ಕೋವಿಡ್ ಗೆ ಬಲಿಯಾದ ಬಿಎಲ್ಡಿಇ ಸಂಸ್ಥೆಯ ಸಿಬ್ಬಂದಿ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ವಿತರಣೆ


Team Udayavani, Jun 16, 2021, 3:01 PM IST

ಕೋವಿಡ್ ಗೆ ಬಲಿಯಾದ ಬಿಎಲ್ಡಿಇ ಸಂಸ್ಥೆಯ ಸಿಬ್ಬಂದಿ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ವಿತರಣೆ

ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿದ್ದ 16 ಸಿಬ್ಬಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದು, ಇವರ ಕುಟುಂಬಕ್ಕೆ ಆಸರೆಯಾಗಲು ಸಂಸ್ಥೆಯಿಂದ ತಲಾ 1 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ. ಅಲ್ಲದೇ ಮೃತರ ಕುಟುಂಬದ ಒಬ್ಬರಿಗೆ ಉದ್ಯೋಗ ನೀಡುವ ಭರವಸೆ ನೀಡಲಾಗಿದೆ.

ಬುಧವಾರ ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸಿ, ಮೃತರ ಕುಟುಂಬ ಸದಸ್ಯರಿಗೆ ಪರಿಹಾರದ ಚಕ್ ವಿತರಿಸಿ ಮಾತನಾಡಿದ ಬಿ.ಎಲ್.ಡಿ.ಇ. ಸಂಸ್ಥೆಯ ಅಧ್ಯಕ್ಷ ಮಾಜಿ ಸಚಿವ ಡಾ.ಎಂ.ಬಿ.ಪಾಟೀಲ, ಸಂತ್ರಸ್ತ ಈ ಎಲ್ಲ ಕುಟುಂಬಗಳಿಗೂ ಸಂಸ್ಥೆ ಅಗತ್ಯ ಇರುವ ಎಲ್ಲ ಸೌಲಭ್ಯ ಕಲ್ಪಿಸುವುದಾಗಿ ಭರವಸೆ ನೀಡಿದರು.

ಇದನ್ನೂ ಓದಿ:2 ವರ್ಷ ಯಡಿಯೂರಪ್ಪನವರೇ ಸಿಎಂ ಆಗಿರ್ತಾರೆ, ನಾಯಕತ್ವ ಬದಲಾವಣೆ ಇಲ್ಲ : ಕಟೀಲ್

ಕೋವಿಡ್ ಮಹಾ ಸಾಂಕ್ರಾಮಿಕ ರೋಗಕ್ಕೆ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯ ಉಪಕುಲಪತಿ ಡಾ.ಎಂ.ಎಸ್.ಬಿರಾದಾರ, ವೈದ್ಯ ಡಾ.ಆರ್.ಎಂ.ಪೋಟೆಕರ, ಟೆಕ್ನಿಷಿಯನಗಳಾದ ರುದ್ರಗೌಡ ಎಸ್.ಪಾಟೀಲ, ಜಗದೀಶ ಬಿ.ಬಡಿಗೇರ, ಅಟೆಂಡರಗಳಾದ ಸುರೇಂದ್ರ ಭಾವಿಮನಿ, ದ್ರಾಕ್ಷಾಯಣಿ ಪೂಜಾರಿ, ಆಡಳಿತ ಕಛೇರಿ ಎಫ್.ಡಿ.ಸಿ ಪ್ರಕಾಶ ಖ್ಯಾಡದ, ಜೆ.ಎಸ್.ಎಸ್. ಕಾಲೇಜಿನ ಎಸ್ಡಿಸಿ ತನುಜಾ ಪಾಟೀಲ, ಎಸ್.ಎಸ್.ಮಾಧ್ಯಮಿಕ ‘ಎ’ ಶಾಲೆ ಶಿಕ್ಷಕ ಪ್ರಕಾಶ ತೊರವಿ, ತಿಕೋಟಾ ನ್ಯೂ ಆರ್ಟ್ಸ್ ಕಾಲೇಜು ಉಪನ್ಯಾಸಕ ಡಾ.ಎಂ.ಬಿ.ಸಿಂಗೆ ಹಾಗೂ ಎಸ್ಡಿಸಿ ಇರ್ಫಾನ್ ಜಮಖಂಡಿ, ಜಮಖಂಡಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ರಮೇಶ ಬಿರಾದಾರ, ಲಚ್ಯಾಣ ಎಸ್.ಎಸ್.ಅಗ್ರಿ ಸ್ಕೂಲ್ ಶಿಕ್ಷಕ ಸಿದ್ದಪ್ಪ ಇಂಗಳೇಶ್ವರ, ಎಂಜಿನಿಯರಿಂಗ್ ಕಾಲೇಜಿನ ಜವಾನ ಶ್ರೀಶೈಲ ನಾವಿ, ನಗರದ ಎಸ್.ಎಸ್.ಎಂ ಪಾಲಿಟೆಕ್ನಿಕ್‍ನ ವೆಲ್ಡರ್ ಗೊವಿಂದಪ್ಪ ಹಾದಿಮನಿ ಸೇರಿ ಸಂಸ್ಥೆಯ 16 ಜನರು ನಮ್ಮನ್ನ ಅಗಲಿರುವುದಿ ದುಃಖಕರ ಸಂಗತಿ ಎಂದರು.

ಸಾಂಕ್ರಾಮಿಕ ರೋಗಕ್ಕೆ ಬಲಿಯಾದ ಸಂಸ್ಥೆಯ ನೌಕರರ ಕುಟುಂಬಕ್ಕೆ ಮತ್ತು ಮಕ್ಕಳ ಮುಂದಿನ ವಿದ್ಯಾಭ್ಯಾಸಕ್ಕೆ ಸಂಸ್ಥೆಯಿಂದ 1 ಲಕ್ಷ ರೂ. ಚೆಕ್ ನೀಡಲಾಗುತ್ತಿದೆ. ಕುಟುಂಬ ನೇರ ವಾರಸುದಾರರಲ್ಲಿ ಒಬ್ಬರಿಗೆ ಸಂಸ್ಥೆಯಲ್ಲಿ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗ ನೀಡುವುದಾಗಿ ಎಂ.ಬಿ.ಪಾಟೀಲ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬಿಎಲ್ಡಿಇ ಡೀಮ್ಡ್ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ.ಆರ್.ಎಸ್.ಮುಧೋಳ, ಪ್ರಾಚಾರ್ಯ ಡಾ.ಅರವಿಂದ ಪಾಟೀಲ, ಆಡಳಿತಾಧಿಕಾರಿಗಳಾದ ಡಾ.ರಾಘವೇಂದ್ರ ಕುಲಕರ್ಣಿ, ಕೆ.ಜಿ. ಪೂಜೇರಿ, ಐ.ಎಸ್. ಕಾಳಪ್ಪನವರ, ಮುಖ್ಯ ಹಣಕಾಸು ಅಧಿಕಾರಿ ದೇವೇಂದ್ರ ಅಗರವಾಲ, ಡಾ.ಎಂ.ಎಸ್. ಮಧಭಾವಿ, ಪ್ರಚಾರಾಧಿಕಾರಿ ಡಾ.ಮಹಾಂತೇಶ ಬಿರಾದಾರ ಸೇರಿದಂತೆ ಮೃತರ ಕುಟುಂಬ ವರ್ಗದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.