ಹ್ಯಾಟ್ರಿಕ್ ಸಾಧನೆಗೆ ಭೂಸನೂರ ಕಸರತ್ತು
Team Udayavani, Apr 8, 2018, 5:24 PM IST
ವಿಜಯಪುರ: ಬಸವಾದಿ ಶರಣರ ವಚನಗಳನ್ನು ಸಂರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಜಗದೇವ ಮಲ್ಲಿಬೊಮ್ಮ ಶರಣರ ಆಲಮೇಲ ನೆಲೆಯನ್ನು ಮಡಿಲಲ್ಲಿ ಕಟ್ಟಿಕೊಂಡಿರುವ ಕ್ಷೇತ್ರ ಸಿಂದಗಿ. ಕಬ್ಬು ಬೆಳೆದು, ಸಕ್ಕರೆ ಉತ್ಪಾದಿಸುವ ಭೀಮಾ ತೀರದ ಈ ಕ್ಷೇತ್ರದ ಮತದಾರ ಸತತವಾಗಿ ಮೂರು ಅವಧಿಗೆ ಬಿಜೆಪಿ ಗೆಲ್ಲಿಸಿದ್ದಾನೆ. ಕಾರಣ ಈ ಬಾರಿ ತಮ್ಮ ನೆಲೆ ಮರಳಿ ಪಡೆಯಲು ಕಾಂಗ್ರೆಸ್-ಜೆಡಿಎಸ್ ಹವಣಿಸುತ್ತಿವೆ.
ದೇಶಪ್ರೇಮಿ ಸ್ವಾತಂತ್ರ್ಯ ಹೋರಾಟಗಾರ ರಮಾನಂದ ತೀರ್ಥರು, ಬಸವಪ್ರಿಯ ಎಂ.ಎಂ. ಕಲಬುರ್ಗಿ, ರಂಗರತ್ನ ಹಂದಿಗನೂರು ಸಿದ್ರಾಮಪ್ಪ ಹೀಗೆ ಹತ್ತು ಹಲವು ಪ್ರತಿಭೆಗಳಿಗೆ ಜನ್ಮನೀಡಿದ ಸಿಂದಗಿ ಭೀಮಾ ತೀರದ ಸಮೃದ್ಧ ನೀರಾವರಿ ನೆಲ. ಭೀಮಾ ತೀರದಲ್ಲಿ ಕುಡಿಯುವ ನೀರಿಗೆ ಬರ ಬಂದರೂ ರಕ್ತದ ಕೋಡಿ ಮಾತ್ರ ಹರಿಯುತ್ತಲೇ ಇರುತ್ತದೆ. ಗುಂಡಿನ ಸದ್ದು, ರಕ್ತದ ಕೋಡಿ ಹರಿಸುವ ಮೂಲಕ ಭೀಮಾ ತೀರ ಬೇರೆಯೇ ದೃಷ್ಟಿಕೋನಕ್ಕೆ ಕಾರಣವಾಗಿದೆ.
ವಿಜಯಪುರ ಜಿಲ್ಲೆಯ ವಿಶಿಷ್ಟ ವಿಧಾನಸಭಾ ಕ್ಷೇತ್ರ ಸಿಂದಗಿ. 13 ಚುನಾವಣೆ ಕಂಡಿರುವ ಈ ಕ್ಷೇತ್ರದಲ್ಲಿ ಕಾಂಗ್ರೆಸ್ 7 ವಿಜಯ ಕಂಡಿದ್ದರೂ, ತಲಾ ಒಂದು ಬಾರಿ ಜನತಾ ಪಕ್ಷ, ಜನತಾದಳದ ಅಭ್ಯರ್ಥಿಗಳನ್ನು ಗೆಲ್ಲಿಸಿ ಹಾಗೂ ಹ್ಯಾಟ್ರಿಕ್ ಬಾರಿಸಿರುವ ಬಿಜೆಪಿ ಮೂಲಕ ಕಾಂಗ್ರೆಸ್ಸೇತರ ಭದ್ರಕೋಟೆಯೂ ಎನಿಸಿದೆ. ಒಂದು ಬಾರಿ ಗೆದ್ದವರನ್ನು ಮತ್ತೆ ಗೆಲ್ಲಿಸದ ಕ್ಷೇತ್ರ ಎನಿಸಿದ್ದರೂ, ಸೋತವರನ್ನು ಅನುಕಂಪದಿಂದ ಎರಡನೇ ಸ್ಪರ್ಧೆಯಲ್ಲಿ ಗೆಲ್ಲಿಸಿದ ಇತಿಹಾಸ ಹೊಂದಿದೆ.
