ಗ್ರಾಮಕ್ಕೊಂದು ಗ್ರಂಥಾಲಯ ಇಂದಿನ ತುರ್ತು ಅಗತ್ಯ
Team Udayavani, Feb 17, 2020, 4:29 PM IST
ಚಡಚಣ: ಮನೆಗೊಂದು ಶೌಚಾಲಯ ಎಷ್ಟು ಮುಖ್ಯವೋ ಅಷ್ಟೇ ಗ್ರಾಮಕ್ಕೊಂದು ಗ್ರಂಥಾಲಯ ಮುಖ್ಯ. ಗ್ರಾಮದಲ್ಲಿ ಗ್ರಂಥಾಲಯವಿದ್ದರೆ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗುವುದರ ಜತೆಗೆ ಜ್ಞಾನದ ಕೊರತೆ ನೀಗುತ್ತದೆ ಎಂದು ಕರ್ನಾಟಕ ವಿಶ್ವ ವಿದ್ಯಾಲಯದ ಗ್ರಂಥಾಲಯ ಹಾಗೂ ಮಾಹಿತಿ ವಿಭಾಗದ ಮುಖ್ಯಸ್ಥ ಡಿ.ಬಿ. ಕುಂಬಾರ ಹೇಳಿದರು.
ಸಾರ್ವಜನಿಕ ಗ್ರಂಥಾಲಯಗಳ ಮಾಹಿತಿ ಕೌಶಲ್ಯ ವಿಷಯದ ಮೇಲೆ ಪಟ್ಟಣದ ಸಂಗಮೇಶ್ವರ ಮಹಾವಿದ್ಯಾಲಯದಲ್ಲಿ ನಡೆದ ರಾಷ್ಟ್ರ ಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು. ತಂತ್ರಜ್ಞಾನ ಯುಗದಲ್ಲಿ ಕೂಡಾ ಸಾರ್ವಜನಿಕ ಗ್ರಂಥಾಲಯ ಪಾತ್ರ ಹಿರಿದಾದುದು.
ಗ್ರಂಥಾಲಯದಿಂದ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಹಾಗೂ ಸಾರ್ವಜನಿಕರಿಗೆ ನಿಖರ ಮಾಹಿತಿ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ರಾಜ್ಯದಲ್ಲಿ ಸುಮಾರು 8,000 ಗ್ರಂಥಾಲಯಗಳು ಕಾರ್ಯ ನಿರ್ವಹಿಸುತ್ತಿವೆ ಎಂದ ಅವರು, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಪ್ರತಿ ಗ್ರಾಮಕ್ಕೊಂದು ಗ್ರಂಥಾಲಯಗಳು ನಿರ್ಮಾಣ ಮಾಡಿದರೆ ಗ್ರಾಮಗಳು ಅಭಿವೃದ್ಧಿ ಪಥದಲ್ಲಿ ಸಾಗುತ್ತದೆ ಎಂದರು.
ಸಂಪನ್ಮೂಲ ವ್ಯಕ್ತಿಗಳಾದ ತುಮಕೂರು ವಿಶ್ವವಿದ್ಯಾಲಯದ ಸಂಪತ್‌ಕುಮಾರ ಬಿ.ಟಿ. ಮಾತನಾಡಿ, ಗ್ರಂಥಾಲಯಗಳ ಸಮಗ್ರ ಆಳ, ಅಗಲ, ಉಪಯೋಗ ಹಾಗೂ ಜ್ಞಾನಾರ್ಜನೆಯ
ವಿವಿಧ ಹಂತಗಳ ಮಾಹಿತಿ ನೀಡಿದರು. ಮಹಾರಾಷ್ಟ್ರದ ಮುಂಬೈ ಕೇಂದ್ರೀಯ ವಿಶ್ವ ವಿದ್ಯಾಲಯದ ಪ್ರಮುಖ ಗ್ರಂಥಪಾಲಕ ಆನಂದ ದೊಡ್ಡಮನಿ ಮಾತನಾಡಿ, ಗ್ರಂಥಾಲಯದಲ್ಲಿ ಪಡೆಯುವ ಶೈಕ್ಷಣಿಕ ಮೌಲ್ಯಗಳು ಹಾಗೂ ಸಂಶೋಧನೆಯಲ್ಲಿನ ತೊಡಗುವ ಪ್ರತಿಯೊಬ್ಬರು ಕೃತಿ ಚಾರ್ಯ ಎಚ್ಚರಿಕೆ ವಹಿಸುವ ಕುರಿತು ಸಮಗ್ರ ಮಾಹಿತಿ ನೀಡಿದರು.
ಕಾರ್ಯಕ್ರಮದ ಎಂ.ಕೆ. ಬಿರಾದಾರ ಪ್ರಾಸ್ತಾವಿಕ ಮತನಾಡಿ, ಸಾರ್ವಜನಿಕ ಗ್ರಂಥಾಲಯದಿಂದ ಪ್ರತಿಯೊಬ್ಬರು ಜ್ಞಾನಾರ್ಜನೆ ಹೆಚ್ಚಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಡಾ| ಎಸ್.ಎಸ್. ದೇಸಾಯಿ ವಿಚಾರ ಸಂಕಿರಣಕ್ಕೆ ಆಗಮಿಸಿದ್ದ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು. ವಿಚಾರ ಸಂಕಿರಣದಲ್ಲಿ ಸಂಗಮೇಶ್ವರ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ವಿ.ಜಿ. ಮುತ್ತಿನ, ನಾಯಕ ಬಂಕಾಪುರ, ಡಾ| ಮಹೇಶ ಹೊರಕೇರಿ,
ಡಾ| ಜೆ.ಶಿವರಾಮ, ಡಾ| ವಿಜಯಕುಮಾರ ಮೂಲಿಮನಿ, ವೈ.ಬಿ. ಕೊರಡೂರ, ನಿರ್ದೇಶಕರಾದ ಬಿ.ಆರ್. ಯಂಕಂಚಿ, ಅಫಿಯಾ ಶಾಜಾದ, ಪ್ರಾಚಾರ್ಯ ಡಾ| ಎಸ್. ಎಸ್. ಚೋರಗಿ, ಎಂ.ಎಸ್. ಮಾಗಣಗೇರಿ ಸೇರಿದಂತೆ ಶಿಕ್ಷಣ ಸಂಸ್ಥೆಯ ವಿವಿಧ ವಿಭಾಗದ ಪ್ರಾಧ್ಯಾಪಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಕರ್ನಾಟಕ ಹಾಗೂ ಮಹಾರಾಷ್ಟ್ರದ ವಿವಿಧ ಮಹಾವಿದ್ಯಾಲಯಗಳಿಂದ ಸುಮಾರು 200ಕ್ಕೂ ಹೆಚ್ಚು ಅಭ್ಯರ್ಥಿಗಳು ತಮ್ಮ ತಮ್ಮ ವಿಚಾರಗಳು ಮಂಡಿಸಿ ಪ್ರಮಾಣ ಪತ್ರ ಪಡೆದುಕೊಂಡರು. ಡಾ| ಎಸ್.ಬಿ. ರಾಠೊಡ ಸ್ವಾಗತಿಸಿದರು. ಬಸವರಾಜ ಎಳ್ಳೂರ ಹಾಗೂ ದರೇಶ ಕುಮಟಗಿ ನಿರೂಪಿಸಿದರು. ಮಹಾಂತೇಶ ಜನವಾಡ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.