ಪರಿಸರ ಸಂರಕ್ಷಿಸಲು ಡಿಸಿಗೆ ಜಲ ಬಿರಾದರಿ ಸಂಘಟನೆ ಮನವಿ


Team Udayavani, Apr 24, 2022, 5:16 PM IST

19appeal

ವಿಜಯಪುರ:ಅರಣ್ಯ ನಾಶ ತಡೆ, ಅಕ್ರಮ ಗಣಿಗಾರಿಕೆ ತಡೆಗಟ್ಟುವುದು ಸೇರಿದಂತೆ ವಿಜಯಪುರ ಜಿಲ್ಲೆಯಲ್ಲಿ ಪರಿಸರಕ್ಕೆ ಪೂರಕವಾದ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳುವಂತೆ ಜಲ ಬಿರಾದರಿ ಸಂಘಟನೆ ಪದಾಧಿಕಾರಿಗಳು ವಿಶ್ವ ಭೂಮಿ ದಿನಾಚರಣೆ ಪ್ರಯುಕ್ತ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ವೇಳೆ ಸಂಘಟನೆ ಸಂಚಾಲಕ ಪೀಟರ್‌ ಅಲೆಕ್ಸಾಂಡರ್‌ ಮಾತನಾಡಿ, ಜಾಗತಿಕ ತಾಪಮಾನದ ಏರಿಕೆ, ಹವಾಮಾನ ಏರುಪೇರು ಭವಿಷ್ಯದ ಭೂಮಿಯ ಜೀವ ಸಂಕುಲದ ಅಳಿವಿಗೆ ಕಾರಣವಾಗಬಹುದು ಎಂಬ ಭಯ ಹವಾಮಾನ ತಜ್ಞರನ್ನು ಕಾಡುತ್ತಿದೆ. ಈ ತಾಪಮಾನದ ಏರಿಕೆಗೆ ಭೂಮಿ ಕುದಿಯುತ್ತದೆ ಎಂಬ ಸಂದೇಶ ಹರಿಬಿಟ್ಟದ್ದಾರೆ. ಇದರಿಂದ ಎಲ್ಲ ಜೀವ ಸಂಕುಲವೇ ನಾಶದ ಅಂಚಿಗೆ ತಳ್ಳಲ್ಪಡುತ್ತದೆ. ಎನ್ನುವ ಗಂಟೆ ಬಾರಿಸುತ್ತಿದೆ. ಇದರಿಂದಾಗಿ ಸಾಂಕ್ರಾಮಿಕ ರೋಗ ರುಜಿನಗಳು ಇಂದು ಬೆಳೆಯುತ್ತಿರುವ ವಿಜ್ಞಾನಕ್ಕೆ ಸವಾಲಾಗಿ ನಿಂತಿವೆ ಎಂದರು.

ಪ್ರಸ್ತುತ ಸಂದರ್ಭದಲ್ಲಿ ಭೂಮಿಯ ಆರೋಗ್ಯಕ್ಕಾಗಿ ಮನುಷ್ಯರೆಲ್ಲರೂ ಪರಿಸರ ರಕ್ಷಣೆಗೆ ಪ್ರಾಮಾಣಿಕ ಪ್ರಯತ್ನ ಮಾಡಬೇಕಾಗಿದೆ. ವಾತಾವರಣವೆಲ್ಲ ಹಾಳಾಗಲು ಮನುಕುಲವೇ ಕಾರಣವಾಗಿದೆ. ಪಂಚಮಹಾ ಬೂತಗಳಾದ ಗಾಳಿ, ನೀರು, ಆಕಾಶ, ಬೆಂಕಿ, ಮಣ್ಣು ಇವುಗಳ ರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದರು.

