ಹಣ್ಣು ಬೆಳೆದು ಹಣ್ಣಾದ ಅನ್ನದಾತರು
ಮಾರುಕಟ್ಟೆಗೆ ಸಾಗಿಸಲಾಗದೇ ಹೊಲದಲ್ಲೇ ಹಾಳಾಗುತ್ತಿದೆ ಕಲ್ಲಂಗಡಿ-ಪೇರು
Team Udayavani, Apr 26, 2020, 12:07 PM IST
ಚಡಚಣ: ದೇವರ ನಿಂಬರಗಿ ಗ್ರಾಮದಲ್ಲಿ ಫಲವತ್ತಾಗಿ ಬೆಳೆದ ಕಲ್ಲಂಗಡಿ.
ಚಡಚಣ: ಕೋವಿಡ್ ಭೀತಿಗೆ ಸರ್ಕಾರ ದೇಶಾದ್ಯಂತ ಲಾಕ್‌ಡೌನ್ ಘೋಷಿಸಿದ್ದರಿಂದ ವ್ಯಾಪಾರ-ವಹಿವಾಟು ಸೇರಿದಂತೆ ಜನಜೀವನ ಆಸ್ತವ್ಯಸ್ತಗೊಂಡಿದೆ. ಇದರ ಪರಿಣಾಮ ಕೃಷಿ ಮೇಲೂ ಆಗುತ್ತಿದೆ. ಸೂಕ್ತ ಮಾರುಕಟ್ಟೆ ಸಿಗದೇ ಹಣ್ಣು, ತರಕಾರಿ ಇತರೆ ಬೆಳೆ ಬೆಳೆದ ರೈತರು ಮತ್ತಷ್ಟು ಸಾಲದ ಕೂಪಕ್ಕೆ ಸಿಲುಕುವಂತಾಗಿದೆ.
ಸಮೀಪದ ದೇವರ ನಿಂಬರಗಿ ಗ್ರಾಮದ ರೈತ ಶಬ್ಬೀರ್ ಗಜ್ಬರ್ ಮುಲ್ಲಾ ನಾಲ್ಕು ಎಕರೆ ಜಮೀನು ಹೊಂದಿದ್ದು, ಎರಡು ಎಕರೆ ಜಮೀನಿನಲ್ಲಿ ಇದೇ ಪ್ರಥಮ ಬಾರಿಗೆ ಕಲ್ಲಂಗಡಿ ಹಣ್ಣು ಬೆಳೆದಿದ್ದಾರೆ. ಇದಕ್ಕಾಗಿ 4 ಲಕ್ಷ ರೂ. ವೆಚ್ಚ ಮಾಡಿದ್ದಾರೆ. ಕಲ್ಲಂಗಡಿ ಬೆಳೆ ಉತ್ತಮವಾಗಿ ಬೆಳೆದಿದ್ದು, 5ರಿಂದ 6 ಲಕ್ಷ ರೂ. ಆದಾಯದ ನಿರೀಕ್ಷೆಯಲ್ಲಿದ್ದರು. ಆದರೆ ಲಾಕ್‌ಡೌನ್ ದಿಂದಾಗಿ ಸೂಕ್ತ ಮಾರುಕಟ್ಟೆ ಸಿಗದ್ದರಿಂದ ಮತ್ತು ಮಾರಾಟಗಾರರು ಹಣ್ಣುಗಳನ್ನು ಖರೀದಿಸಲು ಮುಂದೆ ಬಾರದ್ದರಿಂದ ಹಣ್ಣು ತೋಟದಲ್ಲೇ ಕೊಳೆಯುವಂತಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.
