ಬಸವಾದಿ ಶರಣರ ತತ್ವಾದರ್ಶ ಪಾಲಿಸಿ


Team Udayavani, Feb 3, 2019, 10:22 AM IST

vij-1.jpg

ವಿಜಯಪುರ: ಸಮಾಜದಲ್ಲಿನ ಅಸಮಾನತೆ, ಮೂಢನಂಬಿಕೆಗಳನ್ನು ಹೋಗಲಾಡಿಸಲು ಹಲವಾರು ವಚನಕಾರರು, ಬುದ್ಧಿಜೀವಿಗಳು ತಮ್ಮ ಸಾಹಿತ್ಯದ ಮೂಲಕ ಹೋರಾಡಿದ್ದಾರೆ ಎಂದು ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್‌, ಪಾಟೀಲ ಯತ್ನಾಳ ಅವರು ಹೇಳಿದರು.

ನಗರದ ಕಂದಗಲ್‌ ಹನುಮಂತರಾಯ ಜಿಲ್ಲಾ ರಂಗಮಂದಿರ ಆವರಣದಲ್ಲಿ ನಡೆದ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಮಾಚಿದೇವ ಶರಣರು ದೂರ ದೃಷ್ಠಿಉಳ್ಳವರಾಗಿದ್ದರು. ಅವರ ವಚನ ಸಾಹಿತ್ಯದ ಕೊಡುಗೆ ಅಪಾರವಾದುದು. ನಮ್ಮ ದೇಶದಲ್ಲಿ ಸಮಾನತೆ ಮೂಢನಂಬಿಕೆಗಳಂತಹ ಅನೇಕ ಜ್ವ್ವಲಂತ ಸಮಸ್ಯೆಗಳನ್ನು ಹೋಗಲಾಡಿಸಲು ಇಂತಹ ಹಲವಾರು ಮಹನೀಯರು ತಮ್ಮ ಸಾಹಿತ್ಯದ ಮೂಲಕ ಹೋರಾಡಿದ್ದಾರೆ, ಅವರ ಸಿದ್ಧಾಂತ ಅನ್ವಯ ಸುಭದ್ರ ದೇಶ ಕಟ್ಟುವಂತ ಪ್ರಯತ್ನ ನಡೆಯಬೇಕು ಎಂದು ಹೇಳಿದರು.

ಪ್ರಸಕ್ತ ಅಧುನಿಕರಣದಲ್ಲಿ ಯುವಕರಿಗಾಗಿಯೆ ಕೌಶಲ್ಯಾಭಿವೃದ್ಧಿ ಸ್ವ ಉದ್ಯೋಗಗಳಂತಹ ಉತ್ತಮ ಯೋಜನೆಗಳನ್ನು ರೂಪಿಸಿ ನಿರುದ್ಯೋಗ ಹೋಗಲಾಡಿಸಲು ಸರ್ಕಾರ ಸನ್ನದ್ಧœವಾಗಿದೆ. ಹಾಗಾಗಿ ಯುವಕರು ಅನವಶ್ಯವಾಗಿ ಕಾಲಹರಣ ಮಾಡುವ ಬದಲು ಉತ್ತಮ ಯೋಜನೆಗಳ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಹೇಳಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಾಗಠಾಣ ಶಾಸಕ ಡಾ| ದೇವಾನಂದ ಚವ್ಹಾಣ ಮಾತನಾಡಿ, ದಾರ್ಶನಿಕರ ಜನಪರ‌ ತತ್ವಗಳನ್ನು ನಾವು ಪಾಲಿಸಬೇಕಾಗಿದೆ. ಮಾಚಿದೇವ ಮಡಿವಾಳರು ಸೇರಿದಂತೆ ಹಲವಾರು ಮಹನೀಯರು ಜಾತಿಪದ್ಧತಿ, ಮೂಢನಂಬಿಕೆ ವಿರುದ್ಧ ತಮ್ಮ ವಚನ ಸಾಹಿತ್ಯದ ಮೂಲಕ ಹೋರಾಡಿದ್ದಾರೆ. ಇಂತಹ ಮಹನೀಯ ತತ್ವ, ವಿಚಾರಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಉಪನ್ಯಾಸ ನೀಡಿದ ಪ್ರೊ| ಮಹಾದೇವ ರೆಬಿನಾಳ ಮಾತನಾಡಿ, ಬಸವಣ್ಣನವರ ಕ್ರಾಂತಿ ಸಂದರ್ಭದಲ್ಲಿ ಅವರಿಗೆ ಹೆಗಲಾಗಿ ನಿಂತವರಲ್ಲಿ ಮಾಚಿದೇವ ಶರಣರು ಕೂಡ ಒಬ್ಬರು. ಆಗಿನ ಅನುಭವ ಮಂಟಪ ಈಗಿನ ವಿಧಾನಸೌಧದಂತೆ ಕಾರ್ಯ ನಿರ್ವಹಿಸುತ್ತಿತ್ತು. ಅದರ ಸಕಲ ಜವಾಬ್ದಾರಿ ಮಾಚಿದೇವರು ವಹಿಸಿದ್ದರು ಎಂದು ಹೇಳಿದರು.

