ಮನಗೂಳಿ: ಕೋವಿಡ್ ಸೋಂಕು ತಡೆಗೆ ಔಷಧ ಸಿಂಪಡಣೆ
Team Udayavani, May 2, 2020, 1:50 PM IST
ಬಸವನಬಾಗೇವಾಡಿ: ಮನಗೂಳಿ ಪಟ್ಟಣದಲ್ಲಿ ಪೌರ ಕಾರ್ಮಿಕರು ಔಷಧ ಸಿಂಪಡಣೆ ಮಾಡಿದರು.
ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಕೊರೊನಾ ಸೋಂಕು ಹರಡದಂತೆ ಪೌರಕಾರ್ಮಿಕರು ಹಾಗೂ ಸಿಬ್ಬಂದಿ ವಿವಿಧ ಬಡಾವಣೆಗಳು ಹಾಗೂ ನಗರಗಳಲ್ಲಿ ಔಷಧ ಹಾಗೂ ಪೌಡರ್ ಸಿಂಪಡಣೆ ಕಾರ್ಯ ಚುರುಕುಗೊಳಿಸಿದ್ದಾರೆ.
ದೇಶಾದ್ಯಂತ 1 ತಿಂಗಳ ಕಾಲ ಕಾಲ್ ಡೌನ್ ಆಗಿರುವ ಹಿನ್ನಲ್ಲೇಯಿಂದ ಪುರಸಭೆ, ಪೊಲೀಸ್, ಆರೋಗ್ಯ, ಕಂದಾಯ, ಆಶಾ, ಅಂಗನವಾಡಿ ಕಾರ್ಯರ್ತರು ಸೇರಿದಂತೆ ವಿವಿಧ ಇಲಾಖೆಯ ಕಾರ್ಮಿಕರು ಮತ್ತು ಸಿಬ್ಬಂದಿ ವರ್ಗದವರು ಹಾಗೂ ಅಧಿಕಾರಿಗಳು ರಜೆ ದಿನಗಳಲ್ಲಿ ಕೂಡಾ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ದಿನವಿಡಿ ತಮ್ಮ ಕಾರ್ಯ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ.
ಮನಗೂಳಿ ಪಟ್ಟಣ ಪಂಚಾಯಿತಿ ಪೌರ ಕಾರ್ಮಿಕರು ಪಟ್ಟಣದ ಪ್ರಮುಖ ರಸ್ತೆ ಮತ್ತು ಚರಂಡಿಗಳ ಸ್ವಚ್ಛತೆ, ಔಷಧ ಹಾಗೂ ಪೌಡರ್ ಸಿಂಪಡಣೆ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಆಶಾ, ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಕುಟುಂಬ ಸದಸ್ಯರ ಮಾಹಿತಿ ಪಡೆಯುವುದು ಮತ್ತು ಜಿಲ್ಲೆ ರಾಜ್ಯ ಹೊರಾಜ್ಯಗಳಿಂದ ಬಂದ ಜನರ ಬಗ್ಗೆ ಮಾಹಿತಿ ಸಂಗ್ರಹಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಮನಗೂಳಿ ಪಟ್ಟಣದ ವ್ಯಾಪ್ತಿಯ ಕೊಳಚೆ ಪ್ರದೇಶ ನಿವಾಸಿಗಳಿಗೆ ನಿತ್ಯ 500 ಲೀ. ಹಾಲು ವಿತರಣೆ ಹಾಗೂ ನಿರ್ಗತಿಕರು ಕಡು ಬಡವರನ್ನು ಗುರುತಿಸಿ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳಿಂದ ದಿನಸಿ ಕಿಟ್ ಗಳನ್ನು ವಿತರಿಸಲಾಗುತ್ತಿದೆ. ಪಟ್ಟಣದಲ್ಲಿ ಸ್ವತ್ಛತೆ ಮತ್ತು ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಲಾಗಿದೆ. ಜನರ ಆರೋಗ್ಯ ರಕ್ಷಣೆಗೆ ನಿಗಾ ವಹಿಸಲಾಗಿದೆ ಎಂದು ಮನಗೂಳಿ ಪಪಂ ಮುಖ್ಯಾಧಿಕಾರಿ ಎಸ್.ಎಸ್. ಬಾಗಲಕೋಟಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
MUST WATCH
ಹೊಸ ಸೇರ್ಪಡೆ
ನಕ್ಸಲರಿಗೆ ಕೆಂಪು ಹಾಸು ಸ್ವಾಗತ ಖಂಡನೀಯ: ಹರೀಶ್ ಪೂಂಜಾ
Mangaluru University: ಹೊಸ ಕೋರ್ಸ್ ಆರಂಭಕ್ಕೆ ವಿವಿ ಅನುಮತಿ ಅಗತ್ಯ
ICC ಪಿಚ್ ರೇಟಿಂಗ್: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ
ICC Bowling Ranking: ಐಸಿಸಿ ಬೌಲಿಂಗ್ ರ್‍ಯಾಂಕಿಂಗ್… ಬುಮ್ರಾ ಅಗ್ರಸ್ಥಾನ ಗಟ್ಟಿ
BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.