ಕನ್ನಡ ಅನ್ನದ ಭಾಷೆಯಾಗಲಿ: ಡಾ|ಜೋಶಿ


Team Udayavani, Dec 15, 2021, 3:00 PM IST

21kannada

ವಿಜಯಪುರ: ಕನ್ನಡ ಭಾಷೆ ಜಾಗತಿಕ ಮಟ್ಟದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡಿದೆ. ಕನ್ನಡ ಅನ್ನದ ಭಾಷೆಯಾಗಿದೆ. ಹೀಗಾಗಿ ಕನ್ನಡಿಗರಾದ ನಾವು ನಿತ್ಯವ ನಮ್ಮ ವಹಿವಾಟಿನಲ್ಲಿ ಕನ್ನಡದ ಅಂಕಿಗಳನ್ನು ಬಳಕೆ ಮಾಡುವ ಹಾಗೂ ಕನ್ನಡದಲ್ಲೇ ಸಹಿ ಮಾಡುವ ಮೂಲಕ ಕನ್ನಡದ ಆಸ್ಮಿತೆ ಉಳಿಸಬೇಕಿದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ ನೂತನ ರಾಜ್ಯಾಧ್ಯಕ್ಷ ನಾಡೋಜ ಡಾ| ಮಹೇಶ ಜೋಶಿ ಕಿವಿಮಾತು ನೀಡಿದರು.

ಮಂಗಳವಾರ ನಗರದ ಕಂದಗಲ್‌ ಹನುಮಂತರಾಯ ರಂಗಮಂದಿರದಲ್ಲಿ ತಮಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭ ಹಾಗೂ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕನ್ನಡದ ಕಾಯಕ ಕೈಂಕರ್ಯಕ್ಕಾಗಿ ಕೋಟಿ ಸದಸ್ಯರನ್ನು ಮಾಡುವ ಸಂಕಲ್ಪ ಮಾಡಿದ್ದೇನೆ ಎಂದರು.

ಕೋಟಿ ಸದಸ್ಯರ ಮೂಲಕ ಕನ್ನಡ ಸಾಹಿತ್ಯ ಪರಿಷತ್‌ ಜನ ಸಾಮಾನ್ಯರು ಮುಕ್ತವಾಗಿ ಭಾಗವಹಿಸುವಂತೆ ಮಾಡುವ ಕನಸು ನನ್ನದು. ರಾಜ್ಯಾಧ್ಯಕ್ಷ, ಅಧ್ಯಕ್ಷ ಹಾಗೂ ತಾಲೂಕಾ ಅಧ್ಯಕ್ಷರುಗಳು ಒಂದು ಬಾರಿ ಆಯ್ಕೆ ಆಗಬೇಕು. ಇದರಿಂದ ಅರ್ಹ ಪ್ರತಿಭಾವಂತರಿಗೆ ಅವಕಾಶ ಲಭಿಸುತ್ತವೆ. ಹೀಗಾಗಿ ಸದರಿ ವಿಷಯವನ್ನು ನಿರ್ಧಾರಕ್ಕೆ ತಜ್ಞರ ಸಮಿತಿ ನೇಮಿಸಿದ್ದು ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಮಂಡಿಸಿ ನಿರ್ಧರಿಸುವುದಾಗಿ ಹೇಳಿದರು.

ಇದಲ್ಲದೇ ಕನ್ನಡ ಸಾಹಿತ್ಯದ ಚಟುವಟಿಕೆಗಳನ್ನು ಅರ್ಥಪೂರ್ಣವಾಗಿ ನಡೆಸಲು ರಾಜ್ಯದ ಎಲ್ಲ ಜಿಲ್ಲಾಧ್ಯಕ್ಷರಿಗೆ ಸೂಚಿಸುವ ಜೊತೆಗೆ, ಪ್ರತಿ ತಾಲೂಕಿನ ಸಾಹಿತ್ಯ ಪರಿಷತ್‌ ಕೇಂದ್ರಗಳಿಗೆ ಭೇಟಿ ನೀಡಿ ಸಾಹಿತ್ಯದ ಕುರಿತು ಅಭಿರುಚಿ ಮೂಡಿಸುವ ಕೆಲಸ ಮಾಡುವುದಾಗಿ ಭರವಸೆ ನೀಡಿದರು.

