![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 11, 2022, 5:46 PM IST
ಮುದ್ದೇಬಿಹಾಳ: ಶಾಲೆಗೆ ಗೈರು ಹಾಜರಾದ ಮತ್ತು ಶಾಲೆ ಬಿಟ್ಟ ಮಕ್ಕಳು ನಿಯಮಿತವಾಗಿ ಶಾಲೆಗೆ ಹೋಗುವ ಮೂಲಕ ಕಲಿಕಾ ಚಟುವಟಿಕೆಗಳಲ್ಲಿ ಭಾಗವಹಿಸಿ ಶಿಕ್ಷಣದ ಮಹತ್ವ ವ್ಯರ್ಥವಾಗದಂತೆ ನೋಡಿಕೊಳ್ಳಬೇಕು ಎಂದು ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಗೌಡ ಮಿರ್ಜಿ ಸಲಹೆ ನೀಡಿದರು.
ಸೋಮವಾರ ತಂಗಡಗಿ ಬಳಿ ಇರುವ ಕೃಷ್ಣಾ ನದಿ ಸೇತುವೆ ಹತ್ತಿರದಿಂದ ಅಮರಗೋಳಕ್ಕೆ ಹೋಗುವ ರಸ್ತೆ ಮಧ್ಯೆ ತಾಯಿಯೊಂದಿಗೆ ಬಟ್ಟೆ ತೊಳೆಯಲು ನದಿಗೆ ಬಂದಿದ್ದ ಮಕ್ಕಳನ್ನು ಮಾತನಾಡಿಸಿದ ಅವರು, ಶಾಲೆ ಬಿಡಿಸಿ ಮಕ್ಕಳನ್ನು ಕೆಲಸಕ್ಕೆ ಕರೆ ತರದಂತೆ, ಅದರಲ್ಲೂ ಅಪಾಯಕಾರಿ ಸ್ಥಳವಾಗಿರುವ ನದಿಗೆ ಮಕ್ಕಳನ್ನು ಕರೆ ತರಲೇಬಾರದಂತೆ ಆ ಮಕ್ಕಳ ತಾಯಿಗೆ ತಿಳಿವಳಿಕೆ ನೀಡಿ ನಾಳೆಯಿಂದಲೇ ಮಕ್ಕಳನ್ನು ಶಾಲೆಗೆ ಬರುವಂತೆ ತಿಳಿಸಿದರು.
ಇದಕ್ಕೂ ಮುನ್ನ ಆ ಮಕ್ಕಳು ತಾವು ನಿತ್ಯ ಶಾಲೆಗೆ ಹೋಗುತ್ತಿದ್ದು ಇವತ್ತೂಂದು ದಿನ ಬಿಟ್ಟಿದ್ದೇವೆ, ಇನ್ನು ಮುಂದೆ ನಿತ್ಯವೂ ಶಾಲೆಗೆ ಹೋಗುತ್ತವೆ ಎಂದು ತಿಳಿಸಿದರು. ತಂಗಡಗಿ ವಲಯದ ಸಿಆರ್‌ಪಿ ಎಂ.ಎ. ತಳ್ಳಿಕೇರಿ ಇದ್ದರು. ನಂತರ ಮಿರ್ಜಿ ಅವರು ಅಮರಗೋಳದ ಸರ್ಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಲು ತೆರಳಿದರು.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.