆಯುವ ಒಂದು ಕೃಷಿ ಪದ್ಧತಿಯಾಗಿದೆ. ಮುಖ್ಯವಾಗಿ ಅಂತರ ಬೆಳೆ ಬೆಳೆಯುವುದರಿಂದ ಒಂದೇ ಭೂಮಿಯಿಂದ ಹೆಚ್ಚಿನ ಆದಾಯವನ್ನು ರೈತ ಪಡೆಯುತ್ತಾನೆ. ಅಂತರ ಬೆಳೆಗಳು ಪರಸ್ಪರ ಬೆಳವಣಿಗೆ ಸಹ ಸಹಾಯ ಮಾಡುತ್ತದೆ.

ರೈತ ಅಂತರ ಬೆಳೆ ಬೆಳೆಯುವುದರಿಂದ ಸಾಕಷ್ಟು ಪ್ರಯೋಜನಗಳನ್ನು ಪಡೆಯುತ್ತಾನೆ. ಅಂತರ ಬೆಳೆ ಬೆಳೆಯುವುದರಿಂದ ಒಂದೆ ಕೃಷಿ ಭೂಮಿಯಲ್ಲಿ ಎರಡು ವಿಧ ಬೆಳೆ ಬೆಳೆದಂತಾಗುತ್ತದೆ. ಅಲ್ಲದೇ ಬಳಸುವ ರಾಸಾಯನಿಕ ರಸಗೊಬ್ಬರ ಬಳಕೆಯಲ್ಲಿ ಕಡಿತವಾಗುತ್ತದೆ. ಪೋಷಕಾಂಶಗಳು ಪರಸ್ಪರ ಹಂಚಿಕೆಯಾಗುವುದರಿಂದ ಬೆಳೆ ಉತ್ಪನ್ನ ಹೆಚ್ಚಿಸುತ್ತದೆ. ಕಳೆ ನಿಗ್ರಹ, ಮತ್ತು ಕೀಟಗಳು ಮತ್ತು ರೋಗಗಳಿಗೆ ತುತ್ತಾಗುವ ಸಾಧ್ಯತೆ ಕಡಿಮೆಯಾಗುತ್ತದೆ.

ರಾಷ್ಟ್ರೀಯ ಆಹಾರ ಭದ್ರತಾ ಯೋಜನೆ ಅಡಿಯಲ್ಲಿ ಪ್ರಾತ್ಯಕ್ಷಿಕೆ ಕೈಗೊಂಡ ಕ್ಷೇತ್ರಗಳಿಗೆ ಸಿಂದಗಿ, ಆಲಮೇಲ ಮತ್ತು ದೇವರ ಹಿಪ್ಪರಗಿ ತಾಲೂಕಿನಲ್ಲಿ ಸಹಾಯಕ ಕೃಷಿ ನಿರ್ದೇಶಕ ಡಾ.ಎಚ್.ವಾಯ್. ಸಿಂಗೆಗೋಳ, ಕೃಷಿ ಅಧಿಕಾರಿ ಶಿವಾನಂದ ಹೂವಿನಹಳ್ಳಿ, ಸಹಾಯಕ ಕೃಷಿ ನಿರ್ದೇಶಕ ಮಹದೇವಪ್ಪ ಏವೂರ್, ಕೃಷಿ ಅಧಿಕಾರಿ ಸೋಮನಗೌಡ ಬಿರಾದಾರ ಸೇರಿದಂತೆ ಇನ್ನೂಳಿದ ಕೃಷಿ ಅಧಿಕಾರಿಗಳು ನಿರಂತರವಾಗಿ ಬೇಟಿ ನೀಡಿ ರೈತರಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ.

ಅಂತರ ಬೆಳೆ ಬೆಳೆಯುವುದು ಒಂದು ಕೃಷಿ ಪದ್ಧತಿಯಲ್ಲೊಂದು. ಒಂದೇ ಸಮಯದಲ್ಲಿ ಮತ್ತು ಒಂದೇ ಭೂಮಿಯಲ್ಲಿ ಒಂದಕ್ಕಿಂತ ಹೆಚ್ಚು ಬೆಳೆಗಳನ್ನು ನೆಡುವುದು ಅಥವಾ ಬೆಳೆಸುವುದು ಒಳಗೊಂಡಿರುವ ವಿಧಾನವಾಗಿದೆ. ಅಂತರ ಬೆಳೆ ಬೆಳೆಯಲು ರೈತರು ಮುಂದಾಗಬೇಕು. ಅಂತರ ಬೆಳೆ ಪದ್ಧತಿಯಿಂದ ಅನುಸರಿಸುವುದರಿಂದ ರೈತರು ಆರ್ಥಿಕತೆ ಹೆಚ್ಚಿಸಿಕೊಳ್ಳಲು ಸಾಧ್ಯ. ಎಂದು  ಸಿಂದಗಿ ಸಹಾಯಕ ಕೃಷಿ ನಿರ್ದೇಶಕರಾದ  ಡಾ.ಎಚ್.ವಾಯ್. ಸಿಂಗೆಗೋಳ ಹೇಳಿದ್ದಾರೆ.

