ಕೋವಿಡ್ ವಾರಿಯರ್ಸ್ ಗೆ ಸನ್ಮಾನ-ಸಸಿ ವಿತರಣೆ
Team Udayavani, Jun 20, 2020, 6:32 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬಳಗನೂರು: ಪಟ್ಟಣದ ಶ್ರೀ ಬಸವೇಶ್ವರ ವೃತ್ತದಲ್ಲಿ ಯೂತ್ ಮೂಮೆಂಟ್ ವತಿಯಿಂದ ಕೋವಿಡ್ ವಾರಿಯರ್ಸ್ ಗೆ ಅಭಿನಂದನೆ, ರಕ್ತದಾನ ಶಿಬಿರ ಹಾಗೂ ಸಸಿ ನೆಡುವ ಕಾರ್ಯಕ್ರಮ ನಡೆಯಿತು.
ಯುವ ಮುಖಂಡ ಪ್ರಸನ್ನಕುಮಾರ ಪಾಟೀಲ, ಯುವ ಮುಖಂಡ ಕೆ. ರಾಘವೇಂದ ಗುತ್ತೇದಾರ ಸಸಿಗೆ ನೀರುಣಿ, ರೈತರಿಗೆ ಸಸಿ ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೋವಿಡ್ ಮಹಾಮಾರಿ ತಡೆಗಟ್ಟಲು ಆರೋಗ್ಯ ಸೇವೆ ಮತ್ತು ಜಾಗೃತಿ ಕಾರ್ಯದಲ್ಲಿ ತೊಡಗಿರುವ ಆರೋಗ್ಯ ಇಲಾಖೆ ಅಧಿಕಾರಿಗಳು, ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು, ಪಪಂ ಪೌರಕಾರ್ಮಿಕರು, ಜೆಸ್ಕಾಂ ಅಧಿಕಾರಿಗಳು, ಸಿಬ್ಬಂದಿ, ಪತ್ರಕರ್ತರು ಇತರೆ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ಚೀನಾದ ಗಡಿಯಲ್ಲಿ ಹುತಾತ್ಮರಾದ ಯೋಧರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಬಳಗಾನೂರು ಹಾಗೂ ಮಸ್ಕಿ ನಗರದ ಯುತ್ ಮೂಮೆಂಟ್ ಯುವಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಮೌನೇಶ ಪೂಜಾರ, ಡಾ| ದೌಲಸಾಬ್ ಮುದ್ದಾಪುರ, ಮುಖಂಡರಾದ ಮಲ್ಲಿಕಾರ್ಜುನ ಬ್ಯಾಳಿ, ಮಲ್ಲಣ್ಣ ಅಂಬಾಡಿ, ವೀರೇಶ ಕಮತರ, ಮಲ್ಲಿಕಾರ್ಜುನ, ಮಲ್ಲಿಕಾರ್ಜುನ ಗೌಡನಭಾವಿ, ಭರತ ಶೇಠ್, ಎಬಿವಿಪಿ ರಾಜ್ಯದ ಪದಾಧಿಕಾರಿ ಮಲ್ಲಿಕಾರ್ಜುನ, ಸಂಚಾಲಕ ಎಂ.ಬಿ. ನಿರುಪಾದಿ, ಶಶಿ ಹಿರೇಮಠ, ಪಪಂ ಸದಸ್ಯ ರಾಜಶೇಖರ ಶಂಕರಬಂಡಿ, ರಾಕೇಶ ಪಾಟೀಲ, ಚಂದ್ರಶೇಖರ ನಾಯಕ, ಶರಣೇಗೌಡ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.