Vijayapura; ಪ್ರತಿ ಚುನಾವಣೆಯಲ್ಲಿ ಬಿಜೆಪಿ ರಾಜಕೀಯ ಗಿಮಿಕ್: ಸಚಿವ ಸಂತೋಷ ಲಾಡ್
Team Udayavani, Oct 3, 2023, 5:18 PM IST
ವಿಜಯಪುರ: ರೈತರ ಹೋರಾಟ ಪ್ರಕರಣ ಕೈಬಿಡುವಂತೆ ಪತ್ರ ಬರೆಯುವುದು ಸಾಮಾನ್ಯ. ಕಳೆದ ವರ್ಷ ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಭೆ ಪ್ರಕರಣ ಆರೋಪಿಗಳ ಪ್ರಕರಣ ಕೈ ಬಿಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪೊಲೀಸ್ ಇಲಾಖೆಗೆ ಪತ್ರ ಬರೆದಿರುವ ವಿಷಯ ನನಗೆ ತಿಳಿದಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.
ಮಂಗಳವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಯಾವ ಹಿನ್ನೆಲೆಯಲ್ಲಿ ಪತ್ರ ಬರೆದಿದ್ದಾರೋ ನನಗಂತೂ ಗೊತ್ತಿಲ್ಲ, ಈ ವಿಷಯವಾಗಿ ನೀವು ಅವರನ್ನೇ ಕೇಳುವುದು ಸೂಕ್ತ ಎಂದರು.
ರಾಜ್ಯದಲ್ಲಿ ಗಲಭೆಗಳಿಗೆ ಕಾಂಗ್ರೆಸ್ ಸರ್ಕಾರ ಕಾರಣವೆಂದು ವಿರೋಧ ಪಕ್ಷಗಳ ಆರೋಪ ಮಾಡುತ್ತಿರುವುದು ಆಧಾರ ರಹಿತ. ಕಳೇದ 10 ವರ್ಷಗಳಿಂದ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ, ಮಣಿಪುರದಲ್ಲಿ ನಡೆದಿರುವ ಅಮಾನೀಯ ಘಟನೆ ಬಗ್ಗೆ ಮೌನವಾಗಿರುವುದೇಕೆ ಎಂದು ತಿರುಗೇಟು ನೀಡಿದರು.
ಕೇಂದ್ರ ಸರ್ಕಾರದ ರೈತ ವಿರೋಧಿಯಾಗಿದ್ದ ಕೃಷಿ ಕಾಯ್ದೆಗಳನ್ನು ವಿರೋಧಿಸಿದ ಹೋರಾಟದಲ್ಲಿ ರೈತರು ಸಾವನ್ನಪ್ಪಿದ್ದರು. ಹೋರಾಟಗಾರರ ಜನರ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್ ಸೇರಿಧಂತೆ ಹಲವು ರೀತಿಯಲ್ಲಿ ದೌರ್ಜನ್ಯ ನಡೆಸಲಾಗಿದೆ. ಆಗ ಕೋಮು ಸೌಹಾರ್ದತೆಗೆ ಧಕ್ಕೆ ಬರುವುದಿಲ್ಲವೇ ಎಂದು ಪ್ರಶ್ನಿಸಿದರು.
ಹಿಂದೂ, ಮುಸ್ಲಿಂ ಸೇರಿದಂತೆ ಯಾರೇ ದುಷ್ಕೃತ್ಯ ಎಸಗಿದರೂ ಎಲ್ಲರಿಗೂ ಈ ದೇಶದಲ್ಲಿ ಒಂದೇ ಕಾನೂನು. ಗಲಭೆಗಳಾದ ಸಂದರ್ಭದಲ್ಲಿ ಸರ್ಕಾರ ಹಾಗೂ ಸಂಬಂಧಿಸಿದ ಇಲಾಖೆ, ಅಧಿಕಾರಿಗಳು ಈ ವಿಷಯದಲ್ಲಿ ನೋಡಿಕೊಳ್ಳುವ ಕೆಲಸ ಮಾಡುತ್ತಾರೆ ಎಂದರು.
ಇಂಥ ಯಾವ ಘಟನೆಗಳು, ಪ್ರಕರಣಗಳ ಕುರಿತೂ, ಕೇಂದ್ರ ಸರ್ಕಾರ ನಡೆಸುವವರು, ಬಿಜೆಪಿ ನಾಯಕರು ಮಾತನಾಡುವುದಿಲ್ಲ. ಆದರತೆ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುವಾಗ ಸಲ್ಲದ ಆರೋಪ ಮಾಡಿ, ಕೋಮು ಗಲಭೆಗಳ ಗೂಬೆ ಕೂಡಿಸುವ ಕೆಲಸ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಬಿಜೆಪಿ ನಾಯಕರು ರಾಜಕೀಯವಾಗಿ ಇಂಥ ಆರೋಪಗಳನ್ನು ಮಾಡುತ್ತ, ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ 6 ತಿಂಗಳಲ್ಲಿ ಪತನವಾಗಲಿದೆ ಎಂದು ಗಿಮಿಕ್ ಮಾಡುತ್ತಿದ್ದಾರೆ. ಗಲಭೆಗಳಾಗುತ್ತಲೇ 24 ಗಂಟೆಗಳಲ್ಲೇ ಇವರು ಟೀಕೆ ಆರಂಭಿಸುತ್ತಾರೆ ಎಂದು ಟೀಕಾ ಪ್ರಹಾರ ನಡೆಸಿದರು.