ಕಳೆದ ಬಾರಿ ಮರು ಆಯ್ಕೆಯಾದ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಸಿಂದಗಿ ಕ್ಷೇತ್ರದ ಚುನಾವಣೆಯಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. 2008 ಹಾಗೂ 2013ರಲ್ಲಿ ಸತತವಾಗಿ ಗೆದ್ದಿರುವ ಭೂಸನೂರ, ಮೂರನೇ ಅವ ಧಿಗೆ ಸ್ಪರ್ಧಿಸಲು ಸಿದ್ಧರಾಗಿದ್ದಾರೆ.
1989ರ ಚುನಾವಣೆಯಲ್ಲಿ ಸೋತಿದ್ದ ಎಂ.ಸಿ.ಮನಗೂಳಿ ಅವರನ್ನು 1994ರಲ್ಲಿ ಜನತಾ ದಳದಿಂದ ಗೆಲ್ಲಿಸಿದ ಮತದಾರ ಮೊದಲ ಬಾರಿ ಶಾಸಕರಾದರೂ ಸಚಿವರಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿ ಕೊಟ್ಟಿದ್ದಾರೆ. ಆ ನಂತರ ನಡೆದ ನಾಲ್ಕು ಚುನಾವಣೆಗಳಲ್ಲಿ ಸ್ಪರ್ಧಿಸಿದರೂ ಮನಗೂಳಿ ಅವರಿಗೆ ಕ್ಷೇತ್ರದ ಮತದಾರ ಮಾತ್ರ ಅನುಕಂಪ ತೋರಿಲ್ಲ. ಈ ಬಾರಿ ಮತ್ತೆ ಜೆಡಿಎಸ್ ಅಭ್ಯರ್ಥಿಯಾಗಲು ಎಂ.ಸಿ. ಮನಗೂಳಿ ಸನ್ನದ್ಧರಾಗಿದ್ದಾರೆ. ತಮಗೆ ಟಿಕೆಟ್ ಖಚಿತ ಮಾಡಿಕೊಂಡು ತಮ್ಮ ಮಗ ಅಶೋಕ ಮನಗೂಳಿ ಅವರನ್ನು ಕಣಕ್ಕಿಳಿಸುವ ಆಸೆಯನ್ನು ಬಹಿರಂಗವಾಗಿಯೇ ಹೊರ ಹಾಕಿದ್ದಾರೆ. ಹೀಗಾಗಿಮನಗೂಳಿ ಕುಟುಂಬಕ್ಕೆ ಜೆಡಿಎಸ್ ಟಿಕೆಟ್ ಖಚಿತವಾಗಿದೆ.
