ಸೈದ್ಧಾಂತಿಕ ವೈರುಧ್ಯದ ಪಕ್ಷಗಳ ಸರ್ಕಾರದ ಪತನಕ್ಕೆ ಬಿಜೆಪಿ ಹೊಣೆಯಲ್ಲ: ಸಚಿವ ನಿರಾಣಿ
Team Udayavani, Jun 27, 2022, 12:43 PM IST
ವಿಜಯಪುರ: ಮಹಾರಾಷ್ಟ್ರ ರಾಜ್ಯದಲ್ಲಿ ಸೈದ್ಧಾಂತಿಕ ವೈರುಧ್ಯದ ಮನಸ್ತಿತಿಯ ಪಕ್ಷಗಳು ಸೇರಿ ಸರ್ಕಾರ ಮಾಡಿದಾಗಲೇ ಕೋಮಾ ಸ್ಥಿತಿ ತಲುಪಿತ್ತು. ಹೀಗಾಗಿ ಸ್ವಯಂಕೃತ ಅಪರಾಧದಿಂದ ಸರ್ಕಾರ ಪತನವಾದರೆ ಬಿಜೆಪಿ ಹೊಣೆಯಾಗಲು ಸಾಧ್ಯವೇ ಎಂದು ರಾಜ್ಯದ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಪ್ರತಿಕ್ರಿಯಿಸಿದ್ದಾರೆ.
ಸೋಮವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆ ಸ್ವಯಂಕೃತ ಅಪರಾಧದ ಫಲ. ವಿಭಿನ್ನ ಸಿದ್ಧಾಂತ, ವೈರುದ್ಯ ಮನಸ್ಥಿತಿಯ ಶಿವಸೇನೆ ಕಾಂಗ್ರೆಸ್, ಎನ್ ಸಿಪಿ ಜೊತೆ ಸೇರಿ ಸರ್ಕಾರ ಮಾಡಿದಾಗಲೇ ಇದು ಕೋಮಾದಲ್ಲಿರುವ ಸರ್ಕಾರ ಬಹಳ ದಿನ ನಡೆಯುವುದಿಲ್ಲ ಎಂಬುದು ಎಲ್ಲರೂ ತಿಳಿದಿತ್ತು. ಒಬ್ಬರ ಬಳಿ ಸ್ಟೇರಿಂಗ್, ಒಬ್ಬರ ಬಳಿ ಬ್ರೇಕ್, ಒಬ್ಬರ ಬಳಿ ಎಕ್ಸಲೇಟರ್ ಎಂಬಂತಾಗಿದ್ದ ಈ ಸರ್ಕಾರ ಈ ವರೆಗೆ ನಡೆದದ್ದೇ ದೊಡ್ಡದು ಎಂದರು.
ಮೂರು ಪಕ್ಷಗಳು ಪ್ರತ್ಯೇಕವಾಗಿ ಚುನಾವಣೆಗೆ ಹೋಗಿದ್ದವು. ಅವರ ಸಿದ್ಧಾಂತಗಳು, ಚುನಾವಣೆ ಪ್ರಣಾಳಿಕೆಗಳು ಬೇರೆ ಬೇರೆ ಆಗಿದ್ದವು. ಚುನಾವಣೆ ಬಳಿಕ ಅಧಿಕಾರದ ಆತುರತದಲ್ಲಿ ಅವರೆಲ್ಲ ಸೇರಿ ಸರ್ಕಾರ ನಡೆಸಿದ್ದೇ ತಪ್ಪಾಗಿದೆ. ಅದೀಗ ತನ್ನ ಫಲ ನೀಡಿದೆ ಎಂದರು.
