Cauvery ಸಮಸ್ಯೆ ವಿಷಯದಲ್ಲಿ ಕೇಂದ್ರದಿಂದ ನಿರ್ಲಕ್ಷ್ಯ ನೀತಿ: ಎಚ್.ಕೆ.ಪಾಟೀಲ
Team Udayavani, Oct 31, 2023, 2:47 PM IST
ವಿಜಯಪುರ: ಕಾವೇರಿ ವಿಷಯದಲ್ಲಿ ಕೇಂದ್ರ ಸರ್ಕಾರ ಅತ್ಯಂತ ನಿರ್ಲಕ್ಷ್ಯ ನೀತಿ ಅನುಸರಿಸುತ್ತಿದೆ. ಕರ್ನಾಟಕ ರಾಜ್ಯದಲ್ಲಿ ಭೀಕರ ಬರ ಆವರಿಸಿರುವ ವಿಷಯ ತಿಳಿದಿದ್ದರೂ ಕಾವೇರಿ ನದಿ ನೀರು ಹಂಚಿಕೆ ವಿಷಯದಲ್ಲಿ ಕೇಂದ್ರಕ್ಕೆ ಕಾಳಜಿ ಇಲ್ಲವಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್.ಕೆ.ಪಾಟೀಲ ಅಸಮಾಧಾನ ವ್ಯಕ್ತಪಡಿಸಿದರು.
ಮಂಗಳವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾವೇರಿ ಜಲ ವಿವಾದ ಬಗೆಹರಿಸುವ ವಿಷಯದಲ್ಲಿ ಕೇಂದ್ರಕ್ಕೆ ಕಳಕಳಿ, ಕಾಳಜಿ, ಆತುರ ಇಲ್ಲವಾಗಿದೆ. ಕರ್ನಾಟಕದಲ್ಲಿ ಮಳೆ ಇಲ್ಲದೇ ಭೀಕರ ಬರ ಆವರಿಸಿದ್ದು, ಕೇಂದ್ರದ ನಿಯಮದಂತೆಯೇ ರಾಜ್ಯದಲ್ಲಿ 215 ಕ್ಕೂ ಹೆಚ್ಚು ತಾಲೂಕುಗಳು ಬರ ಪೀಡಿತ ಎಂದು ಘೋಷಿಸಿಲಾಗಿದೆ. ಕಾವೇರಿ ನದಿಯ ಹರಿವು ಇಲ್ಲವಾಗಿ, ಜಲಾಶಯಗಳಲ್ಲಿ ನೀರಿನ ಪ್ರಮಾಣ ಕಡಿಮೆಯಿದೆ. ಭವಿಷ್ಯದ ದಿನಗಳಲ್ಲಿ ಬೆಂಗಳೂರಿಗೆ ಕುಡಿಯುವ ನೀರಿಗೂ ತತ್ವಾರ ಎದುರಾಗಲಿದೆ. ಕರ್ನಾಟಕದ ಪರಿಸ್ಥಿತಿ ನೀರಿನ ವಿಷಯದಲ್ಲಿ ಗಂಭೀರವಾಗಿದ್ದರೂ ನಿತ್ಯವೂ 2600 ಕ್ಯೂಸೆಕ್ ನೀರು ಹರಿಸುವಂತೆ ಸಿ.ಡಬ್ಲ್ಯೂ.ಆರ್.ಸಿ. ನಿರ್ದೇಶನ ನೀಡುತ್ತಿದೆ. ಇಷ್ಟಾದರೂ ಕೇಂದ್ರ ಗಮನ ಹರಿಸುತ್ತಿಲ್ಲ ಎಂದು ಸಚಿವ ಎಚ್.ಕೆ.ಪಾಟೀಲ ಹರಿಹಾಯ್ದರು.
