ಸಿಸಿ ರಸ್ತೆಕಾಮಗಾರಿ ಪ್ರಾರಂಭಿಸಿ

9 ತಿಂಗಳು ಕಳೆದರೂ ಪೂರ್ಣಗೊಂಡಿಲ್ಲವಿವಿಧ ಸಂಘಟನೆಯಿಂದ ಧರಣಿ

Team Udayavani, Mar 6, 2020, 12:02 PM IST

6-March-06

ಚಡಚಣ: ಪಟ್ಟಣದ ಪ್ರಮುಖ ಸಿಸಿ ರಸ್ತೆ ಕಾಮಗಾರಿಯು ಸುಮಾರು 9 ತಿಂಗಳಿಂದ ಅರ್ಧಕ್ಕೆ ನಿಂತಿರುವುದನ್ನು ಖಂಡಿಸಿ ಗುರುವಾರ ಪಟ್ಟಣದ ನಾಶಿ ಕಟ್ಟಿಯಲ್ಲಿ ವಿವಿಧ ಸಂಘಟನೆಗಳಿಂದ ಧರಣಿ ಸತ್ಯಾಗ್ರಹ ನಡೆಸಿದರು.

ಸತ್ಯಾಗ್ರಹ ಉದ್ದೇಶಿಸಿ ಮಾತನಾಡಿದ ಕರವೇ ವಲಯಾಧ್ಯಕ್ಷ ಸೋಮಶೇಖರ ಬಡಿಗೇರ, ಚಡಚಣ ಪಟ್ಟಣಕ್ಕೆ ನಗರಾಭಿವೃದ್ಧಿ ಇಲಾಖೆಯಿಂದ 2018-19 ನೇ ಸಾಲಿನಲ್ಲಿ ಮಂಜೂರಾದ ಸುಮಾರು 4 ಕೋಟಿ ರೂ. ವೆಚ್ಚದ ಪಟ್ಟಣದ ಬಸವೇಶ್ವರ ವೃತ್ತದಿಂದ ಅಗಸಿಯವರೆಗಿನ ಮುಖ್ಯ ರಸ್ತೆ, ಒಳ ಚರಂಡಿ ಹಾಗೂ ಫುಟ್‌ಪಾತ್‌ ಕಾಮಗಾರಿ ಕೈಗೊಳ್ಳಲಾಗಿತ್ತು.

ರಸ್ತೆ ಅಗಲೀಕರಣ ಸಂದರ್ಭದಲ್ಲಿ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಕೂಡ ಸ್ಥಳೀಯಾಡಳಿತಕ್ಕೆ ಸಹಕರಿಸಿದ್ದರು. ಅದರಂತೆ ಈ ಕಾಮಗರಿಯು ಸದ್ಯ ಶೇ.50ರಷ್ಟು ಪೂರ್ಣಗೊಂಡಿದ್ದು, ಇನ್ನುಳಿದ ಕಾಮಗಾರಿ ಸ್ಥಗಿತಗೊಂಡು ಸುಮಾರು 9 ತಿಂಗಳು ಕಳೆದಿವೆ. ಕಾಮಗಾರಿ ಸ್ಥಗಿತಗೊಂಡಿದ್ದರಿಂದ ರಸ್ತೆ ಮೂಲಕ ಸಂಚರಿಸುವ ವಾಹನ ಸವಾರರಿಗೆ, ಪಾದಚಾರಿಗಳಿಗೆ ಹಾಗೂ ಬಹುಮುಖ್ಯವಾಗಿ ವ್ಯಾಪಾರಸ್ಥರಿಗೆ ತೊಂದರೆಯಾಗುತ್ತಿದೆ. ಕಾಮಗಾರಿ ಸ್ಥಗಿತಗೊಂಡಾಗಿನಿಂದ ರಸ್ತೆ ಬದಿಯ ಅಂಗಡಿಗಳ ವ್ಯಾಪಾರಸ್ಥರ ವ್ಯಾಪಾರ ಕೂಡಾ ಕುಂಟಿತಗೊಂಡಿದ್ದು, ಅನೇಕ ದ್ವಿಚಕ್ರ ವಾಹನ ಸವಾರರು ಅಫಘಾತಕ್ಕೀಡಾಗಿದ್ದಾರೆ. ಮಾ.9 ಸೋಮವಾರದೊಳಗೆ ಸಿಸಿ ರಸ್ತೆ ಕಾಮಗರಿ ಪ್ರಾರಂಭವಾಗದೇ ಇದ್ದಲ್ಲಿ ಸರದಿ ಸತ್ಯಾಗ್ರಹ ಪ್ರಾರಂಭಿಸುವುದಾಗಿ ಎಚ್ಚರಿಸಿದರು.