ಇದನ್ನೂ ಓದಿ:ನನ್ನ ಹೇಳಿಕೆಯನ್ನು ಉದ್ಧೇಶಪೂರ್ವಕವಾಗಿ ತಿರುಚಿದ್ದರ ಬಗ್ಗೆ ನನಗೆ ಆಶ್ಚರ್ಯವಿಲ್ಲ : ಮುಫ್ತಿ  

ಇಲಾಖೆಯ ಶಿಫಾರಸಿನ ಮೇಲೆ ಅಂತರ ಬೆಳೆ ಬೆಳೆಯುವ ಮೂಲಕ ರೈತರು ಆದಾಯ ಹೆಚ್ಚಿಸಿಕೊಳ್ಳಬೇಕು. ಒಂದೇ ಸಮಯಕ್ಕೆ ಒಂದೇ ಭೂಮಿಯಲ್ಲಿ ಒಂದಕ್ಕಿಂತ ಹೆಚ್ಚು ಬೆಳೆಗಳನ್ನು ಬೆಳೆಯಲು ಸಾಧ್ಯ. ಆದ್ದರಿಂದ ರೈತರು ಅಂತರ ಬೆಳೆ ಬೆಳೆಯಲು ಮುಂದಾಗಬೇಕು. ಕಬ್ಬು, ತೊಗರೆ, ಹತ್ತಿ ಮುಂತಾದ ಬೆಳೆಗಳಲ್ಲಿ ಅಂತರ ಬೆಳೆ ಬೆಳೆದು ಆರ್ಥಿಕತೆ ಹೆಚ್ಚಿಸಿಕೊಳ್ಳಬೇಕು. ಎಂದು ಸಿಂದಗಿ ರೈತ ಸಂಪರ್ಕ ಕೇಂದ್ರದ  ಕೃಷಿ ಅಧಿಕಾರಿ ಶಿವಾನಂದ ಹೂವಿನಹಳ್ಳಿ ತಿಳಿಸಿದ್ದಾರೆ.

ಅಂತರ ಬೆಳೆಯುವಿಕೆಯು ಮಣ್ಣಿಗೆ ಹಲವಾರು ರೀತಿಯಲ್ಲಿ ಪ್ರಯೋಜನವನ್ನು ನೀಡುತ್ತದೆ. ಎರಡನೇ ಬೆಳೆ ಒದಗಿಸುವ ಹೆಚ್ಚುವರಿ ಮಣ್ಣಿನ ಹೊದಿಕೆ ಸವೆತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸಸ್ಯಗಳು ಹೆಚ್ಚುವರಿ ನೀರನ್ನು ನೆನೆಸಲು ಸಹಾಯ ಮಾಡುತ್ತದೆ. ಆದ್ದರಿಂದ ರೈತರು ಅಂತರ ಬೆಳೆ ಬೆಳೆಯಲು ಮುಂದಾಗಿ ಆರ್ಥಿಕತೆ ಹೆಚ್ಚಿಸಿಕೊಳ್ಳಬೇಕು ಎಂದು ರೈತ ಸಂಪರ್ಕ ಕೇಂದ್ರ, ದೇವರಹಿಪ್ಪರಗಿ. ಕೃಷಿ ಅಧಿಕಾರಿ, ಸೋಮನಗೌಡ ಬಿರಾದಾರ ಅಭಿಪ್ರಾಯಪಟ್ಟಿದ್ದಾರೆ.

ರಮೇಶ ಪೂಜಾರ

ಟಾಪ್ ನ್ಯೂಸ್

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

13

Kundapura: ಮನೆಗೆ ನುಗ್ಗಿ ಚಿನ್ನಾಭರಣ ಕಳವು

POlice

Brahmavar: ಬೆಳ್ಮಾರು; ಕೋಳಿ ಅಂಕಕ್ಕೆ ದಾಳಿ

dw

Kundapura: ಮಲಗಿದಲ್ಲೇ ವ್ಯಕ್ತಿ ಸಾವು

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.