![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Apr 21, 2022, 2:50 PM IST
ವಿಜಯಪುರ: ಜಿಲ್ಲೆಯ ಕೊಲ್ಹಾರ ತಾಲೂಕಿನ ಚಿರಲದಿನ್ನಿ ಗ್ರಾಮ ಬಳಿ ಸೋಮವಾರ ಸಿಡಿಲು ಬಡಿದು ಚಿಕ್ಕೋಡಿ ಮೂಲದ ಕುರಿಗಾರರು ಹಾಗೂ ಕುರಿಗಳು ಮೃತಪಟ್ಟಿವೆ. ಮೃತರ ಕುಟುಂಬಗಳಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಜಿಲ್ಲಾ ಕುರಿಗಾರ ಸಂಘದಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಜೋಡಕುರಳಿ ಗ್ರಾಮದ ಸಂಚಾರಿ ಕುರಿಗಾರರಾದ ಬೀರಪ್ಪ ಬಡೆಗೋಳ, ಮಹೇಶ ಬಡೆಗೊಳ ಮೃತಪಟ್ಟಿದ್ದಾರೆ. ಅಲ್ಲದೆ ಅವರ 9 ಕುರಿಗಳು ಮೃತಪಟ್ಟಿವೆ. ಇವರನ್ನೇ ನಂಬಿದ್ದ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಸಂಚಾರಿ ಬಡ ಕುರಿಗಾರರ ಕುಟುಂಬಗಳಿಗೆ ಜಿಲ್ಲಾಡಳಿತ ಹಾಗೂ ಸರ್ಕಾರ ಕೂಡಲೇ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ನಿಧಿಯಿಂದ ತಲಾ 5 ಲಕ್ಷ ರೂ. ಹಾಗೂ ಸಾವಿಗೀಡಾದ ಪ್ರತಿ ಕುರಿಗೆ 15 ಸಾವಿರ ರೂ.ದಂತೆ ಪರಿಹಾರ ನೀಡಬೇಕು ಎಂದು ಆಗ್ರಹಿಸಲಾಯಿತು.
ಕುರಿಗಾರ ಸಂಘದ ಜಿಲ್ಲಾಧ್ಯಕ್ಷ ಬೀರಪ್ಪ ಜುಮನಾಳ, ರಾಯಣ್ಣ ಯುವ ಸೇನೆಯ ಸಂಸ್ಥಾಪಕ ಅಧ್ಯಕ್ಷ ದೇವಕಾಂತ ಬಿಜ್ಜರಗಿ, ಬಸವರಾಜ ಕಂಕಣವಾಡಿ, ನಿವರ್ತಿ ಯರನಾಳ, ಗೋಲ್ಲಾಳೇಶ್ವರ ಕಗ್ಗೂಡ, ಪರಶುರಾಮ ರೋಣಿಹಾಳ, ದುಂಡಪ್ಪ ಗೊಳಸಂಗಿ, ಸಂತೋಷ ಬೂದಿಹಾಳ ಇನ್ನಿತರರಿದ್ದರು.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
You seem to have an Ad Blocker on.
To continue reading, please turn it off or whitelist Udayavani.