ಕೋವಿಡ್ ಮಹಾಮಾರಿ ಬೆವರು ಹರಿಸಿ ದುಡಿವ ಅನ್ನದಾತನ ಹೊಟ್ಟೆಗೆ ತಣ್ಣೀರು ಬಟ್ಟೆ ಕಟ್ಟಿಕೊಳ್ಳುವಂತೆ ಮಾಡಿದೆ. ರೈತರು ಬೆಳೆದ ಬೆಳೆ ಮಾರಾಟಕ್ಕೆ ಸರ್ಕಾರ ಮಾರಾಟಕ್ಕೆ ಅನುಕೂಲ ಕಲ್ಪಿಸಿಕೊಡಬೇಕಿದೆ. ಇದೇ ಗ್ರಾಮದ ಇನ್ನೋರ್ವ ರೈತ ಅಲ್ಲಿಸಾಬ್ ಭಂಡರಕವಟೆ ಎರಡು ಎಕರೆ ಹೊಲದಲ್ಲಿ 1400
ಪೇರು ಗಿಡಗಳನ್ನು ಬೆಳೆಸಿದ್ದಾನೆ. ಇದಕ್ಕಾಗಿ 2 ಲಕ್ಷ ರೂ. ಸಾಲ ಮಾಡಿಕೊಂಡಿದ್ದಾರೆ. ರೈತನ ಶ್ರಮಕ್ಕೆ ಪ್ರತಿಫಲವಾಗಿ ಉತ್ತಮ ಪೇರು ಬೆಳೆಯೂ ಸಹ ಬಂದಿದೆ. ಆದರೆ ಹಣ್ಣುಗಳನ್ನು ಮಾರುಕಟ್ಟೆಗೆ ಸಾಗಿಸಲಾಗುತ್ತಿಲ್ಲ. ನಿತ್ಯ ಹತ್ತಾರೂ ಟ್ರೇಗಳಷ್ಟು ಪೇರು ಹಣ್ಣು ಗಿಡದಿಂದ ಬಿದ್ದು ಹಾಳಾಗುತ್ತಿವೆ. ಇದರಿಂದ ಮನನೊಂದ ರೈತ ಪೇರು ಹಣ್ಣುಗಳನ್ನು ದನ-ಕರುಗಳಿಗೆ ತಿನ್ನಲು ಹಾಕುತ್ತಿದ್ದಾನೆ. ಹಿಂದಿನ ಬಾರಿ ಪೇರು ಹಣ್ಣುಗಳಿಂದ ಒಂದು ಲಕ್ಷ ಲಾಭ ಬಂದಿತ್ತು, ಹಿಂದಿನ ವರ್ಷಕ್ಕಿಂತ ಈ ವರ್ಷ ಫಲವತ್ತಾದ ಬೆಳೆ ಬಂದಿದ್ದು, ಹಣ್ಣುಗಳೂ ಉತ್ತಮವಾಗಿವೆ. ಹೀಗಾಗಿ ಸುಮಾರು 5 ಲಕ್ಷ ಆದಾಯದ ನಿರೀಕ್ಷೆ ಇತ್ತು. ಆದರೆ ಕೊರೊನಾ ಮಾರಿ ಇದಕ್ಕೆ ತಣ್ಣೀರೆರೆಚಿದೆ ಎನ್ನುತ್ತಾರೆ ರೈತರು.
ಈ ಭಾಗದ ರೈತರು ಬೆಳೆದ ಬೆಳೆ ಮಾರಾಟವಾಗದೇ ಅಪಾರ ನಷ್ಟ ಅನುಭವಿಸುತ್ತಿದ್ದಾರೆ. ಇತ್ತ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಬೆಳೆ ನಷ್ಟಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವ ಕಾರ್ಯ ಮಾಡುವಂತಾಗಬೇಕು ಎಂಬುದು ರೈತರ ಒತ್ತಾಸೆಯಾಗಿದೆ.
ಶಿವಯ್ಯ ಐ. ಮಠಪತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Arrested: ಬಿಹಾರದ ಬೆಡ್‌ಶೀಟ್ ಗ್ಯಾಂಗ್‌ನ 8 ಮಂದಿ ಸೆರೆ
Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್; ಆರೋಪಿ ಸೆರೆಗೆ 3 ತಂಡ ರಚನೆ
Bomb Threat: ಹೋಟೆಲ್, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.