ಕೂಡಲೇ ಪ್ರಧಾನಿ ಮೋದಿ ಕಾವೇರಿ ನೀರಿನ ವಿಷಯದಲ್ಲಿ ತುರ್ತಾಗಿ ಗಮನಹರಿಸಬೇಕು. ಬರುವ ದಿನಗಳಲ್ಲಿ ಕರ್ನಾಟಕದಲ್ಲಿ ಎದುರಾಗುವ ನೀರಿನ ಗಂಭೀರ ಸಮಸ್ಯೆ ಬಗೆಹರಿಸಲು ತುರ್ತಾಗಿ ಮುಂದಾಗಬೇಕು ಎಂದು ಆಗ್ರಹಿಸಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ದೇಶದ ಎಲ್ಲ ರಾಜ್ಯ ಸರ್ಕಾರ ಹಾಗೂ ಜನರು ಜನರು ಕೇಂದ್ರದ ಬಗ್ಗೆ ಭರವಸೆ ಕಳೆದುಕೊಳ್ಳದಂತೆ ಕೇಂದ್ತ ಸರ್ಕಾರ ಜವಾಬ್ದಾರಿ ನಿಭಾಯಿಸಬೇಕು. ಇಲ್ಲವಾದರೆ ಬಹಳ ಸಮಸ್ಯೆ ಎದುರಿಸುವ ಗಂಭೀರತೆ ಎದುರಾಗಲಿದೆ ಎಂದು ಎಚ್ಚರಿಸಿದರು
ತಮಿಳುನಾಡಿಗೆ 2600 ಕ್ಯೂಸೆಕ್ ಕಾವೇರಿ ನದಿ ನೀರು ಹರಿಸುವಂತೆ ಸಿ.ಡಬ್ಲ್ಯೂ.ಆರ್.ಸೊ. ನೀಡಿರುವ ಆದೇಶ ಮರು ಪರಿಶೀಲನೆ ಮಾಡಬೇಕೆಂದು ಮನವಿ ಮಾಡಿದರು.
ಈ ವಿಷಯವಾಗಿ ಕೇಂದ್ರಕ್ಕೆ ನಿಯೋಗ ಕೊಂಡೊಯ್ಯುಯ್ದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಜಲಸಂಪನ್ಮೂಲ ಖಾತೆ ಹೊಂದಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಪ್ರಯತ್ನಿಸಿದರೂ ಪ್ರಧಾನಿ ಅವಕಾಶ ನೀಡುತ್ತಿಲ್ಲ ಎಂದು ದೂರಿದರು.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುವ ವಿಷಯದಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ವಿರೋಧ ಪಕ್ಷಗಳ ಆರೋಪ ಅರ್ಥಹೀನ. ಪ್ರಧಾನಿ ಅವರನ್ನು ಭೇಟಿಯಾಗಲು ಅವಕಾಶ ನೀಡಿದರೂ ನಮ್ಮ ಮುಖ್ಯಮಂತ್ರಿ, ಸಚಿವರು ಹೋಗದಿದ್ದರೆ ವಿಫಲ ಎನ್ನಬಹುದು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರೇ ತಮ್ಮ ಭೇಟಿಗೆ ಅವಕಾಶ ನೀಡುತ್ತಿಲ್ಲ. ಇಂಥ ಸ್ಥಿತಿಯಲ್ಲಿ ಕರ್ನಾಟಕ ರಾಜ್ಯದ ಬಿಜೆಪಿ 25 ಸಂಸದರು ಏನು ಮಾಡುತ್ತಿದ್ದಾರೆ. ರಾಜ್ಯದ ಸಂಸದರೇ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ವಾಸ್ತವಿಕ ಸಮಸ್ಯೆ ಮನವರಿಕೆ ಮಾಡಿಕೊಡಲು ಮುಂದಾಗಬೇಕಿತ್ತು. ರಾಜ್ಯದಲ್ಲಿ ಭೀಕರ ಬರ ಎಂದು ಘೋಷಿಸಿದ ಬಳಿಕವೂ 2600 ಕ್ಯೂಸೆಕ್ ನೀರು ಬಿಡುವಂತೆ ಆದೇಶ ಮಾಡಿದ್ದು ಸರಿಯಲ್ಲ ಎಂದು ಕೇಂದ್ರಕ್ಕೆ ತಿಳಿಸಿ ಹೇಳಲು ಸಾಧ್ಯವಾಗಲಿಲ್ಲ ಏಕೆ ಎಂದು ಪ್ರಶ್ನಿಸಿದರು.
ಮಹಾದಾಯಿ ಯೋಜನೆ ಕಾಮಗಾರಿಗೆ ಕೇಂದ್ರಕ್ಕೆ ಸರಿಯಾದ ದಾಖಲೆಗಳನ್ನು ರಾಜ್ಯ ಸರ್ಕಾರ ನೀಡಿಲ್ಲ ಎಂಬ ಆರೋಪವೂ ಅರ್ಥಹೀನ. ನಾವು ಇಂಥ ದಾಖಲೆ ಕೊಟ್ಟಿಲ್ಲ ಎಂದು ಕೇಂದ್ರ ಸರ್ಕಾರವೇನು ಕೇಳಿದೆಯೆ? ಮಹದಾಯಿ ಯೋಜನೆ ಘೋಷಣೆ ಮಾಡುವುದಕ್ಕೆ ಇವರಿಗೆ ಏನು ತೊಂದರೆ ಎಂದು ಹರಿಹಾಯ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.