ಪರಿಹಾರ ಕೊಡದಿದ್ದರೆ ಬೃಹತ್ ಹೋರಾಟ: ಕಾಂಗ್ರೆಸ್ ಎಚ್ಚರಿಕೆ
Team Udayavani, Nov 23, 2021, 4:09 PM IST
ಸಿಂಧನೂರು: ಮಳೆಯಿಂದಾಗಿ ತಾಲೂಕಿನಲ್ಲಿ ಭತ್ತದ ಬೆಳೆಹಾನಿಗೆ ಪರಿಹಾರ ಒದಗಿಸಲು ಆಗ್ರಹಿಸಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ನಗರದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಗರದ ಆದಿಶೇಷನ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ ತಹಶೀಲ್ ಕಚೇರಿ ಆವರಣದಲ್ಲಿ ಧರಣಿ ಆರಂಭಿಸಲಾಯಿತು.
ಈ ವೇಳೆ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ, ತಾಲೂಕಿನಲ್ಲಿ 1 ಲಕ್ಷ ಎಕರೆಗೂ ಮೇಲ್ಪಟ್ಟ ಪ್ರದೇಶದಲ್ಲಿ ಭತ್ತದ ಬೆಳೆಹಾನಿಯಾಗಿದೆ. ಜೋಳ, ಹತ್ತಿ, ತೊಗರಿ, ಕಡಲೆ ಬೆಳೆಗಳು ಶೇ.80ರಷ್ಟು ನಷ್ಟವಾಗಿವೆ. ಅಕಾಲಿಕ ಮಳೆಯಿಂದಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಸರಕಾರ ಇದ್ದಾಗ ವೈಮಾನಿಕ ಸಮೀಕ್ಷೆ ನಡೆಸಿ, ಬೆಳೆಹಾನಿ ಪರಿಶೀಲನೆ ಮಾಡಲಾಗಿತ್ತು. ಹೆಕ್ಟೇರ್‌ಗೆ 25 ಸಾವಿರ ರೂ. ಪರಿಹಾರ ನೀಡಲಾಗಿತ್ತು. ಈಗಲೂ ಕೂಡ ಸರಕಾರ ಎಚ್ಚೆತ್ತುಕೊಂಡು ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು. ಆಂಧ್ರಪ್ರದೇಶ ಮಾದರಿಯಲ್ಲಿ ಕರ್ನಾಟಕದಲ್ಲೂ ಭತ್ತ ಖರೀದಿಗೆ ಮಾರ್ಗಸೂಚಿಗಳನ್ನು ಹೊರಡಿಸಬೇಕು. ನವಲಿ ಬಳಿ ಸಮನಾಂತರ ಜಲಾಶಯ ನಿರ್ಮಿಸಬೇಕು. ರೈತರ ಈ ಎಲ್ಲ ಬೇಡಿಕೆಗಳನ್ನು ತ್ವರಿತವಾಗಿ ಈಡೇರಿಸಬೇಕು. ಸರಕಾರ ರೈತರ ಬೇಡಿಕೆ ಈಡೇರಿಸದಿದ್ದರೆ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಜಿಪಂ ಮಾಜಿ ಸದಸ್ಯ ಬಸವರಾಜ ಹಿರೇಗೌಡರ್ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಂಪನಗೌಡ ಬಾದರ್ಲಿ, ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್, ಉಪಾಧ್ಯಕ್ಷ ಮುರ್ತುಜಾ ಹುಸೇನ್, ಜಿಪಂ ಮಾಜಿ ಸದಸ್ಯ ಬಾಬುಗೌಡ ಬಾದರ್ಲಿ, ನಗರ ಕಾಂಗ್ರೆಸ್ ಅಧ್ಯಕ್ಷ ಖಾಜಿಮಲಿಕ್, ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್, ರೈತ ಮುಖಂಡರಾದ ದಶರಥರೆಡ್ಡಿ ಚನ್ನಳ್ಳಿ, ಜಾಫರ್ ಜಾಹಗೀರದಾರ್, ಅಮರೇಶಪ್ಪ ಮಾಡಸಿ ರವಾರ, ನಿರುಪಾದೆಪ್ಪ ಗುಡಿಹಾಳ, ಸಾಯಿ ರಾಮ ಕೃಷ್ಣ, ಸಂತೋಷ್ ಅಂಗಡಿ, ಪಗಡದಿನ್ನಿ ಶ್ರೀನಿವಾಸ್, ಬಸವರಾಜ ಮುರಾರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.