ಸಾನ್ನಿಧ್ಯ ವಹಿಸಿದ್ದ ಬೆಂಗಳೂರಿನ ನಿಡುಮಾಮಿಡಿ ಮಠದ ಜಗದ್ಗುರು ಡಾ| ವೀರಭದ್ರಚನ್ನಮಲ್ಲ ಶ್ರೀಗಳು ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್‌ ಕ್ಷೇತ್ರ ರಾಜಕೀಯದಿಂದ ದೂರವಿರಬೇಕು. ಕನ್ನಡ ಸತ್ಯವೂ ಹೌದು, ಅದು ನಿತ್ಯವೂ ಹೌದು. ಕನ್ನಡಿಗರಿಗೆ ಕನ್ನಡ ಭಾಷೆಯೇ ಉಸಿರಾಗಬೇಕಿದೆ ಎಂದರು.

ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ ಎನಿಸಿಕೊಂಡಿರುವ ಕನ್ನಡ ಸಾಹಿತ್ಯ ಪರಿಷತ್‌ ಜಡವಾಗದೇ ಸದಾ ಕ್ರಿಯಾಶೀಲವಾಗಿರಬೇಕು. ಕರ್ನಾಟಕದ ಗಡಿ ಭಾಗದಲ್ಲಿ ಕನ್ನಡದ ಕಾರ್ಯ ನಿರಂತರ ನಡೆಯಬೇಕು. ನಾನು 1 ಲಕ್ಷ ರೂ. ನೀಡಿ ಕಸಾಪ ಪೋಷಕ ಸದಸ್ಯತ್ವ ಪಡೆದಿರುವುದು ಇದೀಗ ಸಾರ್ಥಕತೆ ಮೂಡಿಸುತ್ತಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್‌ ಕೇಂದ್ರ ಸಮಿತಿಗೆ ಡಾ| ಮಹೇಶ ಜೋಶಿ, ವಿಜಯಪುರ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಹಾಸಿಂಪೀರ್‌ ವಾಲೀಕಾರ ಆಯ್ಕೆ ಆಗಿರುವುದು ಸೂಕ್ತ. ಈ ಇಬ್ಬರು ಸೇರಿ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರವನ್ನು ಶ್ರೀಮಂತಗೊಳಿಸುವ ಭರವಸೆ ನನಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇಂಗಳೇಶ್ವರ ವಿರಕ್ತಮಠದ ಡಾ| ಸಿದ್ದಲಿಂಗ ಶ್ರೀಗಳು ಮಾತನಾಡಿ, ಕಳೆದ ಒಂದು ದಶಕದಿಂದ ಕನ್ನಡ ಸಾಹಿತ್ಯ ಪರಿಷತ್‌ನ ಯಾವ ಕಾರ್ಯಕ್ರಮಕ್ಕೂ ಯಾವ ಮಠಾಧೀಶರನ್ನೂ ಆಮಂತ್ರಿಸಿರಲಿಲ್ಲ. ಕನ್ನಡ ಸಾಹಿತ್ಯ ಪರಿಷತ್‌ ಅಭ್ಯುದಯದಲ್ಲಿ ಮಠಾಧೀಶರ ಪಾತ್ರವನ್ನು ಅರಿತಿರುವ ಡಾ| ಜೋಶಿ ಮತ್ತು ವಾಲೀಕಾರ ನಾಡಿನ ಶ್ರೀಗಳನ್ನು ಆಹ್ವಾನಿಸಿ ಮೌಲ್ಯ ಹೆಚ್ಚಿಸಿದ್ದಾರೆ ಎಂದರು.