1999ರಲ್ಲಿ ಕಾಂಗ್ರೆಸ್‌ನಿಂದ ಗೆದ್ದಿದ್ದ ಶರಣಪ್ಪ ಸುಣಗಾರ ಅದಾದ ಬಳಿಕ ನಡೆದ ಮೂರು ಚುನಾವಣೆಯಲ್ಲಿ ಸತತ ಸೋಲು ಅನುಭವಿಸಿದ್ದಾರೆ. ಹೀಗಾಗಿ ಕಳೆದ ವರ್ಷ ನಡೆದ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಮೇಲ್ಮನೆ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಅಪಸ್ವರ ಎತ್ತಿದ್ದಲ್ಲದೇ, ತಮ್ಮ ಗಂಗಾಮತಸ್ಥರ ಸಮಾವೇಶ ಮಾಡಿ ವರಿಷ್ಠರ ವಿರುದ್ಧ ಬಂಡಾಯ ಧ್ವನಿ ಎತ್ತಿದ್ದರು. ಪರಿಣಾಮ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕುತ್ತು ತಂದುಕೊಂಡರು. ಅಲ್ಲದೇ ಸಿಂದಗಿ ಕ್ಷೇತ್ರದಿಂದ ವಿಮುಖರಾಗಿ, ಎ.ಎಸ್. ಪಾಟೀಲ ನಡಹಳ್ಳಿ ಅವರಿಂದ ತೆರವಾಗಲಿರುವ ದೇವರಹಿಪ್ಪರಗಿ ಕ್ಷೇತ್ರದಿಂದ ಟಿಕೆಟ್ ಪಡೆಯಲು ಚಿತ್ತ ನೆಟ್ಟಿದ್ದಾರೆ.
ಶರಣಪ್ಪ ಸುಣಗಾರ ಸಿಂದಗಿ ಕ್ಷೇತ್ರದಿಂದ ವಿಮುಖರಾಗುತ್ತಲೇ ಬೆಂಗಳೂರಿನಿಂದ ವಲಸೆ ಬಂದ ಡಾ|ಮಂಜುಳಾ ಸಾಮಾಜಿಕ ಕೆಲಸಗಳ ಮೂಲಕ ಕ್ಷೇತ್ರದಲ್ಲಿ ಗಟ್ಟಿಗೊಳ್ಳಲು ಹವಣಿಸುತ್ತಿದ್ದಾರೆ. ಸಚಿವ ಎಚ್.ಎಂ.ರೇವಣ್ಣ ಅವರ ಸಂಬಂಧಿ ಎಂದು ಹೇಳಿಕೊಳ್ಳುತ್ತ ತಮ್ಮ ರಾಜಕೀಯ ಭವಿಷ್ಯಕ್ಕೆ ವೇದಿಕೆ ನಿರ್ಮಿಸಿಕೊಳ್ಳುತ್ತಿದ್ದಾರೆ. ಅಲ್ಲದೇ ಈ ಬಾರಿ ಸ್ಥಳೀಯ ನಾಲ್ಕಾರು ಜನರ ಪೈಪೋಟಿ ಮಧ್ಯೆಯೂ
ಟಿಕೆಟ್ ಆಕಾಂಕ್ಷಿಗಳಲ್ಲೇ ಮುಂಚೂಣಿಯಲ್ಲಿದ್ದಾರೆ. ಸ್ಥಳೀಯರಾದ ಬಸಲಿಂಗಪ್ಪ ಗೊಬ್ಬೂರ, ವಿಠ್ಠಲ ಕೊಳ್ಳೂರ, ಅಶೋಕ ವಾರದ, ಎಚ್.ಎಂ.ಯಡಗಿ ಪಾಟೀಲ, ಈರಗಂಟೆಪ್ಪ ಮಾಗಂಟಿ, ಮಲ್ಲಣ್ಣ ಸಾಲಿ ಸೇರಿದಂತೆ ಹಲವರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.’
ಕ್ಷೇತ್ರದ ಬೆಸ್ಟ್ ಏನು?
