ಬ್ಲಾಕ್ ಫಂಗಸ್ : ವಿಜಯಪುರದಲ್ಲಿ ಮೂವರು ರೋಗಿಗಳು ಗುಣಮುಖ
Team Udayavani, May 20, 2021, 8:17 PM IST
ವಿಜಯಪುರ : ಕೋವಿಡ್ ಕಾಯಿಲೆಗೆ ತುತ್ತಾಗಿ ಗುಣಮುಖರಾಗಿದ್ದ ವ್ಯಕ್ತಿಗಳಲ್ಲಿ ಕಾಣಿಸಿಕೊಳ್ಳುವ ಬ್ಲಾಕ್ ಫಂಗಸ್ ಕಾಯಿಲೆಗೆ ವಿಜಯಪುರ ಜಿಲ್ಲೆಯಲ್ಲಿ ಯಶಸ್ವಿ ಚಿಕಿತ್ಸೆ ನೀಡಿ ಗುಣಪಡಿಸಲಾಗಿದೆ.
ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ಬಿ.ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಇದಕ್ಕಾಗಿ ಪ್ರತ್ಯೇಕ ವಾರ್ಡ್ ಆರಂಭಿಸಲಾಗಿದೆ. ಸದರಿ ಬ್ಲ್ಯಾಕ್ ಫಂಗಸ್ ರೋಗಿಗಳಲ್ಲಿ ಮೂವರು ಯಶಸ್ವಿ ಚಿಕಿತ್ಸೆಯಿಂದ ಮನೆಗೆ ಮರಳಿದ್ದಾರೆ ಎಂದು ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ.ಆರ್.ಎಸ್.ಮುಧೋಳ ಹೇಳಿದ್ದಾರೆ.
ನೆರೆಯ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆ, ಕಲಬುರಗಿ, ಬಾಗಲಕೋಟ, ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳ ಒಟ್ಟು 25 ರೋಗಿಗಳು ಇಲ್ಲಿ ಬ್ಲಾಕ್ ಫಂಗಸ್ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಇದರಲ್ಲಿ ಬುಧವಾರ ಸದರಿ ರೋಗ ಪೀಡಿತರಲ್ಲಿ ಮೂವರು ಗುಣಮುಖರಾಗಿ ಮನೆಗೆ ಮರಳಿದ್ದು, 6 ಜನರಿಗೆ ಶಸ್ತ್ರಚಿಕಿತ್ಸೆ ನೆರವೇರಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಬ್ಲಾಕ್ ಫಂಗಸ್ ರೋಗಿಗಳ ಚಿಕಿತ್ಸೆಗೆ ಅಗತ್ಯ ಇರುವ ಆಂಪೊಟೆರಿಸಿನ್ ಔಷಧಿ ಪೂರೈಕೆ ಸರ್ಕಾರದ ನಿಯಂತ್ರಣದಲ್ಲಿದೆ. ಹೀಗಾಗಿ ಅಗತ್ಯ ಪ್ರಮಾಣದಲ್ಲಿ ಆಂಪೋಟರಿಸಿಸ್ ಔಷಧಿ ಪೂರೈಕೆ ಆಗುತ್ತಿಲ್ಲ. ರೋಗಿಗಳ ಸಂಖ್ಯೆಗೆ ಅನುಗುಣವಾಗಿ ಸದರಿ ಔಷಧಿಯನ್ನು ಪೂರೈಸಿದರೆ, ಚಿಕಿತ್ಸೆ ಪರಿಣಾಮಕಾರಿ ಆಗುವ ಜೊತೆಗೆ, ರೋಗಿಗಳಿಗೆ ಸಹಕಾರಿ ಆಗಲಿದೆ. ಎಂದು ಬಿ.ಎಂ.ಪಾಟೀಲ್ ವೈದ್ಯಕೀಯ ಕಾಲೇಜು, ಆಸ್ಪತ್ರೆ ಪ್ರಾಚಾರ್ಯ ಡಾ.ಅರವಿಂದ ಪಾಟೀಲ ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.