ಬಬಲೇಶ್ವರ ಬೃಹನ್ಮಠದ ಡಾ| ಮಹಾದೇವ ಶ್ರೀಗಳು ಮಾತನಾಡಿ, ರಾಜ್ಯಾಧ್ಯಕ್ಷ ಡಾ| ಮಹೇಶ ಹಾಗೂ ಜಿಲ್ಲಾಧ್ಯಕ್ಷ ಹಾಸಿಂಪೀರ್‌ ಅವರ ಜೋಡಿ ಗುರು ಗೋವಿಂದ ಭಟ್ಟರು ಹಾಗೂ ಶಿಶುನಾಳ ಶರೀಫರಂತೆ ಧಾರ್ಮಿಕ ಸಮನ್ವಯ ಹಾಗೂ ಸಾಹಿತ್ಯದ ಸಮನ್ವಯ ಸಾಧಿಸಲಿ ಎಂದು ಆಶಿಸಿದರು.

ಬಸವನಬಾಗೇವಾಡಿ ವಿರಕ್ತಮಠದ ಸಿದ್ದಲಿಂಗ ಶ್ರೀಗಳು, ಹಿರೇಮಠ ಸಂಸ್ಥಾನದ ಶಿವಪ್ರಕಾಶ ಶಿವಾಚಾರ್ಯರು, ಕೊಲ್ಹಾರ ದಿಗಂಬರೇಶ್ವರ ಮಠದ ಕಲ್ಲಿನಾಥ ದೇವರು, ಇಂಗಳೇಶ್ವರದ ಮನಗೂಳಿ ಹಿರೇಮಠದ ಅಭಿನವ ಸಂಗನಬಸವ ಶ್ರೀಗಳು, ಆಲಮೇಲ ವಿರಕ್ತಮಠ ಮಠದ ಜಗದೇವ ಮಲ್ಲಿಬೊಮ್ಮಯ್ಯ ಶ್ರೀಗಳು, ಮನಗೂಳಿ ಹಜರತ್‌ ಹುಸೇನಪೀರ್‌ ಆಶ್ರಮದ ಡಾ| ಸಯ್ಯದ ಪೈರೋಜಿ ಹುಸೇನಿ ಮಾತನಾಡಿದರು.

ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದ ಆಡಳಿತಾ ಧಿಕಾರಿಯಾಗಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಈರಣ್ಣ ಆಶಾಪುರ ಕಸಾಪ ನೂತನ ಜಿಲ್ಲಾಧ್ಯಕ್ಷ ಹಾಸಿಂಪೀರ್‌ ವಾಲೀಕಾರ ಅವರಿಗೆ ಪರಿಷತ್‌ ಬಾವುಟ ನೀಡಿ ಅಧಿಕಾರ ಹಸ್ತಾಂತರಿಸಿದರು.

ವಿಜಯಪುರ ಮಹಾನಗರ ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ, ಡಾ| ವಿ.ಡಿ. ಐಹೊಳ್ಳಿ, ಭಾರತಿ ಪಾಟೀಲ, ವಿದ್ಯಾವತಿ ಅಂಕಲಗಿ, ವಿಜಯಕುಮಾರ ಘಾಟಗೆ, ದಿಲಾವರ ಖಾಜಿ, ಡಾ| ಡಿ.ಆರ್‌. ನಿಡೋಣಿ, ಆರ್‌.ವೈ. ಕೊಣ್ಣೂರ, ಕಬೂಲ್‌ ಕೊಕಟನೂರ, ಮಹಾದೇವ ರೆಬಿನಾಳ, ಡಾ| ಆನಂದ ಕುಲಕರ್ಣಿ, ಕೆ.ಸುನಂದಾ, ಮಲ್ಲಿಕಾರ್ಜುನ ಅವಟಿ, ಸಂಗಮೇಶ ಸಗರ ಇದ್ದರು.

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

Government will not turn a blind eye if public is inconvenienced: CM Siddaramaiah

Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.