ಸಿಂದಗಿ ಪಟ್ಟಣದಲ್ಲಿ ಹೈಟೆಕ್ ಬಸ್ ನಿಲ್ದಾಣ, ವಿದ್ಯುತ್ ಸಮಸ್ಯೆ ನೀಗಲು ಆಹೇರಿ ಗ್ರಾಮದಲ್ಲಿ 220 ಕೆ.ವಿ. ವಿದ್ಯುತ್ ಪ್ರಸರಣಾ ಕೇಂದ್ರ ಸ್ಥಾಪನೆಗೆ ಚಾಲನೆ, ದೇವಣಗಾಂವ, ಚಾಂದಕವಟೆ, ಮಲಘಾಣ ಗ್ರಾಮಗಳಲ್ಲಿ 110 ಕೆ.ವಿ. ವಿದ್ಯುತ್ ಪ್ರಸರಣಾ ಕೇಂದ್ರಗಳ ಆರಂಭ, ಗುಬ್ಬೇವಾಡ ಗ್ರಾಮದಲ್ಲಿ 110 ಕೆ.ವಿ. ವಿದ್ಯುತ್ ಪ್ರಸರಣ ಕೇಂದ್ರ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಸಿಂದಗಿ ಪಟ್ಟಣದ ನಿವಾಸಿಗಳಿಗೆ ಕುಡಿಯುವ ನೀರಿಗಾಗಿ ಕೆರೆ ನೀರಿನ ಸಂಗ್ರಹ ಸಾಮರ್ಥ್ಯ ಹೆಚ್ಚಳಕ್ಕೆ ಯರಗಲ್ ಬಿ.ಕೆ.ಗ್ರಾಮದ ಬಳಿ ಕಾಲುವೆಯಿಂದ ಪೈಪ್‌ಲೈನ್ ಅಳವಡಿಕೆ. ಭೀಮಾ ನದಿ ಹಾಗೂ ವಿವಿಧ ಕೆರೆಗಳ ಮೂಲಕ ಗ್ರಾಮೀಣ ನೀರು ಸಮಸ್ಯೆ ನೀಗಲು ಬಹು ಹಳ್ಳಿಗಳ ಕುಡಿಯುವ ನೀರಿನ ಹಲವಯ ಯೋಜನೆಗಳಿಗೆ ಚಾಲನೆ.
ಕ್ಷೇತ್ರದ ದೊಡ್ಡ ಸಮಸ್ಯೆ?
ಆಲಮೇಲಗೆ ತಾಲೂಕು ಕೇಂದ್ರದ ಮಾನ್ಯತೆ ಸಿಗಲಿಲ್ಲ, ಸಿಂದಗಿ ಪಟ್ಟಣದಲ್ಲಿ ಮಿನಿವಿಧಾನಸೌಧ, ಹೈಟೆಕ್ ಮಾರುಕಟ್ಟೆ ನಿರ್ಮಾಣ ಕನಸಾಗೇ ಉಳಿದವು. ಸಿಂದಗಿ ಪಟ್ಟಣದಲ್ಲಿ ಒಳಚರಂಡಿ ನಿರ್ಮಾಣ ಕಾಮಗಾರಿ ಕೈಗೂಡಿಲ್ಲ. ಸಿಂದಗಿ-ಆಲಮೇಲ ಮುಖ್ಯ ರಸ್ತೆ ಅಭಿವೃದ್ಧಿ ಕಾಣಲಿಲ್ಲ. ಸಿಂದಗಿ ಪಟ್ಟಣದಲ್ಲಿ ಹೈಟೆಕ್ ಮಾರುಕಟ್ಟೆ ನಿರ್ಮಾಣ. ಕೊಕಟನೂರ-ಹಂದಿಗನೂರ ಭಾಗದ ಹಳ್ಳಿಗಳ ಜನರಿಗೆ ಚಿಮ್ಮಲಗಿ ಏತ ನೀರಾವರಿ ಯೋಜನೆ ನೀರು ರೈತರ ಜಮೀನಿಗೆ ಬರಲೇ ಇಲ್ಲ
ಶಾಸಕರು ಏನಂತಾರೆ?
