ಆಲಮಟ್ಟಿ ಜಲಾಶಯದಲ್ಲಿ ಕಟ್ಟೆಚ್ಚರ
Team Udayavani, Mar 5, 2019, 11:31 AM IST
ಆಲಮಟ್ಟಿ: ಹಿರಿಯ ಪೊಲೀಸ್ ಅಧಿಕಾರಿಗಳ ನಿರ್ದೇಶದನ್ವಯ ಇಲ್ಲಿಯ ಲಾಲ್ ಬಹಾದ್ದೂರ್ ಶಾಸ್ತ್ರೀ ಜಲಾಶಯಕ್ಕೆ ಶಸ್ತ್ರಸಜ್ಜಿತವಾಗಿ ಸನ್ನದ್ಧ ಸ್ಥಿತಿಯಲ್ಲಿದ್ದ ಕೈಗಾರಿಕಾ ಭದ್ರತಾ ಪಡೆಯಿಂದ ಮತ್ತಷ್ಟು ಭದ್ರತೆ ಬಿಗಿಗೊಳಿಸಲಾಗಿದೆ.
ರಾಜ್ಯದ ಶೇ.50ಕ್ಕಿಂತ ಅಧಿಕ ಪ್ರದೇಶಕ್ಕೆ ಜೀವನಾಡಿಯಾಗಿ ಸುಮಾರು 6 ಲಕ್ಷ ಎಕರೆ ರೈತರ ಜಮೀನಿಗೆ ನೀರಾವರಿ ಹಾಗೂ ಕುಡಿವ ನೀರು ಒದಗಿಸುತ್ತಿರುವ ಆಲಮಟ್ಟಿ ಜಲಾಶಯವು ಸೂಕ್ಷ್ಮ ಪ್ರದೇಶಗಳಲ್ಲೊಂದಾಗಿರುವುದರಿಂದ ಹೈ ಅಲರ್ಟ್ ಘೋಷಿಸಿ ಜಲಾಶಯದ ಭದ್ರತೆಗಾಗಿ
ನಿಯೋಜನೆಗೊಂಡಿರುವ ರಾಜ್ಯ ಕೈಗಾರಿಕಾ ಭದ್ರತಾ ಪಡೆ ಅಧಿಕಾರಿಗಳು ಪಹರೆ ಹಾಗೂ ತಪಾಸಣೆ ಬಿಗಿಗೊಳಿಸಿದ್ದಾರೆ.
ದಶಕದ ಹಿಂದೆ ಇಲ್ಲಿಯ ಪಾರ್ವತಿಕಟ್ಟೆ ಸೇತುವೆ ಹತ್ತಿರದಲ್ಲಿ ಗುಳೇದಗುಡ್ಡದ ಚೋಪದಾರ ಎಂಬಾತ ವೆಲ್ಡಿಂಗ್ ಶಾಪ್ ಇಟ್ಟುಕೊಂಡು ಜಲಾಶಯ ಭೇದಿಸಲು ತಯಾರಿ ನಡೆಸಿರುವ ವೇಳೆಯಲ್ಲಿಯೇ ಗುಪ್ತಚರ ಇಲಾಖೆ ಸಹಾಯದಿಂದ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿರುವುದು
ಈಗ ಇತಿಹಾ ಸ. ಅಲ್ಲದೇ ಬೆಳಗಾವಿ ವಿಮಾನನಿಲ್ದಾಣದಲ್ಲಿ ಶಂಕಿತ ಉಗ್ರಗಾಮಿ ಬಳಿ ಸಿಕ್ಕಿರುವ ವಸ್ತುಗಳಲ್ಲಿ ಆಲಮಟ್ಟಿ ಜಲಾಶಯದ ನಕ್ಷೆ ದೊರಕಿತ್ತಲ್ಲದೇ ಕೆಲ ದಿನಗಳಿಂದ ದೇಶದ ಗಡಿ ಪ್ರದೇಶದಲ್ಲಿ ಉಗ್ರರು ನಡೆಸುತ್ತಿರುವ ಹೇಯ ಕೃತ್ಯದ ಹಿನ್ನೆಲೆಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ಆದೇಶದಂತೆ ಜಲಾಶಯದ ನಾಲ್ಕು ದಿಕ್ಕಿನಲ್ಲಿರುವ ಚೆಕ್‌ಪೋಸ್ಟ್‌ಗಳಲ್ಲಿನ ಸಂಗೀತ ನೃತ್ಯ ಕಾರಂಜಿ, ರಾಕ್ ಉದ್ಯಾನ, ಮೊಘಲ್ ಉದ್ಯಾನ, ಗೋಪಾಲಕೃಷ್ಣ ಉದ್ಯಾನ, ಲವಕುಶ ಉದ್ಯಾನ ಸೇರಿದಂತೆ ಜನದಟ್ಟಣೆ ಹೆಚ್ಚಿರುವ ಪ್ರದೇಶದಲ್ಲಿ ಹಾಗೂ ಕೆಲ ಆಯ್ದ ಸೂಕ್ಷ್ಮ ಪ್ರದೇಶದಲ್ಲಿ ತೀವ್ರ ನಿಗಾ ವಹಿಸಲಾಗಿದೆ.
