ವಿಜಯಪುರದಲ್ಲಿ “ಬಾಂಬ್’ ಘರ್ಷಣೆ
Team Udayavani, Jun 18, 2018, 6:00 AM IST
ವಿಜಯಪುರ: ಹರಿಣ ಶಿಕಾರಿ ಸಮುದಾಯಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಭಾನುವಾರ ಘರ್ಷಣೆ ನಡೆದಿದೆ. ಘರ್ಷಣೆಯಲ್ಲಿ ಕಚ್ಚಾ ಬಾಂಬ್, ಪೆಟ್ರೋಲ್ ಬಾಂಬ್ ಸೇರಿ ಹಲವು ಮಾರಕಾಸ್ತ್ರ ಬಳಸಿದ್ದು, 25ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ನಿಭಾಯಿಸಿರುವ ಪೊಲೀಸರು, 20ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ಇರುವ ಕಾರಣ ಡಿಎಆರ್ ಪಡೆ ನಿಯೋಜನೆಗೊಂಡಿದೆ.
ರವಿವಾರ ನಗರದ ಹರಿಣ ಶಿಕಾರಿ ಕಾಲೋನಿಯಲ್ಲಿ ದ್ವಿಚಕ್ರ ವಾಹನ ವ್ಯಕ್ತಿಯೊಬ್ಬರಿಗೆ ತಗುಲಿಸಿದ್ದಲ್ಲದೇ ಹಲ್ಲೆ ನಡೆಸಿದ್ದೇ ಇಡೀ ಘಟನೆಗೆ ಕಾರಣ ಎನ್ನಲಾಗಿದೆ. ಆದರೆ ವಾಸ್ತವಿಕವಾಗಿ ಕಳೆದ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ-ಕಾಂಗ್ರೆಸ್ ಅಭ್ಯರ್ಥಿ ಪರ ಮತ ಹಾಕಿದ ರಾಜಕೀಯ ದ್ವೇಷಕ್ಕೆ ನಡೆದ ಘಟನೆ ಎಂದು ಸ್ಥಳೀಯರು ಹೇಳುತ್ತಾರೆ. ಹರಿಣ ಶಿಕಾರಿ ಕಾಲೋನಿಯ ಹರಿಣ ಶಿಕಾರಿ ಸಮುದಾಯದವರಾದ ನಾರಾಯಣ ರಾಠೊಡ, ದೀಪಕ ಕಾಳೆ, ಹೊಸಗೌಡ, ರವಿ ಬಲರಾಮ ಕಾಳೆ ಹಾಗೂ ನಗರಸಭೆ ಮಾಜಿ ಸದಸ್ಯೆ ಮಂಗಳಾದೇವಿ ಚವ್ಹಾಣ, ಅಪ್ಪು ಅವರೊಂದಿಗೆ ಗುಂಪು ಘರ್ಷಣೆ ನಡೆದಿದೆ.
ಗಲಾಟೆ ಮಾತಿನ ಚಕಮಕಿ, ಹಲ್ಲೆ ಹಂತ ದಾಟುತ್ತಲೇ ಕಲ್ಲು-ಇಟ್ಟಿಗೆ ತೂರಾಟ ನಡೆದಿದೆ. ಅಷ್ಟೇ ಅಲ್ಲ, ಬಡಿಗೆಗಳಿಂದ ಹೊಡೆದಾಡಿಕೊಂಡು, ಕೈ ಬಾಂಬ್‌ಗಳನ್ನೂ ಪರಸ್ಪರ ಎಸೆದುಕೊಂಡಿದ್ದಾರೆ. ಪೆಟ್ರೋಲ್ ಬಾಂಬ್ ಬಳಸಿ ಜೋಪಡಿಗಳನ್ನು ಸುಡುವ ಯತ್ನ ನಡೆದಿದೆ. ಅಷ್ಟರಲ್ಲಿ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಡಿಎಸ್ಪಿ ಅಶೋಕ್ ನೇತೃತ್ವದ ಪೊಲೀಸರು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ. ಘರ್ಷಣೆಯಲ್ಲಿ ಸುಮಾರು 25 ಜನರಿಗೆ ಗಾಯಗಳಾಗಿದ್ದು, ನಗರದ ವಿವಿಧ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಬಳಿಕ ಪೊಲೀಸರು ಹಲವು ಮನೆಗಳನ್ನು ಶೋಧಿ ಸಿದ್ದು, ಸಾಕಷ್ಟು ಮಾರಕಾಸ್ತ್ರಗಳು ಸಿಕ್ಕಿವೆ ಎನ್ನಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಡಿಎಆರ್ ಪೊಲೀಸರನ್ನು ಭದ್ರೆತೆಗೆ ನಿಯೋಜಿಸಲಾಗಿದೆ. ಘಟನೆ ಕುರಿತು ಗೋಲಗುಮ್ಮಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಗೆ ಕಾರಣ ಏನು?
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಂಗಳಾದೇವಿ ಗುಂಪು ಮನೆ ನಿರ್ಮಿಸುವುದಾಗಿ ಭರವಸೆ ನೀಡಿದ್ದರಿಂದ ಬಸನಗೌಡ ಯತ್ನಾಳ ಪರ ಕೆಲಸ ಮಾಡಿದ್ದು, ನಾರಾಯಣ ರಾಠೊಡ, ದೀಪಕ ಕಾಳೆ ಅವರ ಗುಂಪು ಕಾಲೋನಿಯಲ್ಲಿ ಗುಡಿ ನಿಮಾರ್ಣಕ್ಕೆ ಭರವಸೆ ನೀಡಿದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಹಮೀದ್ ಮುಶ್ರೀಫ್ ಪರ ಕೆಲಸ ಮಾಡಿದೆ. ಹೀಗಾಗಿ ಎರಡೂ ಗುಂಪುಗಳ ಮಧ್ಯೆ ಇದ್ದ ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಬೈಕ್ ತಾಗಿದ ನೆಪ ಮಾಡಿಕೊಂಡು ಹೊಡೆದಾಟ ನಡೆದಿದೆ ಎಂದು ಸ್ಥಳೀಯರು ಹೇಳುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.