ಅರಣ್ಯ ಕ್ಷೀಣಿಸಿದರೆ ಪ್ರಕರಣ ದಾಖಲಿಸುವ ಎಚ್ಚರಿಕೆ
Team Udayavani, Jun 25, 2022, 2:55 PM IST
ವಿಜಯಪುರ: ವಾಸ್ತವ ಹಾಗೂ ವೈಜ್ಞಾನಿಕ ಸ್ಥಿತಿಗಿಂತ ವಿಜಯಪುರ ಜಿಲ್ಲೆಯಲ್ಲಿ ಅರಣ್ಯದ ಕೊರತೆ ಇದೆ. ಅರಣ್ಯೀಕರಣದ ಕೊರತೆಯಿಂದ ಹಲವು ಸಮಸ್ಯೆ ಉದ್ಭವಿಸುವ ಕಾರಣ ಅರಣ್ಯ ಇಲಾಖೆಯ ಜಿಲ್ಲಾ, ವಿಭಾಗ ಮಟ್ಟದ ಅಧಿಕಾರಿಗಳ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್ .ಪಾಟೀಲ ಹೇಳಿದರು.
ಶುಕ್ರವಾರ ನಗರದಲ್ಲಿರುವ ಲೋಕಾಯುಕ್ತ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರದ ಬಳಿಕ ಪತ್ರಕರ್ತರೊಂದಿಗೆ ಮಾತ ನಾಡಿದ ಅವರು, ಯಾವುದೇ ಪ್ರದೇಶದಲ್ಲಿ ಪರಿಸರ ಸಮತೋಲನಕ್ಕಾಗಿ ಶೇ. 33 ಅರಣ್ಯ ಪ್ರದೇಶ ಇರಬೇಕು. ಆದರೆ ವಿಜಯಪುರ ಜಿಲ್ಲೆಯಲ್ಲಿ ಶೇ. 1 ಮಾತ್ರ ಅರಣ್ಯ ಪ್ರದೇಶ ಇದೆ. ಹೀಗಾಗಿ ಈ ಲೋಪಕ್ಕೆ ಕಾರಣವಾದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸುವುದಾಗಿ ಹೇಳಿದರು.
ಸರ್ಕಾರ ಸಾರ್ವಜನಿಕ ಅನುಕೂಲಕ್ಕಾಗಿ ರೂಪಿಸುವ ಯೋಜೆಗಳು ಅರ್ಹ ಫಲಾನುಭವಿಗಳನ್ನು ತಲುಪಬೇಕು. ಕಂದಾಯ, ಆರೋಗ್ಯ, ಆಸ್ಪತ್ರೆ, ಗ್ರಾಮ ಪಂಚಾಯತ್, ಸಬ್ ರಿಜಿಸ್ಟ್ರಾರ್, ಆರ್‌ಟಿಒ ಸೇರಿದಂತೆ ಎಲ್ಲ ಇಲಾಖೆಗಳು ಪ್ರಾಮಾಣಿಕ ಹಾಗೂ ಬದ್ಧತೆಯಿಂದ ಜನತೆಗೆ ಸರ್ಕಾರಿ ಸೇವೆ ನೀಡಬೇಕು ಎಂದು ಸೂಚಿಸಿದ್ದಾಗಿ ಹೇಳಿದರು.
ಸಾರ್ವಜನಿಕ ಸೇವೆ ನೀಡುವ ವಿಷಯದಲ್ಲಿ ಲೋಪ ಕಂಡು ಬಂದರೆ ಸಾರ್ವಜನಿಕ ಅಹವಾಲು ಸ್ವೀಕರಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳಿಗೆ ನಿರ್ದೇಶ ನೀಡಲಾಗಿದೆ. ವೈಯಕ್ತಿಕ ಅಥವಾ ಸಾರ್ವಜನಿಕ ಯಾವುದೇ ಸಮಸ್ಯೆ ಇರಲಿ, ಮೂಲಭೂತ ಸಮಸ್ಯೆಗಳ ಬಗ್ಗೆ ಆಗಲಿ ದೂರು ಬಂದಲ್ಲಿ ಪರಿಶೀಲಿಸಿ ಕ್ರಮಕ್ಕೆ ಸೂಚಿಸಲಾಗಿದೆ. ಗಂಭೀರವಲ್ಲದ ಪ್ರಕರಣಗಳಲ್ಲಿ ಸ್ಥಳದಲ್ಲೇ ಸಮಸ್ಯೆ ಇತ್ಯರ್ಥಕ್ಕೆ, ಗಂಭೀರ ಪ್ರಕರಣ ಇದ್ದಲ್ಲಿ ದೂರು ದಾಖಲಿಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಲೋಕಾಯುಕ್ತ ಜಿಲ್ಲಾ ಎಸ್ಪಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾಗಿ ಹೇಳಿದರು. ಲೋಕಾಯುಕ್ತ ವಿಜಯಪುರ ಎಸ್ಪಿ ಅನಿತಾ ಹದ್ದಣ್ಣವರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
Vijayapura: ವಕ್ಫ್ ವಿರುದ್ಧ ಹಲವು ಮಠಾಧೀಶರ ನೇತೃತ್ವದಲ್ಲಿ ಹೋರಾಟ
Waqf Issue: ಲ್ಯಾಂಡ್ ಟೆರರಿಸಂ, ಲ್ಯಾಂಡ್ ಜಿಹಾದ್ ನಿಂದ ಬಚಾವಾಗಬೇಕು: ಶೋಭಾ ಕರಂದ್ಲಾಜೆ
Waqf Property: ಬೊಮ್ಮಾಯಿ ಕಾಲದಲ್ಲೂ ವಕ್ಫ್ ಆಸ್ತಿ ತೆರವಿಗೆ ಹೇಳಿದ್ರು: ಸಚಿವ ಜಮೀರ್
Vijayapura: ವಕ್ಫ್ ವಿವಾದ… ನಾಳೆಯಿಂದ ಅಹೋರಾತ್ರಿ ಧರಣಿ ಆರಂಭ: ಶಾಸಕ ಯತ್ನಾಳ
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.