ಗ್ರಾಮಗಳ ಅಭಿವೃದ್ಧಿ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಶೇ.80ರಷ್ಟು ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಮಾಡಲಾಗಿದೆ. ದಲಿತರ
ಕೇರಿಗಳಿಗೆ ಸಿಸಿ ರಸ್ತೆ, ಕುಡಿಯುವ ನೀರು ಒದಗಿಸಲಾಗಿದೆ. ಸಿಂದಗಿ ಕ್ಷೇತ್ರವನ್ನು ಶಿಕ್ಷಣಕಾಶಿಯಾಗಿ ಮಾಡಲಾಗಿದೆ. ರೈತರಿಗೆ ಗುಣಮಟ್ಟದ ವಿದ್ಯುತ್ ನೀಡಲು 220 ಕೆ.ವಿ. ವಿದ್ಯುತ್ ಪ್ರಸರಣ ಕೇಂದ್ರ ನಿರ್ಮಾಣಕ್ಕೆ ಭೂಮಿಪೂಜೆ ಮಾಡಿದ ತೃಪ್ತಿ ನನಗಿದೆ. 10 ವರ್ಷದ ಅಧಿಕಾರವನ್ನು ಪ್ರಾಮಾಣಿಕವಾಗಿ ನಿಭಾಯಿಸಿದ್ದೇನೆ. ಕ್ಷೇತ್ರದ ಇನ್ನು ಹೆಚ್ಚಿನ ಅಭಿವೃದ್ಧಿ ಕೆಲಸ ಮಾಡಲು ಜನತೆಯಲ್ಲಿ ಕೂಲಿ
ಕೇಳುತ್ತಿದ್ದೇನೆ.
ರಮೇಶ ಭೂಸನೂರ, ಶಾಸಕ
ಕ್ಷೇತ್ರ ಮಹಿಮೆ
ವಿಧಾನಸಭಾ ಚುನಾವಣೆಯಲ್ಲಿ ಸಿಂದಗಿ ವಿಧಾನಸಭೆ ಕ್ಷೇತ್ರದಲ್ಲಿ ಒಂದು ಅವಧಿಗೆ ಗೆದ್ದವರನ್ನು ಮತ್ತೆ ಗೆಲ್ಲಿಸಿದ ಉದಾಹರಣೆ ಇರಲಿಲ್ಲ. ಈ ಕಾರಣಕ್ಕೆ ಜೆಡಿಎಸ್ ಜಿಲ್ಲಾಧ್ಯಕ್ಷ ಹಾಗೂ ಈ ಬಾರಿ ಸ್ಪರ್ಧಾಕಾಂಕ್ಷಿ ಮಾಜಿ ಸಚಿವ ಎಂ.ಸಿ. ಮನಗೂಳಿ ಸತತ ನಾಲ್ಕು ಬಾರಿ ಸೋಲು ಕಂಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶರಣಪ್ಪ ಸುಣಗಾರ ಸತತ ಮೂರು ಸೋಲು ಕಂಡಿದ್ದಾರೆ. ಆದರೆ ಕಳೆದ ಬಾರಿ ಬಿಜೆಪಿಯಿಂದ ಎರಡು ಬಾರಿ ಗೆದ್ದಿರುವ ರಮೇಶ ಭೂಸನೂರ ಹೊಸ ದಾಖಲೆ ಬರೆದಿದ್ದಾರೆ. ಮತ್ತೂಂದೆಡೆ ಬಿಜೆಪಿ ಸತತ ಮೂರು ಗೆಲುವು ದಾಖಲಿಸಿ, ಹ್ಯಾಟ್ರಿಕ್ ಸಾಧಿಸಿ ಭದ್ರಕೋಟೆ ನಿರ್ಮಿಸಲು ಕಾರಣವಾದರು. ಭೂಸನೂರ ಅವರಿಗಿಂತ ಮೊದಲು 2004ರಲ್ಲಿ ಅಶೋಕ ಶಾಬಾದಿ ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಖಾತೆ ತೆರೆದಿದ್ದರು. ಕ್ಷೇತ್ರದ ಮತದಾರರ ಅಂತಿಮ ಕ್ಷಣದವರೆಗೂ ಕ್ಷೇತ್ರದ ಮತದಾರರ ಯಾರ ಪರ ಎಂಬ ಗುಟ್ಟು ರಟ್ಟು ಮಾಡುವುದೇ ಇಲ್ಲ. ಚುನಾವಣಾ ತಜ್ಞರ ಎಲ್ಲ ಸಮೀಕ್ಷೆಗಳನ್ನು ತಲೆ ಕೆಳಗಾಗುವಂತೆ ಫಲಿತಾಂಶ ನೀಡುತ್ತ ಬರುತ್ತಿದ್ದಾನೆ. ಹೀಗಾಗಿ ಈ ಕ್ಷೇತ್ರದಲ್ಲಿ ಮತದಾರ ತನ್ನ ಜಾಣ ನಡೆಯಿಂದ ನಿರಂತರ ತಾನೇ ಗೆಲ್ಲುತ್ತಿದ್ದಾನೆ.
