ಪೊಲೀಸ್ ಲಾಠಿಚಾರ್ಜ್ ಖಂಡಿಸಿ ಎವೈಡಿವೈಒ ಪ್ರತಿಭಟನೆ
Team Udayavani, Sep 7, 2020, 4:58 PM IST
ವಿಜಯಪುರ: ಮಧ್ಯಪ್ರದೇಶ ರಾಜ್ಯದ ಬಿಜೆಪಿ ಸರ್ಕಾರ ಉದ್ಯೋಗಕ್ಕಾಗಿ ಹೋರಾಟ ನಡೆಸಿದ್ದ ಪ್ರತಿಭಟನಾ ನಿರತ ನಿರುದ್ಯೋಗಿಗಳ ಮೇಲೆ ಲಾಠಿ ಪ್ರಹಾರ ನಡೆಸಿದ ಕ್ರಮ ಖಂಡಿಸಿ ಎವೈಡಿವೈಒ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಈ ವೇಳೆ ಸಂಘಟನೆ ಜಿಲ್ಲಾಧ್ಯಕ್ಷ ಸಿದ್ದಲಿಂಗಬಾಗೇವಾಡಿ ಮಾತನಾಡಿ, ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ದೇಶದಾದ್ಯಂತ 2.7 ಲಕ್ಷ ಕಾರ್ಖಾನೆಗಳು ಮುಚ್ಚಲ್ಪಟ್ಟಿದ್ದು 12 ಕೋಟಿ ಉದ್ಯೋಗ ನಷ್ಟವಾಗಿವೆ. ಮತ್ತೂಂದೆಡೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಎಸ್‌ಎಸ್‌ಸಿ, ರೈಲ್ವೆ, ಶಿಕ್ಷಕರು ಮತ್ತು ಪೊಲೀಸ್ ನೇಮಕಾತಿ ಪರೀಕ್ಷೆಯ ಫಲಿತಾಂಶ ಘೋಷಿಸದೇ ವಿಳಂಬ ಮಾಡುತ್ತಿದೆ. ಆಡಳಿತ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುವ ಪ್ರಯತ್ನವಾಗಿ ಪ್ರತಿಭಟನೆಯಲ್ಲಿ ತೊಡಗಿದವರ ಮೇಲೆ ಮಧ್ಯಪ್ರದೇಶ ಸರ್ಕಾರ ಪೊಲೀಸರಿಂದ ಲಾಠಿ ಪ್ರಹಾರ ಮಾಡಿಸಿದ್ದು ಖಂಡನೀಯ ಎಂದರು.
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ ಅವರಿಗೆ ಪ್ರತಿಭಟನಾಕಾರರು ಸಮಸ್ಯೆ ನಿವೇದಿಸಿಕೊಳ್ಳುವ ಮನವಿ ಪತ್ರ ಸಲ್ಲಿಸಲು ಮುಂದಾದ ಸಂದರ್ಭದಲ್ಲಿ ಅಹವಾಲು ಕೇಳುವ ಬದಲು, ಪೊಲೀಸರಿಂದ ಲಾಠಿಚಾರ್ಜ್ ಮಾಡಿಸಿದ್ದಾರೆ. ಘಟನೆಯಲ್ಲಿ ಅನೇಕ ಹೋರಾಟಗಾರರು ಗಾಯಗೊಂಡಿದ್ದು ಎಐಡಿವೈಒ ಮಧ್ಯಪ್ರದೇಶ ರಾಜ್ಯ ಕಾರ್ಯದರ್ಶಿ ಪ್ರಮೋದ್ ನಾಮದೇವ್ ಸೇರಿದಂತೆ ಸಂಘಟನೆಯ ನೂರಾರು ಕಾರ್ಯಕರ್ತರ ವಿರುದ್ಧ ಪೊಲೀಸ್ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಕೂಡಲೇ ಮಧ್ಯಪ್ರದೇಶ ಸರ್ಕಾರ ಬಂಧಿತರ ವಿರುದ್ಧದ ದೂರು ಹಿಂಪಡೆದು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಪಾಂಡುರಂಗ ಉಪ್ಪಾರ, ಬಾಳು ಜೇವೂರ, ರವಿ ಹತ್ತಳ್ಳಿ, ಶರಣು ಶಹಾಪುರ, ಲಾಯಪ್ಪ ಸುಣಗಾರ, ಚನ್ನಮಲ್ಲಯ್ಯ ಮಠಪತಿ, ಎಸ್.ಡಿ. ಕುದರಿ, ಬಿ.ಎಸ್. ಹಿಪ್ಪರಗಿ, ಶಂಭುಲಿಂಗ, ಆರ್. ವೈ. ಡಾಂಗಿ, ಸಿ.ಎಂ. ಮಸ್ಕಿ, ಅಶೋಕ ಬೂದಿಹಾಳ, ಸುರೇಶ ಕವಡಿಮಟ್ಟಿ ಮುಂತಾದವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
T20 series: ಪಾಕಿಸ್ಥಾನಕ್ಕೆ ವೈಟ್‌ವಾಶ್ ಟಿ20: ಆಸ್ಟ್ರೇಲಿಯ 3-0 ಜಯಭೇರಿ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
BGT 2024: ಐಪಿಎಲ್ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್!
Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.