ಸರ್ಕಾರಿ ಶಾಲೆಯಲ್ಲಿ ಬಿಜೆಪಿ ಧ್ವಜ ಹಾರಾಟ ಕಾಂಗ್ರೆಸ್ ಪ್ರತಿಭಟನೆ
Team Udayavani, Jul 18, 2017, 2:30 PM IST
ಬಸವನಬಾಗೇವಾಡಿ: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಗಣಿ ಗ್ರಾಮದಲ್ಲಿ ರಾಷ್ಟ್ರಧ್ವಜ ಕಟ್ಟುವ ಸರಕಾರ
ಶಾಲೆಯ ಧ್ವಜಸ್ತಂಭಕ್ಕೆ ಬಿಜೆಪಿ ಕಾರ್ಯಕರ್ತರು ತಮ್ಮ ಪಕ್ಷದ ಧ್ವಜ ಕಟ್ಟಿರುವುದನ್ನು ಖಂಡಿಸಿ ತಾಲೂಕು ಯುವ ಕಾಂಗ್ರೆಸ್
ಕಾರ್ಯಕರ್ತರು ಮನಗೂಳಿ-ಬಿಜ್ಜಳ ರಾಜ್ಯ ಹೆದ್ದಾರಿ ತಡೆದು ವಿಧನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪನವರ ಪ್ರತಿಕೃತಿ
ಧಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಸೋಮವಾರ ತಾಲೂಕಿನ ವಿವಿಧೆಡೆಯಿಂದ ಆಗಮಿಸಿದ ನೂರಾರು ಯುವ ಕಾಂಗ್ರೆಸ್ ಕಾರ್ಯಕರ್ತರು ಬಸವೇಶ್ವರ ವೃತ್ತದಿಂದ ಬಿಜೆಪಿ ವಿರುದ್ಧ ಘೊಷಣೆ ಕೂಗುತ್ತ ಮಿನಿ ವಿಧಾನಸೌಧಕ್ಕೆ ತೆರಳಿದರು. ಅದಕ್ಕೂ ಪೂರ್ವದಲ್ಲಿ ಮಿನಿ ವಿಧಾನಸೌಧದ ಮುಂದೆ
ಮನಗೂಳಿ-ಬಿಜ್ಜಳ ರಾಜ್ಯ ಹೆದ್ದಾರಿ ತಡೆದು ಪ್ರತಿಭಟಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಖಾದರ, ತಾಲೂಕಾ ಯುವ ಅಧ್ಯಕ್ಷ ಅಬುಬಕರ ಬಿಜಾಪುರ, ತಾಲೂಕು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರುಕ್ಮಿಣಿ ರಾಠೊಡ, ಮುಖಂಡ ಶಂಕರಗೌಡ ಬಿರಾದಾರ ಮಾತನಾಡಿ, ಬಿಜೆಪಿ ಬಾಯಿ ಚಪಲಕ್ಕೆ ಮಾತ್ರ ನಾವು ದೇಶ ಪ್ರೇಮಿಗಳು, ದೇಶಾಭಿಮಾನಿಗಳು ಹಾಗೂ ದೇಶದ ಸಂಸ್ಕೃತಿ ಸಂಪ್ರಾದಾಯಕ್ಕೆ ಬದ್ಧ ಎಂದು ಹೇಳುತ್ತಾರೆ. ಆದರೆ ಅವರು ಮಾಡುವ ಕೆಲಸ ನೋಡಿದರೆ ಮನುಕುಲವೇ ನಾಚುವಂತಾಗಿದೆ ಎಂದು ಹೇಳಿದರು.
ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಗಣಿ ಗ್ರಾಮದಲ್ಲಿ ರಾಷ್ಟ್ರಧ್ವಜ ಕಟ್ಟುವ ಸರಕಾರ ಶಾಲೆ ಧ್ವಜಕಂಬಕ್ಕೆ ಬಿಜೆಪಿ
ಕಾರ್ಯಕರ್ತರು ತಮ್ಮ ಪಕ್ಷದ ಧ್ವಜ ಕಟ್ಟುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಘಟನೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು
ಸಮಗ್ರ ತನಿಕೆ ನಡೆಸಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಕೃತ್ಯ ಎಸಗಿದ ವ್ಯಕ್ತಿಯನ್ನು ಜಿಲ್ಲೆಯಿಂದ ಗಡಿಪಾರು
ಮಾಡಬೇಕು. ಅಂದಾಗ ಮಾತ್ರ ನ್ಯಾಯ ಸಿಕ್ಕಂತಾಗುತ್ತದೆ ಎಂದು ಹೇಳಿದರು.
ಬಸವನಬಾಗೇವಾಡಿ ತಾಲೂಕು ಇಡಿ ರಾಜ್ಯದಲ್ಲಿ ಶಾಂತಿ ಮತ್ತು ನೆಮ್ಮದಿಗೆ ಹೆಸರುವಾಸಿ. ಸಮಾನತೆ ಸಾರಿದ ಅಣ್ಣ ಬಸವಣ್ಣವರ
ಪುಣ್ಯ ಭೂಮಿಯಲ್ಲಿ ಜಾತಿ- ಜಾತಿ ಮತ್ತು ಧರ್ಮ-ಧರ್ಮದಲ್ಲಿ ವಿಷ ಬೀಜ ಬಿತ್ತುವಂತ ಬಿಜೆಪಿ ಕಾರ್ಯಕರ್ತರು ಸರಕಾರಿ ಶಾಲೆ ಆವರಣದ ರಾಷ್ಟ್ರಧ್ವಜ ಹಾರಾಡಿಸುವ ಧ್ವಜಸ್ತಂಭಕ್ಕೆ ಬಿಜೆಪಿ ಧ್ವಜ ಹಾರಿಸಿ ಮೂಲಕ ರಾಷ್ಟ್ರಕ್ಕೆ ಅವಮಾನಗೊಳಿಸಿದ್ದಾರೆ.
ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಜಿಲ್ಲಾಡಳಿತ ಹಿಂದೇಟು ಹಾಕಿದಲ್ಲಿ ರಾಜ್ಯವ್ಯಾಪಿ ಉಗ್ರ ಹೋರಾಟ
ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ನಂತರ ತಹಶೀಲ್ದಾರ್ ಮೂಲಕ ಜಿಲ್ಲಾ ಧಿಕಾರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಎಪಿಎಂಸಿ ನಿರ್ದೇಶಕ ಶೇಖರ ಗೊಳಸಂಗಿ, ಪುರಸಭೆ ಸದಸ್ಯ ಮುದುಕು ಬಸರಕೊಡ, ತಾನಾಜಿ ನಾಗರಾಳ,
ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಸಾದ ದಳವಾಯಿ, ಮುತ್ತು ಪತ್ತಾರ, ದಾನ್‌ಅವಾಜಿ ಮುಲ್ಲಾ, ದೇವೇಂದ್ರ
ಚವ್ಹಾಣ, ವಾಸಿಮ್ ಪಕಾಲಿ, ಈರಣ್ಣ ಕುಂಬಾರ, ಸುಂದರಪಾಲ ರಾಠೊಡ, ಕಾಶಿಮ್ ಹವಾಲ್ದಾರ್, ಬಂದೇನವಾಜ ಪಕಾಲಿ,
ಬಂಡೆಪ್ಪ ನಾಟೀಕಾರ, ಪ್ರವೀಣ ವಾಲೀಕಾರ, ಸದಾಶಿವ ಚಿಮ್ಮಲಗಿ, ಲತೀಫ್ ಬಾಗವಾನ, ಸಿದ್ರಾಮ ಪಾತ್ರೋಟ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.