ಸಿ.ಸಿ ಪಾಟೀಲ ಅವರನ್ನು ಬಲಿಕೊಟ್ಟು ಸಚಿವನಾಗುವ ದುರಾಸೆ ನನಗಿಲ್ಲ: ಯತ್ನಾಳ
Team Udayavani, Jan 26, 2020, 1:12 PM IST
ವಿಜಯಪುರ: ನಾನು ಸಚಿವ ಸ್ಥಾನದ ಅಕಾಂಕ್ಷಿಯಲ್ಲ, ಸಿ.ಸಿ ಪಾಟೀಲ ಅವರನ್ನು ಬಲಿಕೊಟ್ಟು ಸಚಿವನಾಗುವ ದುರಾಸೆ ನನಗಿಲ್ಲ. ಆದರೆ ಕೆಲವು ಸಚಿವರು ವಿಧಾನಸೌಧಕ್ಕೆ ಸೀಮಿತವಾಗಿದ್ದು, ಗನ್ ಮ್ಯಾನ್, ಕೆಂಪು ದೀಪದ ಕಾರಿನಲ್ಲಿ ಓಡಾಡಲು ಸಚಿವರಾಗಬೇಕಿಲ್ಲ. ಒಂದೊಮ್ಮೆ ಪಕ್ಷ ನನಗೆ ಅಧಿಕಾರ ನೀಡಬಯಸಿದರೆ ಸಂಪುಟ ದರ್ಜೆ ಸಚಿವ ಸ್ಥಾನ ನೀಡಲಿ, ಇಲ್ಲವಾದಲ್ಲಿ ನಾನು ಶಾಸಕನಾಗಿಯೇ ಮುಂದುವರೆಯುತ್ತೇನೆ ಎಂದು ವಿಜಯಪುರ ನಗರ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಭಾನುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪಕ್ಷದ ಹೈಕಮಾಂಡ್ ಪ್ರತೀ ಮೂರು ತಿಂಗಳಿಗೆ ಒಮ್ಮೆ ಸಚಿವರ ಪ್ರಗತಿ ಪರಿಶೀಲನೆ ಮಾಡಬೇಕು ಎಂದರು.
ವಿದೇಶ ಪ್ರವಾಸದಿಂದ ಮರಳಿರುವ ಮುಖ್ಯಮಂತ್ರಿ ಗಳನ್ನು ಭೇಟಿ ಮಾಡಿ ಶುಭಕೋರಿದ್ದು, ನನ್ನ ಕೋರಿಕೆ ಮೇರೆಗೆ 15 ದಿನದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ವಿಜಯಪುರಕ್ಕೆ ಬರಲಿದ್ದಾರೆ ಎಂದರು.
ಸಚಿವ ಸಂಪುಟ ವಿಸ್ತರಣೆ ಆಗಲೇಬೇಕು. ನಾನು ಸಚಿವ ಸ್ಥಾನದ ಅಕಾಂಕ್ಷಿಯಲ್ಲ. ರಾಜೀನಾಮೆ ನೀಡಿ ಬಿಜೆಪಿ ಸೇರಿರುವ 17 ಜನರಲ್ಲಿ ಕೆಲವರಿಗೆ ಡಿಸಿಎಂ, ಸಚಿವ ಸ್ಥಾನ, ನಿಗಮ ಮಂಡಳಿ ಸ್ಥಾನಮಾನ ನೀಡಲು ಮಾತುಕತೆಯಾಗಿದೆ. ಆ ರೀತಿ ಆಗುವ ವಿಶ್ವಾಸವಿದೆ. ರಮೇಶ ಜಾರಕಿಹೊಳಿ ಅವರಿಗೆ ಡಿಸಿಎಂ ನೀಡಬೇಕು ಎಂಬುದು ಸಹಜ ಬಯಕೆ. ಬಹಳ ಲಾಭ ಅನುಭವಿಸಿರುವ ಕೆಲವರು ತ್ಯಾಗ ಮಾಡಬೇಕು ಎಂದರು.
ಕೇವಲ ಭಾಷಣ ಮಾಡಿದರೆ ಸಾಲದು. ರಾಜ್ಯದಲ್ಲಿ ಎಲ್ಲ ಸ್ಥಾನಮಾನ ಅನುಭವಿಸಿದರು ಸಮ್ಮ ಸಚಿವ ಸ್ಥಾನ ಬಿಟ್ಟು ಕೊಡಬೇಕು ಎಂದು ಸಲಹೆ ನೀಡಿದರು.
ಡಿಸಿಎಂ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದರಿಂದ ಗೌರವ ಕಡಿಮೆಯಾಗಲಿದ್ದು, ಈ ಕ್ರಮ ಸರಿಯಲ್ಲ ಎಂಬುದು ನನ್ನ ವಯಕ್ತಿಕ ಭಾವನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
Vijayapura: ವಕ್ಫ್ ವಿರುದ್ಧ ಹಲವು ಮಠಾಧೀಶರ ನೇತೃತ್ವದಲ್ಲಿ ಹೋರಾಟ
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.