ಐವರು ಸರಗಳ್ಳರ ಬಂಧನ: 13 ಲಕ್ಷ ಮೌಲ್ಯದ ಚಿನ್ನಾಭರಣ ವಶ
Team Udayavani, Feb 25, 2019, 9:47 AM IST
ವಿಜಯಪುರ: ನಗರದಲ್ಲಿ ನಡೆದಿದ್ದ 10 ಸರಗಳ್ಳತನ ಪ್ರಕರಣ ಪತ್ತೆ ಮಾಡಿರುವ ಪೊಲೀಸರು, ಕಳ್ಳತನ ಕೃತ್ಯದಲ್ಲಿ ಪಾಲ್ಗೊಂಡಿದ್ದ ಆರೋಪದಲ್ಲಿ ಎರಡು ಪ್ರತ್ಯೇಕ ತಂಡಗಳ ಐವರನ್ನು ಬಂಧಿಸುವ ಮೂಲಕ 13,46,000 ರೂ. ಮೌಲ್ಯದ ವಸ್ತುಗಳನ್ನು ಜಫ್ತು ಮಾಡಿಕೊಂಡಿದ್ದಾರೆ.
ರವಿವಾರ ಚಿಂತನ ಹಾಲ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸರಗಳ್ಳರ ಬಂಧನ ಮಾಹಿತಿ ನೀಡಿದ ಎಸ್ಪಿ ಪ್ರಕಾಶ ನಿಕ್ಕಂ, ಗಾಂಧಿ ಚೌಕ್ ಪೊಲೀಸ್ ಠಾಣಾ ಪೊಲೀಸರು ಗಸ್ತು ಸಮಯದಲ್ಲಿ ಬಂಧಿಸಿರುವ ನವಬಾಗ ನಿವಾಸಿ ತೌಸೀಪ್ ಖಾಜಾಸಾಬ ಬಾಗವಾನ (21) ಹಾಗೂ ಹಕೀಂಚೌಕ್ ನಿವಾಸಿ ಅಜಮಾನ್ ಇಮಿಯಾಜ್ ಖುರೇಷಿ (22) ಎಂದು ಗುರುತಿಸಲಾಗಿದೆ. ಸದರಿ ಆರೋಪಿಗಳು ಆದರ್ಶನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 1 ಹಾಗೂ ಗಾಂಧಿಚೌಕ್ ಠಾಣೆ ವ್ಯಾಪ್ತಿಯಲ್ಲಿ 3 ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದನ್ನು ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ. ಬಂಧಿ ತರಿಂದ 99 ಗ್ರಾಂ
ಬಂಗಾರದ ಆಭರಣ, ಕೃತ್ಯಕ್ಕೆ ಬಳಸಿದ ಬೈಕ್ ಸೇರಿದಂತೆ 3.46 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಫ್ತಿ ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದರು.
ಇನ್ನು ಗೋಲಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದಿರಾನಗರ ಬಳಿ ಗಸ್ತು ತಿರುಗುತ್ತಿದ್ದ ಪೊಲೀಸರಿಗೆ ಸೆರೆ ಸಿಕ್ಕಿರುವ ಮೂವರು ಸರಗಳ್ಳತನದ ಆರೋಪಿಗಳನ್ನು ಪುಲಕೇಶಿ ನಗರ ನಿವಾಸಿ ಮೊಹ್ಮದ್ ಖಾಲೀದ್ ಮೊಹ್ಮದ ಶಫಿಕ್ ಇನಾಮದಾರ (24), ರಜಪೂತ ಗಲ್ಲಿ ನಿವಾಸಿ ಅಮಿತ್ ರಾಮನಗೌಡ ಜಂಬಗಿ (21) ಹಾಗೂ ಕೆಎಚ್‌ಬಿ ನಿವಾಸಿ ಮೊಹ್ಮದ್ ಆರೋಫ್ ಶೇಖ ಅಮೀರ್ ಯರನಾಳ (21) ಎಂದು ಗುರುತಿಸಲಾಗಿದೆ.
ಸದರಿ ಆರೋಪಿಗಳು ಜಲನಗರ, ಎಪಿಎಂಸಿ, ಆದರ್ಶನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಲಾ ಒಂದು ಸರಗಳ್ಳತನ ಪ್ರಕರಣ, ಗೋಲಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಸರಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದನ್ನು ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ. ಬಂಧಿತರಿಂದ 210 ಗ್ರಾಂ ಬಂಗಾರದ ಆಭರಣ, ಕೃತ್ಯಕ್ಕೆ ಬಳಸಿದ 3 ಮೋಟಾರ್ ಸೈಕಲ್ ಸೇರಿದಂತೆ 10 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಫ್ತು ಮಾಡಿಕೊಳ್ಳಲಾಗಿದೆ ಎಂದು ವಿವರ ನೀಡಿದರು.
ವಶಕ್ಕೆ ಪಡೆದಿರುವ ಚಿನ್ನಾಭರಣಗಳನ್ನು ಅವುಗಳ ಮಾಲೀಕರಿಗೆ ಪೊಲೀಸ್ ಅಧಿಕಾರಿಗಳು ಹಸ್ತಾಂತರಿಸಿದರು. ನಗರದ ಜನತೆಯ ನಿದ್ದೆಗೆಡಿಸಿದ್ದ ಸರಗಳ್ಳತನ ಪ್ರಕರಣಗಳನ್ನು ಬೇಧಿಸುವಲ್ಲಿ ಎಎಸ್‌ಪಿ ನೇಮಗೌಡ ಹಾಗೂ ಡಿವೈಎಸ್‌ಪಿ ಅಶೋಕ ನೇತೃತ್ವದ ತನಿಖಾ ತಂಡ ಯಶಸ್ವಿಯಾಗಿದೆ. ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸ್ ಅಧಿಕಾರಿಗಳಾದ ರವೀಂದ್ರ ನಾಯ್ಕೋಡಿ, ಸುನೀಲ ಕಾಂಬಳೆ, ಟಿ.ಬಿ. ನೀಲಗಾರ, ಸಂಜಯಕುಮಾರ ಕಲ್ಲೂರ, ವಿನೋದ ದೊಡಮನಿ, ಆರೀಫ್ ಮುಶಾಪುರಿ, ಸತೀಶ ಕಣಮೇಶ್ವರ, ಸಿಬ್ಬಂದಿಗಳಾದ ಆರ್.ಎ. ಪತ್ತಾರ, ಬಿ.ಕೆ. ಗುಡಿಮನಿ, ಎಚ್.ಎಚ್. ಜಮಾದಾರ, ಎನ್.ಕೆ.ಮುಲ್ಲಾ, ಎಚ್.ಎಚ್. ಮುಲ್ಲಾ, ಎಂ.ಆರ್. ಮಾಳಗೊಂಡ, ಆರ್. ಎಸ್. ಪೂಜಾರಿ, ಎಸ್.ವಿ. ಜೋಗಿನ, ವಿ.ಎನ್. ಶಹಾಪುರ, ಬಿ.ಎಂ. ಪವಾರ, ಎಸ್.ಎಸ್. ಮಾಳೇಗಾಂವ, ಪುಂಡಲೀಕ ಬಿರಾದಾರ, ಶಿವು ಅಳ್ಳಿಗಿಡದ, ಸಿದ್ದು ದಾನಪ್ಪಗೋಳ, ಬಿ.ಎಂ. ಶೇಖ್, ಸಂಜಯ ಬಡಚಿ ಅವರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿರುವ ಎಸ್ಪಿ ಪ್ರಕಾಶ ನಿಕ್ಕಂ, ಬಹುಮಾನ ಘೋಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.