ಮಾಚಿದೇವ ಮಡಿವಾಳರ ಸಾವಿರಾರು ವಚನ ಸಾಹಿತ್ಯಗಳಲ್ಲಿ ಲಭ್ಯ ಇರುವುದು ಕೇವಲ 350 ವಚನಗಳು ಮಾತ್ರ. ಮೂಢನಂಬಿಕೆ ತೊಡೆದು ಹಾಕುವಲ್ಲಿ ಇವರ ಪಾತ್ರ ಅಪಾರವಾಗಿದೆ. ಬರಿಗೈಯಲ್ಲಿ ಇಡಿ ದೇಶವನ್ನೇ ಗೆಲ್ಲಬಹುದು ಎಂಬುದಕ್ಕೆ ಮಾಚಿದೇವರೆ ಉತ್ತಮ ಉದಾಹರಣೆ ಎಂದು ವಿಶ್ಲೇಷಿಸಿದರು.

ಕಾರ್ಯಕ್ರಮದಲ್ಲಿ ವಿ.ಸಿ.ನಾಗಠಾಣ, ಶಿವು ಹುಬ್ಬಳ್ಳಿ, ಸಾಯಬಣ್ಣ ಮಡಿವಾಳರ, ಭಾರತಿ ಟಂಕಸಾಲಿ, ಶರಣಪ್ಪ ಕನ್ನೊಳ್ಳಿ ಸೇರಿದಂತೆ ಸಮಾಜದ ಮುಖಂಡರು ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಎಚ್.ಬಿ. ವಿದ್ಯಾವತಿ ಸ್ವಾಗತಿಸಿದರು. ಶ್ರೀದೇವಿ ಭಂಡಾರಕರ ವಚನ ಗಾಯನ ನಡೆಸಿಕೊಟ್ಟರು. ಶಿಕ್ಷಕ ಹುಮಾಯೂನ ಮಮದಾಪುರ ನಿರೂಪಿಸಿದರು.

ಇದಕ್ಕೂ ಮೊದಲು ನಗರದ ಸಿದ್ದೇಶ್ವರ ದೇವಸ್ಥಾನದಿಂದ ಆರಂಭಗೊಂಡ ಮಡಿವಾಳ ಮಾಚಿದೇವ ಶರಣರ ಭಾವಚಿತ್ರ ಮೆರವಣಿಗೆಗೆ ಜಿಲ್ಲಾಧಿಕಾರಿ ಎಸ್‌.ಬಿ. ಶೆಟ್ಟೆಣ್ಣವರ ಚಾಲನೆ ನೀಡಿದರು. ಮೆರವಣಿಗೆ ಮಹಾತ್ಮ ಗಾಂಧಿಧೀಜಿ ವೃತ್ತ, ಬಸವೇಶ್ವರ ವೃತ್ತ, ಅಂಬೇಡ್ಕರ್‌ ವೃತ ಮಾರ್ಗವಾಗಿ ರಂಗಮಂದಿರ ತಲುಪಿತು.

ಟಾಪ್ ನ್ಯೂಸ್

24 Karnataka players in IPL Mega Auction; Here is the list

IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

24 Karnataka players in IPL Mega Auction; Here is the list

IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ

7-bng

Bengaluru: ಉದ್ಯೋಗ, ಹೂಡಿಕೆ ನೆಪದಲ್ಲಿ ಜನರಿಗೆ ವಂಚನೆ: ನಾಲ್ವರ ಸೆರೆ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.