ಅವಿಭಜಿತ ಜಿಲ್ಲೆಯಲ್ಲಿರುವ ಕೃಷ್ಣಾ, ಭೀಮಾ, ಮಲಪ್ರಭಾ, ಘಟಪ್ರಭಾ, ಡೋಣಿ ಪಂಚ ನದಿಗಳಿದ್ದರೂ ವರ್ಷವಿಡಿ ಹರಿಯುತ್ತಿಲ್ಲ ಕೆಲ ಕಾಲ ಬತ್ತಿ ಹೋಗುತ್ತಿವೆ. ನೀರಿನ ಹಾಹಾಕಾರ ಸೃಷ್ಟಿಯಾಗುತ್ತಿದೆ. ಹಾಗಾಗಿ ಅವೆಲ್ಲ ಸರ್ವಋತು ಜೀವಂತವಾಗಿಟ್ಟು ನಮ್ಮ ನಾಡು ಹಸಿರಾಗಿಸಬೇಕಿದೆ. ಈಗಿನ ವಾತಾವರಣ ನೋಡಿದರೆ ನಮ್ಮ ತಾಯಿ ಭೂಮಿಯನ್ನು ಕಾಪಾಡಿಕೊಳ್ಳಬೇಕಿದೆ ಎಂದರು.

ಅದಕ್ಕಾಗಿ ಸರಕಾರ ಮತ್ತು ಜಿಲ್ಲಾಡಳಿತ ಜಿಲ್ಲೆಯಲ್ಲಿ ಎಲ್ಲ ರೀತಿಯ ಗಣಿಕಾರಿಕೆ ನಿಯಂತ್ರಿಸಿಬೇಕಿದೆ. ಅರಣ್ಯ ನಾಶ ವಾಯು ಮಾಲಿನ್ಯ, ಜಲ ಮಾಲಿನ್ಯ ದಿಂದಾಗಿ ಪರಿಸರ ನಾಶವಾಗುದನ್ನು ರಕ್ಷಿಸಬೇಕಿದೆ.ಈ ರೀತಿ ಎಲ್ಲ ವಿಪತ್ತುಗಳನ್ನು ಹೊರಬರಲು ರಾಷ್ಟ್ರೀಯ ವಿಪತ್ತು ನಿಯಂತ್ರಣ ಯೋಜನೆಯಲ್ಲಿ ಸರಕಾರ ಕಾರ್ಯೋನುಖವಾಗಬೇಕಿದೆ ಎಂದು ಜಿಲ್ಲಾಡಳಿತದ ಮುಖಾಂತರ ಭಾರತ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಆರ್‌.ಕೆ.ಎಸ್‌ ರೈತ ಸಂಘಟನೆ ಮುಖಂಡ ಬಾಳು ಜೇವೂರ, ಸಂಸ್ಥಾಪಕ ಆಬೀದ್‌ ಸಂಗಮ್‌, ನಾರಿಕಾ ಯೂಥ್‌ ಸಂಸ್ಥೆ ಅಮೀನ್‌ ಹುಲ್ಲೂರ, ಮುನ್ನಾ ಭಕ್ಷಿ, ರಿಜಾ ಸಂಗಮ್‌, ರಿಹಾನ್‌ ಸಂಗಮ, ಮುಬಾರಕ್‌ ವಾಲೀಕಾರ, ಮಹಾದೇವ ಲಿಗಾಡೆ ಇದ್ದರು.

ಟಾಪ್ ನ್ಯೂಸ್

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ

1-qweeqw

Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yathanaa

Waqf Property: ಸಚಿವ ಜಮೀರ್‌ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್‌

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

JPC-Pal–BJP

Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್‌ ರಾಜ್ಯ ಭೇಟಿ: ಕಾಂಗ್ರೆಸ್‌ ಕೆಂಡ

5-muddebihala

Muddebihal: ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ

Waqf JPC President visit : Jolle couple, Jarakiholi visit to Vijayapura

Waqf ಜೆಪಿಸಿ ಅಧ್ಯಕ್ಷ ಭೇಟಿ ಹಿನ್ನೆಲೆ: ವಿಜಯಪುರಕ್ಕೆ ಬಂದ ಜೊಲ್ಲೆ ದಂಪತಿ, ಜಾರಕಿಹೊಳಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

15

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್‌; ತಪ್ಪಿದ ಅನಾಹುತ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.