ಪಟ್ಟಣ ಪಂಚಾಯ್ತಿ ಮಾಜಿ ಅಧ್ಯಕ್ಷ ಬಾಬುಗೌಡ ಪಾಟೀಲ, ವ್ಯಾಪಾರಸ್ಥರಾದ ಗಂಗಾಧರ ಪಾವಲೆ, ಯುನೂಸಲಿ ಮಕಾನದಾರ, ಭೀಮಾಶಂಕರ ವಾಳಿಖೀಂಡಿ ಇತರರು ಮಾತನಾಡಿ, ಈ ಸತ್ಯಾಗ್ರಹ ಯಾವುದೇ ಪಕ್ಷಕ್ಕಾಗಲಿ, ವ್ಯಕ್ತಿಗಲವಾಗಲಿ ಇಲ್ಲ. ಪಕ್ಷಾತೀತವಾಗಿ ನಡೆದ ಈ ಹೋರಾಟಕ್ಕೆ ಗ್ರಾಮಸ್ಥರ ಬೆಂಬಲ ವ್ಯಕ್ತವಾಗಿದೆ. ಅರ್ಧಕ್ಕೆ ನಿಂತ ಕಾಮಗಾರಿಯಿಂದ ವ್ಯಾಪಾರಸ್ಥರಿಗೆ, ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಕೂಡಲೇ ಜಿಲ್ಲಾ ಕಾರಿಗಳು ಮಧ್ಯಸ್ಥಿಕೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದರು.

ಪಟ್ಟಣದ ವ್ಯಾಪಾರಸ್ಥರು ಸ್ವ-ಇಚ್ಚೆಯಿಂದ ತಮ್ಮ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು. ಸಂಜೆ ಧರಣಿ ಸತ್ಯಾಗ್ರಹ ನಡೆದ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್‌ ಎನ್‌.ಬಿ ಗೆಜ್ಜೆ ಅವರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು. ನಂತರ ತಹಶೀಲ್ದಾರ್‌ ಮಾತನಾಡಿ, ತಮ್ಮ ಬೇಡಿಕೆ ಕುರಿತು ಮೇಲಾಧಿ ಕಾರಿಗಳ ಗಮನಕ್ಕೆ ತರುವುದಾಗಿ ತಿಳಿಸಿದರು.

ಮುಖಂಡರಾದ ದೇವೇಂದ್ರಪ್ಪ ಪಾಟೀಲ, ಬಸವರಾಜ ಭಮಶೆಟ್ಟಿ, ಮಹಾದೇವ ಬನಸೋಡೆ, ರಾಮ ಮಾಲಾಪೂರ, ಮಲ್ಲು ಉಮರಾಣಿ, ಸಂಜು ಭಂಡರಕವಟೆ ವಿವಿಧ ಸಂಘಟನೆಗಳ ಮುಖಂಡರಾದ ಚಂದ್ರಶೇಖರ ಪಾಟೀಲ, ಶಕಿಲ ಖಾಟೀಕ, ದೀಪಕ ಕದಂ, ಅಂಬಾದಾಸ ಸಿಂದಗಿ, ಸುನೀಲ ಕ್ಷತ್ರಿ, ಪ್ರವೀಣ ಪಾಟೀಲ, ಚಂದು ಕಲಮನಿ, ಬಸವರಾಜ ಉಮರಾಣಿ, ಸಾಗರ ಜಂಗಮಶೆಟ್ಟಿ, ಪಿಂಟು ಜಂಗಮಶೆಟ್ಟಿ, ಮಲ್ಲನಗೌಡ ಪಾಟೀಲ, ಜಗದೀ ಮುಂಬೈ, ಮಹಾಂತೇಶ ದಾಶ್ಯಾಳ, ಸೇರಿದಂತೆ ವಿವಿಧ ಸಂಘಟನೆಗಳ, ವ್ಯಾಪಾರಸ್ಥರ ಹಾಗೂ ಸಾರ್ವಜನಿಕರ ಇದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.