ಮುಖ್ಯಮಂತ್ರಿ ದಂಗೆ ಹೇಳಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ

Team Udayavani, Sep 22, 2018, 4:48 PM IST

vij-1.jpg

ವಿಜಯಪುರ: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಮ್ಮ ಸರ್ಕಾರ ಕೆಡವಲು ಯತ್ನಿಸುತ್ತಿರುವ ಬಿಜೆಪಿ ವಿರುದ್ಧ ರಾಜ್ಯದ ಜನರನ್ನು ದಂಗೆ ಎಬ್ಬಿಸಲು ಕರೆ ನೀಡಿದ್ದರು. ಈ ಹೇಳಿಕೆ ವಿರೋಧಿಸಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಶುಕ್ರವಾರ ನಗರದ ಮಹಾತ್ಮ ಗಾಂಧೀಜಿ ವೃತ್ತದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಸಿಎಂ ಕುಮಾರಸ್ವಾಮಿ ಹಾಗೂ ರಾಜ್ಯದ ಮೈತ್ರಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ ಮಾತನಾಡಿ, ಬರಿ ಮೂವತ್ತು ಮತ್ತೂಂದು ಶಾಸಕರನ್ನು ಪಡೆದು ಜೆಡಿಎಸ್‌ ನಾಯಕರು ಕಾಂಗ್ರೆಸ್‌ ಜೊತೆ ಅಪವಿತ್ರ ಮೈತ್ರಿ ಮಾಡಿಕೊಂಡು ಅಧಿ ಕಾರಕ್ಕೆ ಬಂದಿರುವ ಸಿಎಂ ಕುಮಾರಸ್ವಾಮಿ ಮೈಮೇಲೆ ಪ್ರಜ್ಞೆ ಕಳೆದುಕೊಂಡು ಮಾತನಾಡುತ್ತಿದ್ದಾರೆ. ಅಧಿಕಾರದ ಮದದಲ್ಲಿ ಮನ ಬಂದಂತೆ ಮಾತನಾಡುತ್ತಿದ್ದಾರೆ. ಸಾಲದು ಎಂಬಂತೆ ರಾಜ್ಯದ ಜನರ ರಕ್ಷಣೆ ಮಾಡಬೇಕಾದ ಸಂವಿಧಾನ ಬದ್ಧವಾಗಿ ಪ್ರಮಾಣವಚನ ಸ್ವೀಕರಿಸಿ, ದಂಗೆ ಎಬ್ಬಿಸುವ ಮಾತನಾಡಿ ಸಂವಿಧಾನ ವಿರೋಧಿ ನೀತಿ ಅನುರಿಸುತ್ತಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು. ಮತ್ತೂಂದೆಡೆ ಕಾಂಗ್ರೆಸ್‌-ಜೆಡಿಎಸ್‌ ಗೂಂಡಾಗಳನ್ನು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರ ಮನೆಗೆ ಕಳುಹಿಸಿ ಗಲಾಟೆ ಮಾಡಿಸಿದ್ದಾರೆ. 

ವಿನಾಕಾರಣ ನಮ್ಮ ಶಾಸಕರ ಬಗ್ಗೆ ಮತ್ತು ಪಕ್ಷದ ಪದಾಧಿಕಾರಿಗಳ ಬಗ್ಗೆ ಟೀಕೆ ಮಾಡುತ್ತಿರುವ ಅವರ ವರ್ತನೆ
ಅವಲೋಕಿಸಿದರೆ ಅಪವಿತ್ರ ಮೈತ್ರಿ ಸರ್ಕಾರ ಬಹಳ ದಿನ ಆಯುಷ್ಯ ಇಲ್ಲ ಎಂಬುದು ಮನವರಿಕೆ ಆಗುತ್ತಿದೆ. ಇದರಿಂದ ಮಾನಸಿಕ ಸ್ಥಿಮಿತ ಕಳೆದುಕೊಂಡು ಸರ್ಕಾರ ಉಳಿಯುವುದಿಲ್ಲ, ಬರುವ ದಿನಗಳಲ್ಲಿ ಕುಮಾರಸ್ವಾಮಿ ಅವರು ಇಂತಹ ಹೀನ ಕೃತ್ಯಗಳನ್ನು ಮಾಡುವುದನ್ನು ಬಿಡದಿದ್ದರೆ ಅವರ ವಿರುದ್ಧ ಮತ್ತು ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿಕಾಂತ ಬಗಲಿ ಮಾತನಾಡಿ, ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಕಾಯಬೇಕಾದ
ಜವಾಬ್ದಾರಿ ಸ್ಥಾನದಲ್ಲಿರುವ ಸಿಎಂ ಕುಮಾರಸ್ವಾಮಿ ಅವರೇ ಖುದ್ದು ಕಾನೂನು ಸುವ್ಯವಸ್ಥೆ ಹಾಳು ಮಾಡುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ದೂರಿದರು.

ಬಿಜೆಪಿ ನಗರ ಘಟಕದ ಅಧ್ಯಕ್ಷ ಶಿವರುದ್ರ ಬಾಗಲಕೋಟ, ಸಂಗರಾಜ ದೇಸಾಯಿ, ವಿವೇಕ್‌ ಡಬ್ಬಿ, ಪ್ರಕಾಶ ಅಕಲಕೋಟ, ಮಹಾನಗರ ಪಾಲಿಕೆ ಸದಸ್ಯರಾದ ರಾಹುಲ್‌ ಜಾಧವ, ಅಶೋಕ ಬೆಲ್ಲದ, ಎಂ.ಎಸ್‌. ಕರಡಿ, ಶಿವಾನಂದ ಭುಂಯಾರ, ಉಮೇಶ ವಂದಾಲ, ಡಾ| ಗೋಪಾಲ ಕಾರಜೋಳ, ಮಲ್ಲಮ್ಮ ಜೋಗುರ, ಭಾರತಿ ಭುಂಯಾರ, ಗೀತಾ ಕುಗನೂರ, ಶಿವರುದ್ರ ಬಾಗಲಕೋಟ, ಮಳುಗೌಡ ಪಟೀಲ, ರಾಜು ಬಿರಾದಾರ, ಶೀತಲಕುಮಾರ ಒಗಿ, ಬಾಬು ಶಿರಸ್ಯಾಡ, ಪಾಪುಸಿಂಗ್‌ ರಜಪೂತ, ರಮೇಶ ಪಡಸಲಗಿ, ಶ್ರೀಕಾಂತ ರಾಠೊಡ, ಕೃಷ್ಣಾ ಗುನ್ನಾಳಕರ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Arrest Warrant Against Robin Uthappa

Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್;‌ ಜೈಲು ಪಾಲಾಗ್ತಾರಾ ಕ್ರಿಕೆಟಿಗ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Why is there a hesitation to name the M. Chinnaswamy stand after Shantha Rangaswamy? What is the controversy?

M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬಂದಿ

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Arrest Warrant Against Robin Uthappa

Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್;‌ ಜೈಲು ಪಾಲಾಗ್ತಾರಾ ಕ್ರಿಕೆಟಿಗ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Why is there a hesitation to name the M. Chinnaswamy stand after Shantha Rangaswamy? What is the controversy?

M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.