ಭೀಮಾ ತೀರದಲ್ಲಿ ಮತ್ತೆ ಗುಂಡಿನ ಸದ್ದು: ಓರ್ವ ಸಾವು
Team Udayavani, Nov 3, 2020, 1:56 AM IST
ಸಾಂದರ್ಭಿಕ ಚಿತ್ರ
ವಿಜಯಪುರ: ಭೀಮಾ ತೀರದ ಕುಖ್ಯಾತ ಮಹಾದೇವ ಭೈರಗೊಂಡ ಮೇಲೆ ಸೋಮವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಆತನ ಓರ್ವ ಸಹಚರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ತೀವ್ರವಾಗಿ ಗಾಯಗೊಂಡಿರುವ ಮಹಾದೇವ ಸಹಿತ ಮೂವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳು ಪರಾರಿಯಾಗಿದ್ದಾರೆ.
ಚಡಚಣ ತಾಲೂಕು ಕೆರೂರ ಗ್ರಾಮದ ಮಹಾದೇವ ಭೈರಗೊಂಡ ಮೇಲೆ ಗುಂಡಿ ದಾಳಿ ನಡೆದಿದೆ. ಮಹಾದೇವ ಭೈರಗೊಂಡ ಹಾಗೂ ಸಹಚರರು ಖಾಸಗಿ ಭದ್ರತಾ ಸಿಬಂದಿ ಜತೆಗೆ ಮೂರು ಕಾರುಗಳಲ್ಲಿ ಸಂಚರಿಸುತ್ತಿದ್ದಾಗ ಟಿಪ್ಪರ್ ಢಿಕ್ಕಿ ಹೊಡೆದು ಅಪಘಾತ ನಡೆಸಿ ಗುಂಡಿನ ದಾಳಿ ಮಾಡಲಾಗಿದೆ.
ಮಹಾದೇವ ಭೈರಗೊಂಡನಿಗೆ ಮೂರು ಗುಂಡು ತಾಗಿದ್ದು, ಗಂಭೀರ ಗಾಯಗೊಂಡಿದ್ದಾನೆ. ಮತ್ತೂಂದು ಕಾರಿನಲ್ಲಿದ್ದ ಭೈರಗೊಂಡನ ಮ್ಯಾನೇಜರ್ ಬಾಬುರಾಮ್ ಮಾರುತಿ ಕಂಚನಾಳ (64) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕಾರು ಚಲಾಯಿಸುತ್ತಿದ್ದ ಲಕ್ಷ್ಮಣ ಖೋಗಾಂವನ ಕಾಲು ಮುರಿದಿದೆ. ಗನ್ಮ್ಯಾನ್ಗಳಾದ ಜಗಬೀರಸಿಂಗ್ ಪ್ರೇಮಸಿಂಗ್, ರಮೇಶ ಹಾಗೂ ಹುಸೇನಿ ಬಸಪ್ಪ ಭಜಂತ್ರಿ ಅವರಿಗೂ ಗಾಯಗಳಾಗಿವೆ. ದಾಳಿಗೆ ನಿಖರ ಕಾರಣ ತಿಳಿದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.