ಎಲ್ಲಾ ಅರ್ಹ ಶಾಸಕರಿಗೆ ಕೊಟ್ಟಂತೆ ಕುಮಟಳ್ಳಿಗೆ ಸಚಿವ ಸ್ಥಾನ ಕೊಡಲಿಲ್ಲ ಯಾಕೆ: ಯತ್ನಾಳ
Team Udayavani, Feb 10, 2020, 3:14 PM IST
ವಿಜಯಪುರ: ಬಿಜೆಪಿ ಸರ್ಕಾರ ಅಧಿಕಾರಕ್ಕೆ ತರಲು ಶಾಸಕ ಸ್ಥಾನ ತ್ಯಾಗ ಮಾಡಿ, ಮತ್ತೆ ಗೆದ್ದಿರುವ ಎಲ್ಲಾ ಅರ್ಹ ಶಾಸಕರಲ್ಲಿ ಮಹೇಶ ಕುಮಟಳ್ಳಿ ಹೊರತಾಗಿ ಎಲ್ಲರನ್ನೂ ಮಂತ್ರಿ ಮಾಡಿದ್ದೀರಿ. ಕುಮಟಳ್ಳಿಯನ್ನು ಕಡೆಗಣಿಸಿದ್ದು ಏಕೆ, ಈ ವಿಷಯದಲ್ಲಿ ತಪ್ಪು ಸಂದೇಶ ರವಾನೆ ಆಗಲಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪ್ರಶ್ನಿಸಿದ್ದಾರೆ.
ನಗರದಲ್ಲಿ ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಬಳಿಕ ಪ್ರಾದೇಶಿಕ ಅಸಮಾನತೆ ಕಾರಣವಾಗಿದೆ. ಈಗಾಗಲೇ ಬೆಳಗಾವಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ಮತ್ತೆ ಕೆಲವರಿಗೆ ನೂರಕ್ಕೆ ನೂರರಷ್ಟು ಮಂತ್ರಿ ಮಾಡುವ ಭರವಸೆ ನೀಡಲಾಗುತ್ತಿದೆ. ತ್ಯಾಗ ಮಾಡಿದ ಶಾಸಕ ಕುಮಟಳ್ಳಿ ಅವರನ್ನು ಕಡೆಗಣಿಸಲಾಗಿದೆ. ಮುಂಬೈ ಕರ್ನಾಟಕ ವಿಜಯಪುರ ಜಿಲ್ಲೆ, ಕಲ್ಯಾಣ ಕರ್ನಾಟಕ ಜಿಲ್ಲೆಗಳನ್ನು ಕಡೆಗಣಿಸಲಾಗಿದೆ. ಇದರಿಂದಾಗಿ ಪ್ರಾದೇಶಿಕ ಅಸಮಾನತೆ ಹೆಚ್ಚಿದೆ. ಇಂಥ ಸ್ಥಿತಿಯಲ್ಲಿ ಬೆಳಗಾವಿ ಜಿಲ್ಲೆಯ ಮತ್ತೊಬ್ಬ ಶಾಸಕರನ್ನು ನೂರಕ್ಕೆ ನೂರರಷ್ಟು ಮಂತ್ರಿ ಮಾಡುವ ಭರವಸೆ ನೀಡುವುದು ಎಷ್ಡು ಸರಿ ಎಂದು ಪರೋಕ್ಷವಾಗಿ ಉಮೇಶ ಕತ್ತಿ ಅವರನ್ನು ಮಂತ್ರಿ ಮಾಡುವ ಭರವಸೆ ನೀಡಿದ್ದನ್ನು ಆಕ್ಷೇಪಿಸಿದರು.
ಇದಲ್ಲದೆ ಈಗಾಗಲೇ ಗೆದ್ದ ಅರ್ಹ ಶಾಸಕರ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಬರುವ ಬಜೆಟ್ ಪೂರ್ವದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶಾಸಕಾಂಗ ಸಭೆ ಕರೆದು ಶಾಸಕರ ಭಾವನೆ ಅರಿಯಬೇಕು. ಶಾಸಕರನ್ನು ವಿಶ್ವಾಸಕ್ಕೆ ಪಡೆಯುವ ಜೊತೆಗೆ ಬಜೆಟ್ ನಲ್ಲಿ ಎಲ್ಲ ಶಾಸಕರಿಗೂ ಸಮಾನ ಅನುದಾನ ನೀಡಬೇಕು ಎಂದು ಆಗ್ರಹಿಸಿದರು.
ಶಾಸಕಾಂಗ ಸಭೆ ಕರೆಯುವಂತೆ ಆಗ್ರಹಿಸಿ ಈಗಾಗಲೇ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.