ಶಾಸಕ ಭೂಸನೂರು ಅವರು ಸಿಂದಗಿ ಕ್ಷೇತ್ರದಲ್ಲಿ ಎರಡು ಅವಧಿಗೆ ಶಾಸಕರಾದ ಈ ಹಂತದಲ್ಲಿ ಗ್ರಾಮೀಣ ರಸ್ತೆಗಳು ಭಿವೃದ್ಧಿಯಾಗಿವೆ. ಆದರೆ ಸಿಂದಗಿಯಿಂದ ಆಲಮೇಲ ಪಟ್ಟಣ ಸಂಪರ್ಕಿಸುವ ಮುಖ್ಯರಸ್ತೆ ಅಭಿವೃದ್ಧಿ ಕನಸಾಗೇ ಉಳಿದಿದೆ. ಸಿಂದಗಿ ಪಟ್ಟಣದಲ್ಲಿ ಒಳಚರಂಡಿ ವ್ಯವಸ್ಥೆ ಅನುಷ್ಠಾನಕ್ಕೆ ಬರಬೇಕು.
ಶ್ರೀಶೈಲ ಕಡಕೋಳ, ಸಿಂದಗಿ
ಸಿಂದಗಿ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳು ಸೌಲಭ್ಯ ವಂಚಿತ ಶಿಕ್ಷಣ ಕ್ಷೇತ್ರವಾಗಿದೆ. ಸರ್ಕಾರಿ ಕಚೇರಿಗಳು ಭ್ರಷ್ಟಾಚಾರದ ಕೇಂದ್ರಗಳಂತಾಗಿವೆ. ಕ್ಷೇತ್ರದಲ್ಲಿ ಕೈಗಾರಿಕೆಗಳು ಬಂದಲ್ಲಿ ನಿರುದ್ಯೋಗ ನಿವಾರಣೆ ಆಗುತ್ತಿತ್ತು ಎಂಬ ನಿರೀಕ್ಷೆಗಳಿಗೆ ಗರಿ ಮೂಡಿಲ್ಲ.
ಸದ್ದಾಂ ಆಲಗೂರ, ಬೋರಗಿ
ಗ್ರಾಮೀಣ ರಸ್ತೆಗಳು 10 ವರ್ಷದಲ್ಲಿ ಅಭಿವೃದ್ಧಿಯಾಗಿವೆ. ನೀರಾವರಿ ಕ್ಷೇತ್ರ ವಿಸ್ತಾರಗೊಂಡಿದ್ದು, ಬಡವರಿಗೆ ಅರ್ಹತೆ ಆಧಾರದಲ್ಲಿ ಮನೆಗಳು ಲಭ್ಯವಾಗಿವೆ. ಜನಸಂಖ್ಯೆಗೆ ಅನುಗುಣವಾಗಿ ಕ್ಷೇತ್ರದಲ್ಲಿ ಇನ್ನೂ ಅಭಿವೃದ್ಧಿ ನಿರೀಕ್ಷೆ ಇದ್ದೇ ಇದೆ.
ಶ್ರೀಶೈಲ ಹೂಗಾರ, ಬ್ಯಾಕೋಡ
ಜಿ.ಎಸ್. ಕಮತರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.