ಐಜಿಪಿ ಭೇಟಿ: ಪುಲ್ವಾಮಾದಲ್ಲಿ ಉಗ್ರರ ದಾಳಿ ಹಾಗೂ ಪಾಕಿಸ್ತಾನದಲ್ಲಿ ಭಾರತೀಯ ಸೇನೆಯಿಂದ ವಾಯುದಾಳಿ ನಡೆದ ನಂತರ ಸೋಮವಾರ ಆಲಮಟ್ಟಿಗೆ ಭೇಟಿ ನೀಡಿದ ಬೆಳಗಾವಿ ಉತ್ತರ ವಲಯದ ಐಜಿಪಿ ರಾಘವೇಂದ್ರ ಸುಹಾಸ್ ಭದ್ರತೆ ಪರಿಶೀಲನೆ ನಡೆಸಿದರು. ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೂ ಭದ್ರತೆಯ ವಿವಿಧ ಪಾಯಿಂಟ್‌ಗಳನ್ನು ಪರಿಶೀಲಿಸಿದರು. ಕೆಎಸ್‌ಐಎಸ್‌ಎಫ್ ಪೊಲೀಸರಿಗೆ ವಿವಿಧ ಸೂಚನೆ ನೀಡಿದರು.
ಹೆಚ್ಚಿದ ಭದ್ರತೆ: ಜಲಾಶಯದ ಸುತ್ತಮುತ್ತಲಿನ ಭದ್ರತೆಗಾಗಿ ಕೆಎಸ್‌ಐಎಸ್‌ಎಫ್‌ನ ಐವರು ಪಿಎಸ್‌ಐ ಸೇರಿ 91 ಪೊಲೀಸರು ದಿನದ 24 ಗಂಟೆಯೂ ಶಸ್ತ್ರ ಸಜ್ಜಿತವಾಗಿ ನಿಯೋಜನೆಗೊಂಡಿದ್ದಾರೆ. ಜಲಾಶಯದ ನಾನಾ ಕಡೆ ನಿಯೋಜನೆಗೊಂಡ ಪೊಲೀಸರ ವಿವರಣೆಯನ್ನು ಪ್ರತಿ 8 ಗಂಟೆಗೊಮ್ಮೆ ಹಿರಿಯ ಅಧಿಕಾರಿಗಳಿಗೆ ಕಳುಹಿಸಲಾಗುತ್ತಿದೆ.
ಜಲಾಶಯ ಸೇರಿದಂತೆ ಕೆಲ ಪ್ರದೇಶಗಳನ್ನು ಇಲಾಖೆ ವ್ಯಾಪ್ತಿಯನ್ನು ಗುರುತಿಸಿ ಭದ್ರತೆಗಾಗಿ ನಿಯೋಜನೆ ಮಾಡಲಾಗಿದ್ದು ಈಗಾಗಲೇ ಭದ್ರತೆಯಲ್ಲಿ ಲೋಪವಾಗದಂತೆ ಕ್ರಮ ಕೈಗೊಳ್ಳಲಾಗಿತ್ತು. ಈಗ ಮತ್ತೇ ಇಲಾಖೆ ಹಿರಿಯ ಅಧಿಕಾರಿಗಳ ಆದೇಶದಂತೆ ಮತ್ತಷ್ಟು ಕಟ್ಟೆಚ್ಚರ ವಹಿಸಲಾಗಿದೆ ಎಂದು ಆಲಮಟ್ಟಿ ವಿಭಾಗದ ಮುಖ್ಯಸ್ಥ ಈರಪ್ಪ ವಾಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.