ಅನ್ಯಧರ್ಮದಲ್ಲಿ ಜನಿಸಿದ್ದರೆ ಬಸವಣ್ಣ ವಿಶ್ವಖ್ಯಾತಿ ಪಡೆಯುತ್ತಿದ್ದ: ಶಿವಾನಂದ ಪಾಟೀಲ
Team Udayavani, May 3, 2022, 2:18 PM IST
ವಿಜಯಪುರ: ಬಸವಣ್ಣ ಇಸ್ಲಾಂ ಧರ್ಮದಲ್ಲಿ ಜನಿಸಿದ್ದರೆ ಮಹ್ಮದ್ ಪೈಗಂಬರರನ್ನು, ಕ್ರೈಸ್ತ ಧರ್ಮದಲ್ಲಿ ಜನಿಸಿದ್ದರೆ ಏಸುವಿಗಿಂತ ಮಿಗಿಲಾಗಿ ಜಗತ್ತನ್ನು ಆವರಿಸಿರುತ್ತಿದ್ದರು. ಆದರೆ ಬಸವಣ್ಣ ಎಂಬ ಮಹಾನ್ ದಾರ್ಶನಿಕ ಕನ್ನಡ ನೆಲದ ಬಾಗೇವಾಡಿಯಲ್ಲಿ ನೆಲೆಸಿದ್ದರಿಂದ ಅವರ ವೈಚಾರಿಕ ಸಂದೇಶಗಳು ಜಗತ್ತಿನ ಮೂಲೆ ಮೂಲೆಗೆ ತಲುಪುವಲ್ಲಿ ವಿಫಲವಾಗಿದೆ ಎಂದು ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ಹೇಳಿದರು.
ಮಂಗಳವಾರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ರಾಜ್ಯ ಸರ್ಕಾರದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿಶ್ವದಲ್ಲಿ ಪುರುಷನಿಗೆ ಮಹಿಳೆ ಸಮಾನಳು ಎಂದು ಮೊದಲು ಘೋಷಿಸಿದ್ದೇ ಬಸವಣ್ಣ. ಶ್ರಮದ ಪ್ರತಿಪಾದನೆಗಾಗಿ ಕಾಯಕವೇ ಕೈಲಾಸ ಎಂದು ತತ್ವ ನೀಡಿದ ಬಸವೇಶ್ವರರನ್ನು ಕರ್ನಾಟಕದ ಹೊರತಾಗಿ ಹೊರ ಜಗತ್ತಿಗೆ ಕೊಂಡೊಯ್ಯುವಲ್ಲಿ ಲಿಂಗಾಯತರ ವೈಫಲ್ಯವೂ ಇದೆ. ಜಾತಿ, ಸಮುದಾಯಕ್ಕೆ ಬಸವಣ್ಣನನ್ನು ಕಟ್ಡಿಹಾಕಿದ್ದೆ ಬಸವಾದಿ ಶರಣರ ವಿಶ್ವಮಾನ್ಯ ವೈಚಾರಿಕ ಧರ್ಮ ಸಂದೇಶಗಳು ತಲುಪುವಲ್ಲಿ ವಿಫಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ವಿಶ್ವಗುರು ಬಸವಣ್ಣ ಈ ನೆಲಕ್ಕೆ ಸೀಮಿತವಾಗದೇ ಸಾಮಾಜಿಕ ಕ್ರಾಂತಿಯ ಬಸವ ಸಂದೇಶಗಳು, ವಚನಗಳು ಜಗತ್ತಿಗೆ ತಲುಪುವಂತೆ ಆಗಲು ಇನ್ನಾದರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ ಎಂದರು.
ಇದನ್ನೂ ಓದಿ:ಚಿತ್ರದುರ್ಗ: ಪುನೀತ್ ರಾಜಕುಮಾರ್ ಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ ಪ್ರದಾನ
ಸಾನ್ನಿಧ್ಯ ವಹಿಸಿದ್ದ ಹಿರೇಮಠದ ಶಿವಪ್ರಕಾಶ ಶ್ರೀಗಳು, ವಿರಕ್ತ ಮಠದ ಸಿದ್ಧಲಿಂಗೇಶ್ವರ ಶ್ರೀಗಳು, ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಅಧಿಕಾರಿ ಶಿವಯೋಗಿ ಕಳಸದ, ಜಿಲ್ಲಾಧಿಕಾರಿ ವಿ.ಬಿ.ದಾನಮ್ಮನವರ, ಜಿ.ಪಂ. ಸಿಇಒ ರಾಹುಲ ಶಿಂಧೆ ಪುರಸಭೆ ಅಧ್ಯಕ್ಷೆ ಲಕ್ಷ್ಮೀಬಾಯಿ ಬೆಲ್ಲದ ವೇದಿಕೆ ಮೇಲಿದ್ದರು. ಡಾ. ಮಲ್ಲಿಕಾರ್ಜುನ ಮೇತ್ರಿ ಉಪನ್ಯಾಸ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.