7 ತಾಸು ವಿದ್ಯುತ್ ಪೂರೈಸಲು ಆಗ್ರಹಿಸಿ ಧರಣಿ
Team Udayavani, Mar 29, 2022, 3:32 PM IST
ಬಸವನಬಾಗೇವಾಡಿ: ಪಂಪ್‌ಸೆಟ್‌ಗಳಿಗೆ ಹಗಲು ಹೊತ್ತಿನಲ್ಲಿ ನಿರಂತರ 7 ತಾಸು ಪೂರ್ಣ ಪ್ರಮಾಣದ ವಿದ್ಯುತ್ ಸರಬುರಾಜು ಮಾಡಬೇಕೆಂದು ಆಗ್ರಹಿಸಿ ಅಖಂಡ ಕರ್ನಾಟಕ ರಾಜ್ಯ ರೈತ ಸಂಘ ಪಟ್ಟಣದ ವಿದ್ಯುತ್ ವಿಭಾಗೀಯ ಕಚೇರಿ ಮುಂದೆ ಧರಣಿ ನಡೆಸಿತು.
ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಜಿಲ್ಲೆಯ ಇಂಡಿ, ಸಿಂದಗಿ, ಮುದ್ದೇಬಿಹಾಳ ಹಾಗೂ ಪಟ್ಟಣದ ಬಾಗಲಕೋಟೆ ಜಿಲ್ಲೆಯಲ್ಲಿ ಹಗಲು ಹೊತ್ತು ನಿರಂತರ 7 ತಾಸು ವಿದ್ಯುತ್ ಪೂರೈಸಲಾಗುತ್ತದೆ. ಆದರೆ ಬಸವನಬಾಗೇವಾಡಿ ತಾಲೂಕಿಗೆ ಮಾತ್ರ ಯಾಕೆ ಈ ತಾರತಮ್ಯ ಎಂದು ಪ್ರಶ್ನಿಸಿದರು.
ಹಗಲು ಹೊತ್ತಿನಲ್ಲಿ ನಿರಂತರ 7 ತಾಸು ವಿದ್ಯುತ್ ಪೂರೈಸಬೇಕೆಂದು ಆದೇಶವಿದೆ. ಆದರೆ ಬಸವನಬಾಗೇವಾಡಿ ತಾಲೂಕಿನ ಹೆಸ್ಕಾಂ ಇಲಾಖೆ ಅಧಿಕಾರಿಗಳು ಹಗಲು ಮತ್ತು ರಾತ್ರಿ ಕೇವಲ 2 ತಾಸು ವಿದ್ಯುತ್ ನೀಡುತ್ತಿದ್ದು. ಇದರಿಂದ ರೈತರಿಗೆ ತೊಂದರೆಯಾಗುತ್ತಿದೆ. ಕಳೆದ ವರ್ಷ ಅಕಾಲಿಕ ಮಳೆಯಿಂದ ರೈತರ ಬೆಳೆ ಹಾಳಾಗಿದೆ. ಈಗ ಅಲ್ಪ ಸ್ವಲ್ಪ ಬೆಳೆಯನ್ನು ರೈತರು ಪಡೆಯಬೇಕಾದರೆ ವಿದ್ಯುತ್‌ನ ಸಮಸ್ಯೆಯಿಂದ ಅದು ಕೂಡಾ ಆಗುತ್ತಿಲ್ಲ ಎಂದು ಹೇಳಿದರು.
ತಕ್ಷಣ ಸಂಬಂಧಪಟ್ಟ ಅಧಿಕಾರಿಗಳು ಬಸವನಬಾಗೇವಾಡಿ ತಾಲೂಕಿಗೆ ಹಗಲು ಹೊತ್ತಿನಲ್ಲಿ ನಿರಂತರ 7 ತಾಸ್ ವಿದ್ಯುತ್ ಪೂರೈಕೆ ಮಾಡುವರೆಗೂ ನಮ್ಮ ಈ ಧರಣಿ ಸತ್ಯಾಗ್ರಹ ಕೈ ಬಿಡಲ್ಲ ಎಂದರು.
ಧರಣಿಯಲ್ಲಿ ಚನ್ನಬಸಪ್ಪ ಸಿಂಧೂರ, ಹೊನಕೇರಪ್ಪ ತೆಲಗಿ, ವಿಠ್ಠಲ ಬಿರಾದಾರ, ಶ್ರೀಶೈಲ ಸಾಸನೂರ, ಬಸವನಗೌಡ ಬಿರಾದಾರ, ಗುರಲಿಂಗಪ್ಪ ಪಡಸಲಗಿ, ಶಂಕರಪ್ಪ ಹಚಡದ, ಬಸವರಾಜ ಸುಂಟಾಣಿ, ಸಂಗಪ್ಪ ಪಡಸಲಗಿ, ರಾಯಪ್ಪ ದಳವಾಯಿ, ಗುರುಣ್ಣಗೌಡ ಬಿರಾದಾರ, ಪರಶುರಾಮ ದೊಡ್ಡಮನಿ, ಎಂ.ಜಿ. ಪಾಟೀಲ ಸೇರಿದಂತೆ ಅನೇಕರು ಭಾಗವಹಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.