ಕೇಂದ್ರದಲ್ಲಿ 10 ವರ್ಷಗಳಿಂದ ಅಧಿಕಾರದಲ್ಲಿರವ ಬಿಜೆಪಿ, ಹಿಂದೂ-ಮುಸ್ಲಿಂ ಎನ್ನುತ್ತಲೇ ಬಂದಿದೆ. ಇಷ್ಟಕ್ಕೂ ಇವರು ಯಾವ ಹಿಂದೂ, ಯಾವ ಮುಸ್ಲಿಮರನ್ನು ಬಡ ರೇಖೆಯಿಂದ ಮೇಲೆ ಎತ್ತುವ ಕೆಲಸ ಮಾಡಿದ್ದಾರೆ. ಜನ ಕಲ್ಯಾಣಕ್ಕೆ ಮಾಡಿರುವ ಇವರ ಕೆಸಲಗಳನ್ನು ತೋರಿಸಿ ಎಂದು ಟೀಕಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮದ ವಿರುದ್ಧ ಟೀಕಾ ಪ್ರಹಾರ ನಡೆಸಿದ ಸಚಿವ ಸಂತೋಷ ಲಾಡ್, ಹಿಂದಿನ ಸರ್ಕಾರಗಳಲ್ಲೂ ಜಿಡಿಪಿ ಚನ್ನಾಗಿಯೇ ಇತ್ತು. ಭಾರತ ಐದನೇ ಸ್ಥಾನದಲ್ಲಿತ್ತು. ಈಗ ಮೂರನೇ ಸ್ಥಾನಕ್ಕೆ ಹೋಗಿದೆ ಎಂದರು.
ಇದನ್ನೂ ಓದಿ:Beauty Tips: ತ್ವಚೆಯ ಸೌಂದರ್ಯ ಹಾಗೂ ಆರೋಗ್ಯ ಕಾಪಾಡಲು ಕಾಫಿಪುಡಿ ಬಳಸಿ…
ಹಿಂದಿನವರು ಉತ್ತಮ ಆಡಳಿತ ನೀಡಿ ಐದನೇ ಸ್ಥಾನಕ್ಕೆ ತಂದಿದ್ದರಿಂದಲೇ ಮೂರನೇ ಸ್ಥಾನಕ್ಕೆ ಹೋಗಲು ಕಾರಣವಾಗಿದೆ. ಆದರೆ ಇವರ ಕಾಲದಲ್ಲಿ ಮಾತ್ರ ಜಿಡಿಪಿ ದರ ಎಲ್ಲಾ ಪ್ರಚಾರ ಮಾಡುತ್ತಿದ್ದಾರೆ. ಇಷ್ಟಕ್ಕೂ ಅಮೇರಿಕಾ, ಚೀನಾ ದೇಶಗಳ ಜಿಡಿಪಿ ದರ ಎಷ್ಟಿದೆ, ಚೀನಾ ವಿಶ್ವದಲ್ಲೇ ಅಧಿಕ ಜನಸಂಖ್ಯೆ ಹೊಂದಿದ್ದು, ನಾವು ಅವರಿಗಿಂತ ಕೆಳಗಿದ್ದೇವೆ ಎಂಬುದನ್ನು ಜನರ ಮುಂದಿಡಲಿ ಎಂದು ಆಗ್ರಹಿಸಿದರು.
ಲೋಸಕಸಭಾ ಚುನಾವಣೆ ಹತ್ತಿರ ಬರುತಿರುವ ಕಾರಣ ಬಿಜೆಪಿ ರಾಜಕೀಯ ಗಿಮಿಕ್ ಮಾಡುತ್ತಾರೆ, ಕಳೆದ ಚುನಾವಣೆ ಪೂರ್ವದಲ್ಲಿ ಪುಲ್ವಾಮಾ ಸೈನಿಕರ ಮೇಲಿನ ದಾಳಿ ಪ್ರಕರಣವನ್ನು ದಾಳವಾಗಿ ಮಾಡಿಕೊಂಡರು. 350 ಕೆ.ಜಿ.ಗೂ ಹೆಚ್ಚು ಆರ್.ಡಿ.ಎಕ್ಸ್. ಎಲ್ಲಿಂತ ಬಂತು, ಭಯೋತ್ಪಾದಕರು ಎಲ್ಲಿಂದ ಬರುತ್ತಾರೆ ಎಂದು ಪತ್ತೆ ಮಾಡುವಲ್ಲಿ ಕೇಂದ್ರ ಸರ್ಕಾರ ಮುಂದಾಗಲಿಲ್ಲ, ಈ ಬಗ್ಗೆ ಜನರಿಗೆ ಸತ್ಯವನ್ನೇ ಹೇಳಲಿಲ್ಲ ಎಂದು ಟೀಕಿಸಿದರು.
ಪುಲ್ವಾಮಾ ದಾಳಿಯ ವಿಷಯದಲ್ಲಿ ಕೇಂದ್ರ ಗುಪ್ತಚರ ಇಲಾಖೆ ವೈಫಲ್ಯ ಎದ್ದು ಕಾಣುತ್ತಿದೆ. ದೇಶದೊಳಗೆ ಭಯೋತ್ಪಾದಕರು ನುಗ್ಗುತ್ತಾರೆ ಎಂದರೆ ಕೇಂದ್ರ ಸರ್ಕಾರ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದ ಅವರು, ಮಾಧ್ಯಮಗಳಂತೂ ಪ್ರಧಾನಿ ಮೋದಿ ಹೊರತಾಗಿ ರಾಷ್ಟ್ರಪತಿಯೂ ಸೇರಿದಂತೆ ಯಾರೆಂದರೆ ಯಾರೂ ಕಾಣುವುದಿಲ್ಲ ಎಂದು ಕುಟುಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.