ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ: ನಡಹಳ್ಳಿ
Team Udayavani, Oct 14, 2021, 5:11 PM IST
ದೇವರಹಿಪ್ಪರಗಿ: ರಾಜ್ಯ ಹಾಗೂ ಕೇಂದ್ರದಲ್ಲಿ ನಮ್ಮದೆ ಸರ್ಕಾರ ಇರುವುದರಿಂದ ಕ್ಷೇತ್ರದ ಅಭಿವೃದ್ಧಿಗೆ ಅನುಕೂಲವಾಗಲಿದ್ದು ಬಿಜೆಪಿ ಗೆಲುವಿಗೆ ಸಹಕಾರ ನೀಡಬೇಕು ಎಂದು ಮುದ್ದೇಬಿಹಾಳ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಹೇಳಿದರು.
ಬುಧವಾರ ಸಿಂದಗಿ ಮತಕ್ಷೇತ್ರದ ಗುಬ್ಬೇವಾಡ, ಮಾಡಬಾಳ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮತಯಾಚಿಸಿ ಮಾತನಾಡಿದ ಅವರು, ಆಕಸ್ಮಿಕವಾಗಿ ಬಂದಿರುವ ಉಪಚುನಾವಣೆಯಲ್ಲಿ ಸಿಂದಗಿ ಹಾಗೂ ಹಾನಗಲ್ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ ಎಂದರು.
ನಮ್ಮ ಪಕ್ಷದಲ್ಲಿ ಯುವ ಕಾರ್ಯಪಡೆ ಅತ್ಯಂತ ಉತ್ತಮ ರೀತಿಯಲ್ಲಿ, ಕೆಳ ಮಟ್ಟದಲ್ಲಿ ಕಾರ್ಯ ನಿರ್ವಹಿಸುತ್ತ ಪಕ್ಷ ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಚುನಾವಣೆಯಲ್ಲಿ ಸಂಘಟನಾತ್ಮಕವಾಗಿ ಮೂಲ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರತಿ ಬೂತ್ ಮಟ್ಟದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತ ಪಡೆದು ಗೆಲುವಿಗೆ ಸಹಕಾರ ನೀಡಲಾಗುತ್ತಿದೆ.
ರಮೇಶ ಭೂಸನೂರ ಅವರು, ಕ್ಷೇತ್ರದಾದ್ಯಂತ ಮಾಡಿದ ಸಾಧನೆಗಳು, ಅವರ ಸರಳ ವ್ಯಕ್ತಿತ್ವ, ಸಭ್ಯ ರಾಜಕಾರಣಕ್ಕೆ ಸಾಕ್ಷಿಯಾಗಿದೆ. ಎಲ್ಲ ಸಮಾಜದವರನ್ನು ಕರೆದುಕೊಂಡು ಹೋಗುವ ಮನೋಭಾವ ಹೊಂದಿದ್ದು, ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಲಿದೆ. ಕೇಂದ್ರದಲ್ಲಿ ಮೋದಿ ಸರಕಾರ, ರಾಜ್ಯದಲ್ಲಿ ಬೊಮ್ಮಾಯಿ ಸರ್ಕಾರ ಉತ್ತಮ ಆಡಳಿತ ನೀಡುತ್ತಿದ್ದು, ಜನಪರ ಯೋಜನೆಗಳೂ ಉಪಚುನಾವಣೆ ಗೆಲುವಲ್ಲಿ ಪ್ರಮುಖ ಪಾತ್ರ ವಹಿಸಲಿವೆ. ಉಪಚುನಾವಣೆ ಯಾವುದೇ ಚುನಾವಣೆಗೆ ದಿಕ್ಸೂಚಿಯಲ್ಲ. ಖಂಡಿತವಾಗಲು ಎರಡು ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕ್ಷೇತ್ರದ ಗುಬ್ಬೇವಾಡ, ಖಾನಾಪುರ, ಮಾಡಬಾಳ, ಬನ್ನೆಟ್ಟಿ ಪಿಎ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ಸಂಚರಿಸಿ ಮನೆ ಮನೆಗೆ ಭೇಟಿ ನೀಡಿ ಕಾರ್ಯಕರ್ತರ ಜೊತೆ ಕೂಡಿ ಮತಯಾಚಿಸಿದರು. ಚುನಾವಣಾ ತಂತ್ರಗಳನ್ನು ರಚಿಸಿ ಪ್ರತಿ ಬೂತ್ ಮಟ್ಟದಲ್ಲಿ ಬಿಜೆಪಿ ಮತಗಳು ಹೆಚ್ಚಿಗೆ ಬರುವಂತೆ ನೋಡಿಕೊಳ್ಳಲು ಕಾರ್ಯಕರ್ತರಲ್ಲಿ ಹುರುಪು ತುಂಬಿದರು.
ಈ ಸಂದರ್ಭದಲ್ಲಿ ಗುಬ್ಬೆವಾಡದ ಮುಖಂಡರಾದ ಸುರೇಶ ಮಳಲಿ, ಭೀಮಣ್ಣ ಕರಭಂಟನಾಳ, ರಮೇಶ ದೊಡ್ಡಮನಿ, ಮುತ್ತು ಹರನಾಳ, ನಾನಾಗೌಡ ಬಿರಾದಾರ, ಖಾನಾಪುರದ ಶರಣಗೌಡ ಬಿರಾದಾರ, ಗುತ್ತಪ್ಪಗೌಡ ಅಸಮತಾಪುರ, ಶಂಕರಗೌಡ ಬೋನಾಳ, ಬಸನಗೌಡ ಪಾಟೀಲ, ಶಂಕರ ಕೆಂಚಗೊಂಡ, ಮಡಿವಾಳಪ್ಪಗೌಡ ಕೋಟಿಖಾನಿ, ಜಗನ್ನಾಥ ನಾಯ್ಕೋಡಿ, ಸಂಗನಗೌಡ ಪಾಟೀಲ, ಮಹಿಬೂಬ ಪಟೇಲ್, ಅರ್ಜುನ ರೆಬಿನಾಳ, ನಿಂಗಣ್ಣ ಇಜೇರಿ, ಸೋಮು ಸಿಂದಗಿ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.