B.L.D.E. ಸಂಸ್ಥೆಯಿಂದ ದಲಿತ ಸಾಹಿತ್ಯ ಸಮಗ್ರ ಸಂಪುಟ ಪ್ರಕಟಣೆಗೆ ಕ್ರಮ: ಎಂ.ಬಿ. ಪಾಟೀಲ


Team Udayavani, Jul 29, 2023, 1:28 PM IST

mb-patil

ವಿಜಯಪುರ: ರಾಜ್ಯದ ದಲಿತ ಸಾಹಿತ್ಯದ ಸಮಗ್ರ ಅಧ್ಯಯನ ಹಾಗೂ ಸಮಗ್ರ ಸಾಹಿತ್ಯ ಸಂಪುಟ ಹೊತರಲು ಬಿ.ಎಲ್.ಡಿ.ಇ. ಸಂಸ್ಥೆಯ ವಚನ ಪಿತಾಮಹ ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದ ಮೂಲಕ ಪ್ರಕಟಣೆ ಮಾಡುವುದಾಗಿ ವಿಜಯಪುರ ಜಿಲ್ಲಾ ಉಸ್ತುವಾರಿ ಹೊಂದಿರುವ ಕೈಗಾರಿಕಾ ಸಚಿವ ಡಾ.ಎಂ.ಬಿ. ಪಾಟೀಲ ಪ್ರಕಟಿಸಿದರು.

ಶನಿವಾರ ನಗರದ ಕಂದಗಲ್ ಹನುಮಂತ್ರಾಯ ಜಿಲ್ಲಾ ರಂಗ ಮಂದಿರದಲ್ಲಿ ನಡೆದ ಅಖಿಲ ಭಾರತ ದಲಿತ ಸಾಹಿತ್ಯ10ನೇ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನೋವುಂಡ ಜನರು, ಶೋಷಿತ ವ್ಯವಸ್ಥೆಯಲ್ಲಿ ಅನುಭವಿಸಿದ ನೋವುಗಳನ್ನು ಸಮುದಾಯದ‌ ಜನರ ಆಶಯಕ್ಕೆ ಅಕ್ಷರ ರೂಪ ನೀಡಿ, ಸಾಹಿತ್ಯ ರೂಪಿಸಿ, ವಾಸ್ತವಿಕ ನೆಲೆಯಲ್ಲಿ ಮೂಡಿ ಬರುತ್ತದೆ ಎಂದರು.

ಜಾತಿ ರಹಿತವಾದ ಬವವಾದಿ ಶರಣರ ಬಸವ ಧರ್ಮದ ಆಶಯಗಳನ್ನೇ ಡಾ.ಬಿ.ಆರ್. ಅಂಬೇಡ್ಕರ್ ಕೂಡ ಸಂವಿಧಾನದಲ್ಲಿ ಅಳವಡಿಸಿದ್ದಾರೆ. ಗೌತಮ ಬುದ್ಧರ ಆಶಯವೂ ಅದೇ ಆಗಿದೆ ಎಂದರು.

ಸ್ವಾತಂತ್ರ್ಯ ನಂತರದ 75 ವರ್ಷದ ಈ ಹಂತದಲ್ಲಿ ಭಾರತ ಬುದ್ಧ, ಬಸವ, ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಆಶಯದ ಸಮ ಸಮಾಜ‌ ನಿರ್ಮಾಣವಾಗದ ಹೊರತು ದಲಿತ ಸಾಹಿತ್ಯ ಪರಿಷತ್ ಆಶಯದ ಪ್ರಬುದ್ಧ ಭಾರತ ನಿರ್ಮಾಣ ಅಸಾಧ್ಯ ಎಂದರು.

ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ದಲಿತ ಸಾಹಿತ್ ಪರಿಷತ್ ನಡೆಸಿದ 2008 ರಲ್ಲಿ ನಡೆದ ಜಿಲ್ಲಾ ಮಟ್ಟದ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದೆ. ಇದೀಗ ದಲಿತ ಸಾಹಿತ್ಯ ಪರಿಷತ್ತಿನ 25ನೇ ವರ್ಷದ ಸಂಭ್ರಮ ಹಾಗೂ ದಲಿತ ಸಾಹಿತ್ಯ10ನೇ ಸಮ್ಮೇಳನದಲ್ಲಿ ಪಾಲ್ಗೊಳ್ಳುತ್ತಿರುವ ಸಂತಸವಾಗಿದೆ ಎಂದರು.

ದಲಿತ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರದ ಆರ್ಥಿಕ ನೆರವು ಕೊಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡುವುದಾಗಿ ಸಚಿವರು ಭರವಸೆ ನೀಡಿದರು.

ಪ್ರಸ್ತಾವಿಕ ಮಾತನಾಡಿದ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಅಂತರಂಗದ ಬೆಳವಣಿಯಾಗದ ಹೊರತು ಭಾರತದ ಭೌತಿಕ ಅಭಿವೃದ್ಧಿ, ಪ್ರಗತಿ ಅರ್ಥ ಕಳೆದುಕೊಳ್ಳುತ್ತವೆ. ಹೀಗಾಗಿ ಭಾರತ ಪ್ರಬುದ್ಧತೆ ಸಾಧಿಸಲು ಬುದ್ಧ ಭಾರತವಾಗಬೇಕು. ಕುವೆಂಪು ಅವರ ಸರ್ವಜನಾಂಗದ ಶಾಂತಿಯ ತೋಟದ ಕನಸಿನ ಭಾರತ ನಿರ್ಮಾಣ ಸಾಧ್ಯ ಎಂದು ನಾಡಿನ ಚಿಂತಕ ಡಾ.ಮಲ್ಲೇಪುರ ಜಿ. ವೆಂಕಟೇಶ ತಮ್ಮ ಆಶಯ ಭಾಷಣದಲ್ಲಿ ಅಭಿಪ್ರಾಯಪಟ್ಟರು.

ಅಂಬೇಡ್ಕರ್ ಅವರ ಆಶಯದ ನಿಮ್ನ, ಆರ್ಥಿಕ, ಸಾಮಾಜಿಕವಾಗಿ ಕೆಳಗೆ ಬಿದ್ದ ಎಲ್ಲ ವರ್ಗದ ಜನರನ್ನು ಮೇಲೆತ್ತುವ ಕೆಲಸವಾಗಬೇಕು ಎಂದು ಆಶಿಸಿದರು.

ಧಮ್ಮ ಬಂತೇಜಿಗಳಾದ ಸಂಘಪಾಲ ಸಾನ್ನಿಧ್ಯ ವಹಿಸಿದ್ದರು. ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಡಾ.ಎಚ್.ಟಿ.ಪೋತೆ, ಹಿಂದಿನ ಸಮ್ಮೇಳನದ ಅಧ್ಯಕ್ಷ ಅಲ್ಲಾಗಿರಿರಾಜ, ಶಾಸಕರಾದ ವಿಠ್ಠಲ ಕಟಕಧೋಂಡ, ಜಗದೀಶ ಗುಡಗುಂಟಿ, ಮಾಜಿ ಶಾಸಕರಾದ ರಾಜು ಆಲಗೂರ, ಡಿ.ಎಸ್. ವೀರಯ್ಯ, ಡಿ.ಎಸ್.ಎಸ್‌. ರಾಜ್ಯ ಸಂಚಾಲಕ ಡಿ.ಜಿ.ಸಾಗರ, ದಲಿತ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಶ್ರೀನಾಥ ಪೂಜಾರಿ, ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಅರ್ಜುನ ಗೊಳಸಂಗಿ, ಡಾ.ಸುಜಾತಾ ಚಲವಾದಿ, ಹೇಮಲತಾ ವಸ್ತ್ರದ ಇತರರು ವೇದಿಕೆ ಮೇಲಿದ್ದರು.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.