ಹಿಂದುತ್ವದ ವಿಷಯದಲ್ಲಿ ಕಾಂಗ್ರೆಸ್ ಗೆ ವಿನಾಶಕಾಲೇ ವಿಪರೀತ ಬುದ್ಧಿ: ಅರುಣ್ ಸಿಂಗ್
Team Udayavani, Nov 8, 2022, 3:12 PM IST
ವಿಜಯಪುರ: ಹಿಂದುತ್ವ ವಿರೋಧಿ ನಡೆಯಿಂದಲೇ ದೇಶದಲ್ಲಿ ಕಾಂಗ್ರೆಸ್ ವಿನಾಶದ ಅಂಚಿಗೆ ತಲುಪಿದೆ. ವಿನಾಶಕಾಲೇ ವಿಪರೀಪ ಬುದ್ಧಿ ಎನ್ನುಂವತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿರುವ ಸತೀಶ ಜಾರಕಿಹೊಳಿ ಅದನ್ನು ಮುಂದುವರೆಸುತಿದ್ದಾರೆ ಎಂದು ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.
ಮಂಗಳವಾರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸತೀಶ ಜಾರಕಿಹೊಳಿ ಅವರು ಪದೇ ಪದೇ ಹಿಂದು ಧರ್ಮವನ್ನೇ ಗುರಿಯಾಗಿಸಿಕೊಂಡು ಅವಮಾನಿಸುತ್ತಲೇ ಸಾಗಿದ್ದಾರೆ. ಇದೀಗ ಹಿಂದು ಅಶ್ಲೀಲ ಎಂಬ ವಿವಾದ ಸೃಷ್ಟಿಸಿ ಹಿಂದುತ್ವವನ್ನು ಅಪಮಾನಿಸಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಹಿಂದುತ್ವವನ್ನು ಅಪಮಾನಿಸುವುದೇ ಆದ್ಯತೆ ಎನಿಸಿದೆ ಎಂದು ಹರಿಹಾಯ್ದರು.
ಹಿಂದುತ್ವವಕ್ಕಾಗಿ ಗೂಗಲ್‍ನಲ್ಲಿ ಹುಡುಕುವ ಅಗತ್ಯವಿಲ್ಲ, ಬದಲಾಗಿ ಆದ್ಯಾತ್ಮದ ಧ್ಯಾನದಿಂದ ಅಧ್ಯಯನ ಮಾಡಿದರೆ ನಮ್ಮ ಸಂಸ್ಕೃತಿ ಹಾಗೂ ಜೀವನವಾದ ಹಿಂದುತ್ವದ ದರ್ಶನವಾಗುತ್ತದೆ. ಭಾರತೀಯರ ಪಾಲಿಗೆ ಹಿಂದುತ್ವ ಎಂಬುದು ಗರ್ವದ ಪ್ರತೀಕ. ಹಿಂದುತ್ವದ ವಿಷಯದಲ್ಲಿ ಕಾಂಗ್ರೆಸ್ ನಾಯಕರು ಬೇರೆ ಬೇರೆ ವ್ಯಾಖ್ಯಾನ ನೀಡುವ ಮೂಲಕ ಅಪಮಾನ ಮಾಡುವ ಪ್ರವೃತ್ತಿ ಬೆಳೆಸಿಕೊಂಡಿದ್ದಾರೆ ಎಂದು ಟೀಕಿಸಿದರು.
ಈಗಾಗಲೇ ರಾಜ್ಯ ವಿಧಾನಸಭೆ ಚುನಾವಣೆಗಾಗಿ ಸಿದ್ಧತೆ ಭಾಗವಾಗಿ ವಿವಿಧ ರೀತಿಯಲ್ಲಿ ಪಕ್ಷದ ಸಂಘಟನೆ ನಡೆದಿದೆ. ಸಿಂದಗಿ ಉಪ ಚುನಾವಣೆಯಲ್ಲಿ ಅಭೂತಪೂರ್ವ ಬೆಂಬಲ ನೀಡಿ ಬಿಜೆಪಿ ಪಕ್ಷವನ್ನು ಗೆಲ್ಲಿಸಿರುವ ಇಲ್ಲಿನ ಜನರು, ಭವಿಷ್ಯದಲ್ಲಿ ನಡೆಯುವ ಚುನಾವಣೆಯಲ್ಲೂ ವಿಜಯಪುರ ಜಿಲ್ಲೆಯ ಅತ್ಯಧಿಕ ಸ್ಥಾನ ಗೆಲ್ಲಿಸುವ ವಿಶ್ವಾಸವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.