ಪರಸ್ಪರ ತಮ್ಮಲ್ಲಿನ ಒಡೆಕಿನಿಂದ ಹೊರ ಹೋಗುತ್ತಿದ್ದಾರೆ. ಇದರಲ್ಲಿ ಬಿಜೆಪಿ ಕೈವಾಡವಾಗಲಿ, ಆಪರೇಷನ್ ಕಮಲ ಮಾಡುವ ಪ್ರಶ್ನೆಯೇ ಇಲ್ಲ. ಐವತ್ತು ಶಾಸಕರನ್ನು ಆಪರೇಷನ್ ಕಮಲ ಮಾಡಲು ಸಾಧ್ಯವಿಲ್ಲ. ತಮ್ಮಲ್ಲಿ ಸೈದ್ಧಾಂತಿಕ ಒಡಕಿನಿಂದ ಶಿವಸೇನೆ ಶಾಸಕರು ಹೊರ ಬಂದಿದ್ದಾರೆ. ಮುಂದೆ ಏನು ಮಾಡಬೇಕು ಎಂಬುದು ರಾಜ್ಯ ಹಾಗೂ ರಾಷ್ಟ್ರ ನಾಯಕರು ತೀರ್ಮಾನಿಸುತ್ತಾರೆ ಎಂದರು.
ಇದನ್ನೂ ಓದಿ:ಪ್ರತ್ಯೇಕ ರಾಜ್ಯ ಉದಯ ಆದರೆ ನಾನಂತು ಸಿಎಂ ಆಗಲ್ಲ, ನನ್ನ ಮಗ ಆಗಬಹುದು: ಉಮೇಶ್ ಕತ್ತಿ
ಬಿಜೆಪಿ ಪಕ್ಷ ಪ್ರತಿ ಶಾಸಕರಿಗೆ 50 ಕೋಟಿ ರೂ. ನೀಡಿದೆ ಎಂದು ಆರೋಪಿಸುವ ವಿಪಕ್ಷಗಳ ವರ್ತನೆ ಸರಿಯಲ್ಲ. ಅವರಾಗಿಯೇ ಹೊರಬಂದಿದ್ದಾರೆ. ಭವಿಷ್ಯದಲ್ಲಿ ಶಿವಸೇನೆ ಶಾಸಕರು ಬಿಜೆಪಿ ರಾಜ್ಯ ಮತ್ತು ರಾಷ್ಟ್ರೀಯ ನಾಯಕರನ್ನು ಸಂಪರ್ಕಿಸಿದರೆ ಮುಂದೇನು ಮಾಡಬೇಕು ಎಂಬ ತೀರ್ಮಾನಿಸುತ್ತಾರೆ. ಎರಡು ದಿನ ಕಾದು ನೋಡಿ, ಯಾವುದೇ ಕಾರಣಕ್ಕೂ ಆಪರೇಷನ್ ಕಮಲ ಮಾಡಲ್ಲ ಎಂದರು.
ಮುಂದಿನ ಸಿಎಂ ನಾನೇ ಎಂದು ಹೆಚ್.ಡಿ.ಕುಮಾರಸ್ವಾಮಿ ಕನಸು ಕಾಣುವುದರಲ್ಲಿ ತಪ್ಪೇನಿಲ್ಲ. ರಾಜಕಾರಣ ಮಾಡುವವರು ಕನಸು ಕಾಣಲಿ, ದೇವರು ಅವರಿಗೆ ಒಳ್ಳೇದು ಮಾಡಲಿ ಎಂದು ಆಶಿಸಿದರು.
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆ ಕುರಿತು ಹಿರಿಯ ಸಚಿವ ಉಮೇಶ ಕತ್ತಿ ಹೇಳಿಕೆ ವಯಕ್ತಿಕ. 9 ಬಾರಿ ಚುನಾಯಿತರಾಗಿದ್ದಾರೆ. ಅವರಿಗೆ ಅವರದೇಯಾದ ಅನುಭವವಿದೆ. ಹೀಗಾಗಿ ಅವರ ವೈಯಕ್ತಿಕ ವಿಚಾರ ಪಕ್ಷ ಅಥವಾ ಸರ್ಕಾರದ್ದಲ್ಲ ನಿಲುವಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
MUST WATCH
ಹೊಸ ಸೇರ್ಪಡೆ
Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
Parkala; ಅಂಗಡಿಯಲ್ಲಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ಮಾಲಕ ಅರೆಸ್ಟ್
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್ ಮುಂಡಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.