ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ: 30 ಲಕ್ಷ ರೂ. ಮೌಲ್ಯದ 50 ಬೈಕ್ ವಶ
Team Udayavani, Oct 22, 2020, 8:15 PM IST
ವಿಜಯಪುರ: ಬೈಕ್ ಕಳ್ಳತನ ಮಾಡುತ್ತಿದ್ದ ನಾಲ್ವರು ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸಿರುವ ಜಿಲ್ಲೆಯ ಪೊಲೀಸರು, ಬಂಧಿತರಿಂದ 30 ಲಕ್ಷ ರೂ. ಮೌಲ್ಯದ 50 ಬೈಕ್‍ಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದ ಎಸ್ಪಿ ಅನುಪಮ್ ಅಗರವಾಲ್, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಒಂದೂವರೆ ವರ್ಷದಿಂದ ನಡೆದಿದ್ದ ಬೈಕ್ ಕಳ್ಳತನ ಪ್ರಕರಣಗಳನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುವ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಯಾದಗಿರಿ ಜಿಲ್ಲೆಯ ಬೀಳೇಬಾವಿ ಗ್ರಾಮದ ಮೌನೇಶ ಗುರಣ್ಣ ಬಡಿಗೇರ (28), ನಿಂಗಣ್ಣ ಬಸಪ್ಪ ಪೂಜಾರಿ (38), ಕೋಡೇಕಲ್ ಗ್ರಾಮದ ಮೀರಸಾಬ್ ರಜಾಕಸಾಬ್ ಬಳಿಗಾರ (29) ಹಾಗೂ ಮೆಹಬೂಬ್ ತಾಹೀರ ಹುಸೇನ್ ಬಳಿಗಾರ (28) ಎಂದು ಗುರುತಿಸಲಾಗಿದೆ. ಬೈಕ್ ಕಳ್ಳತನ ಪ್ರಕರಣದಲ್ಲಿ ಬಂಧಿತವಾಗಿರುವ ಆರೋಪಿಗಳು ನಕಲಿ ಕೀ ಬಳಸಿ ವಿಶೇಷವಾಗಿ ಹಿರೋ ಹೋಂಡಾ ಸ್ಪ್ಲೆಂಡರ್ ವಾಹನಗಳನ್ನೇ ಹೆಚ್ಚಾಗಿ ಕಳ್ಳತನ ಮಾಡಿದ್ದಾರೆ ಎಂದು ವಿವರಿಸಿದರು.
ಎಎಸ್‍ಪಿ ಡಾ.ಶ್ರೀರಾಮ ಅರಸಿದ್ಧಿ ನೇತೃತ್ವದಲ್ಲಿ ಡಿಎಸ್ಪಿ ಶಾಂತವೀರ, ಆನಂದ ವಾಘ್ಮೋಡೆ, ಶಿವಾಜಿ ಪವಾರ, ಗಂಗೂ ಬಿರಾದಾರ ಅವರಿದ್ದ ತನಿಖಾ ತಂಡ ರಚನೆ ಪ್ರಕಣ ಬೇಧಿಸಿ, ಬೈಕ್‍ಗಳ ಸಮೇತ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಸದರಿ ತನಿಖಾ ತಂಡಕ್ಕೆ ಬಹುಮಾನ ಘೋಷಿಸಲಾಗಿದೆ ಎಂದು ಎಸ್.ಪಿ. ಅನುಪಮ್ ಅಗರವಾಲ್ ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.