ಇಂದಿರಾ ಕ್ಯಾಂಟೀನ್‌ಗೆ ಉತ್ತಮ ಪ್ರತಿಕ್ರಿಯೆ
Team Udayavani, Feb 17, 2019, 10:04 AM IST
ಬಸವನಬಾಗೇವಾಡಿ: ರಾಜ್ಯಸರಕಾರ ಶುರುಮಾಡಿರುವ ಇಂದಿರಾ ಕ್ಯಾಂಟೀನ್ ಸೇವೆಗೆ ಪಟ್ಟಣ ಸೇರಿದಂತೆ ತಾಲೂಕಿನ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯಸರಕಾರದ ಅನೇಕ ಯೋಜನೆಗಳು ಜಾರಿಗೆ ಬರುವ ಮುನ್ನವೆ ಹಳ್ಳ ಹಿಡಿಯುತ್ತವೆ.
ಇನ್ನೂ ಅನೇಕ ಯೋಜನೆಗಳು ಜಾರಿಗೆ ಬಂದು ಅವುಗಳು ಜನರಿಗೆ ಮತ್ತು ಸಾರ್ವಜನಿಕರಿಗೆ ಸಮರ್ಪಕವಾಗಿ ಮುಟ್ಟುವಲ್ಲಿ ವಿಫಲಗೊಂಡ ಉದಾಹರಣೆಗಳೆ ಹೆಚ್ಚಿವೆ. ಆದರೆ ಬಸವನಬಾಗೇವಾಡಿ ಪಟ್ಟಣದಲ್ಲಿರುವ ಇಂದಿರಾ ಕ್ಯಾಂಟೀನ್‌ಗೆ ಮಾತ್ರ ಪಟ್ಟಣದ ಸೇರಿದಂತೆ ತಾಲೂಕಿನ ಜನತೆ ಉತ್ತಮ ಪ್ರತಿಕ್ರಿಯೆ ವ್ಯಕ್ತ ಪಡಿಸುತ್ತಿರುವುದರಿಂದ ಈ ಯೋಜನೆ ಸಾರ್ವಜನಿಕರಿಗೆ ಸಹಕಾರಿಯಾಗಿದೆ.
ಬೆಳಗ್ಗೆ ಉಪಹಾರ ಕೇವಲ 5 ರೂ. ಹಾಗೂ ಮಧ್ಯಾಹ್ನದ ಊಟ 10 ರೂ.ಗೆ ನೀಡುವ ಮೂಲಕ ಹಸಿದವರ ಹೊಟ್ಟೆಯನ್ನು ತುಂಬಿಸುವ ಕಾರ್ಯ ಉತ್ತಮವಾಗಿದೆ. ವಿಜಯಪುರ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರ ಹಾಗೂ 5 ತಾಲೂಕು ಕೇಂದ್ರ ಹೊಂದಿರುವ ಜಿಲ್ಲೆಯಲ್ಲಿ ವಿಜಯಪುರ ನಗರದಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭಗೊಂಡರೆ ಬೇರೆ ಯಾವ ತಾಲೂಕು ಕೇಂದ್ರಗಳಲ್ಲಿ ಪ್ರಾರಂಭಗೊಂಡಿಲ್ಲ. ಬಸವನಬಾಗೇವಾಡಿ ಪಟ್ಟಣದಲ್ಲಿ ಫೆ. 2ರಂದು ಇಂದಿರಾ ಕ್ಯಾಂಟೀನ್‌ಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಹೀಗಾಗಿ ತಾಲೂಕಿನ ಹಾಗೂ ಪಟ್ಟಣದ ಕಾರ್ಮಿಕರು ವಿದ್ಯಾರ್ಥಿಗಳು ಈ ಯೋಜನೆ ಲಾಭ ಪಡೆಯುತ್ತಿದ್ದಾರೆ.
ಈಗ ಪ್ರತಿನಿತ್ಯ ಬೆಳಗ್ಗೆ ಉಪ್ಪಿಟ್ಟು ಹಾಗೂ ಕೇಸರಿಬಾತ್ ನೀಡಲಾಗುತ್ತದೆ. ಮಧ್ಯಾಹ್ನದ ಊಟಕ್ಕೆ ಚಿತ್ರಾನ್ನ ಹಾಗೂ ಮೊಸರನ್ನ ನೀಡಲಾಗುತ್ತದೆ. ಇನ್ನೊಂದು ದಿನ ಅನ್ನ ಸಾಂಬರ್ ಹಾಗೂ ಮೊಸರನ್ನ ನೀಡಲಾಗುತ್ತದೆ. ಆದರೆ ರಾಜ್ಯಸರಕಾರದ ಆದೇಶ ಪ್ರತಿನಿತ್ಯ ಬೆಳಗ್ಗೆ ಬೇರೆ ಬೇರೆ ತಿಂಡಿ ತಿನಿಸು ನೀಡಬೇಕು. ಮಧ್ಯಾಹ್ನ ಊಟಕ್ಕೂ ಕೂಡಾ ಬೇರೆ ಬೇರೆ ಅಡುಗೆಯನ್ನು ತಯಾರಿಸಿ ಬಡಿಸಬೇಕೆಂಬ ಆದೇಶ ಇದೆ.
ಪ್ರಕಾಶ ಬೆಣ್ಣೂರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್ ಮಗುಚಿ ಇಬ್ಬರು ನಟಿಯರ ಸಾವು
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.