ಬಸ್‌ ನಿಲ್ದಾಣ ನಿರ್ಮಿಸಲು ನಾಗರಿಕರ ಒತ್ತಾಯ


Team Udayavani, May 13, 2022, 3:41 PM IST

16bus-stop

ಆಲಮಟ್ಟಿ: ಪ್ರವಾಸಿತಾಣ ಆಲಮಟ್ಟಿಗೆ ಸುಸಜ್ಜಿತ ಬಸ್‌ ನಿಲ್ದಾಣ ನಿರ್ಮಿಸಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ. ಕಳೆದ ದಶಕಗಳಿಂದಲೂ ಬಸ್‌ ನಿಲ್ದಾಣ ನಿರ್ಮಾಣಕ್ಕಾಗಿ ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಮನವಿ ಮಾಡುತ್ತ ಬಂದಿದ್ದರೂ ಕೂಡ ಬಸ್‌ ನಿಲ್ದಾಣ ನಿರ್ಮಾಣದ ನಾಗರಿಕರ ಕನಸು ನನಸಾಗದೇ ಉಳಿಯುತ್ತಿರುವದು ವ್ಯವಸ್ಥೆಗೆ ಹಿಡಿದ ಕನ್ನಡಿಯಂತಾಗಿದೆ.

ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್‌.ಡಿ. ಕುಮಾರಸ್ವಾಮಿಯವರು ಈ ಭಾಗದ ಶಾಸಕರ ಮನವಿಯ ಮೇರೆಗೆ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಕೋಟಿಗೂ ಅಧಿಕ ಹಣ ನಿಗದಿ ಮಾಡಿ ಆದೇಶಿಸಿದ್ದರು. ಸಮ್ಮಿಶ್ರ ಸರ್ಕಾರದ ಪತನದ ನಂತರ ನಿಗದಿತ ಕಾಮಗಾರಿಯೂ ಇಲ್ಲ. ಸಂಬಂಧಿಸಿದ ಅನುದಾನವೂ ಇಲ್ಲದಂತಾಗಿದೆ ಎಂದು ನಾಗರಿಕರು ಆಕ್ರೋಶವ್ಯಕ್ತಪಡಿಸಿದ್ದಾರೆ.

ಏಷ್ಯಾಖಂಡದ ಬೃಹತ್‌ ನೀರಾವರಿ ಯೋಜನೆಗಳಲ್ಲಿ ದ್ವಿತೀಯ ಸ್ಥಾನ ಹೊಂದಿರುವ ಖ್ಯಾತಿ ಆಲಮಟ್ಟಿಗಿದೆ, ಪಟ್ಟಣವು ರೈಲು ಸಂಪರ್ಕ, ರಾಜ್ಯ ಹೆದ್ದಾರಿ, ರಾಷ್ಟ್ರೀಯ ಹೆದ್ದಾರಿಗಳನ್ನು ಹೊಂದಿರುವುದರಿಂದ ರಾಜ್ಯ ಮತ್ತು ಅಂತಾರಾಜ್ಯ ಸೇರಿದಂತೆ ನಿತ್ಯ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ. ಇಲ್ಲಿ ಆಗಮಿಸುವ ಅಂತಾರಾಜ್ಯ ಹಾಗೂ ಅಂತಾರಾಷ್ಟ್ರೀಯ ಪ್ರವಾಸಿಗರು ಆಲಮಟ್ಟಿಯಲ್ಲಿರುವ ಜಲಾಶಯ, ರಾಕ್‌ ಉದ್ಯಾನ, ಮೊಘಲ್‌ ಉದ್ಯಾನ, ಫ್ರೆಂಚ್‌ ಉದ್ಯಾನ, ಗುಲಾಬಿ ಉದ್ಯಾನ, ಗೋಪಾಲಕೃಷ್ಣ ಉದ್ಯಾನ, ಲವ-ಕುಶ ಉದ್ಯಾನ ಹಾಗೂ ಸಂಗೀತ ನೃತ್ಯ ಕಾರಂಜಿಗಳನ್ನು ವೀಕ್ಷಿಸುತ್ತಾರೆ. ಕೃ.ಮೇ.ಯೋಜನೆಯು ರಾಜ್ಯದ ಬೃಹತ್‌ ನೀರಾವರಿ ಯೋಜನೆಯಾಗಿರುವುದರಿಂದ ಇಲಾಖೆಯ ಹಲವಾರು ಪ್ರಮುಖ ಕಚೇರಿಗಳನ್ನು ಹೊಂದಿದೆ. ಇದೆಲ್ಲದರ ಪರಿಣಾಮವಾಗಿ ನಿತ್ಯ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ.

ಆಲಮಟ್ಟಿಗೆ ರೈಲುಗಳ ಮೂಲಕ ಆಗಮಿಸುವ ಪ್ರವಾಸಿಗರು ಪಟ್ಟಣದ ಪ್ರಮುಖ ಸ್ಥಳಗಳನ್ನು ವೀಕ್ಷಿಸಿದ ನಂತರ ಕೂಡಲಸಂಗಮ, ಐಹೊಳೆ, ಪಟ್ಟದಕಲ್ಲು, ಬಾದಾಮಿಗೆ ತೆರಳುತ್ತಾರಲ್ಲದೇ ಬಸವಜನ್ಮಸ್ಥಳ ಬಸವನಬಾಗೇವಾಡಿಗೂ ತೆರಳುತ್ತಾರೆ ಮತ್ತು ಗಣ್ಯರ ಆಗಮನಕ್ಕೆ ಹೆಲಿಪ್ಯಾಡ್‌ ನಿರ್ಮಿಸಲಾಗಿದೆ.

ಇಷ್ಟೆಲ್ಲಾ ವಿಶೇಷತೆಗಳನ್ನು ಹೊಂದಿರುವ ಹಾಗೂ ಯುಕೆಪಿಯ ಕೇಂದ್ರ ಸ್ಥಾನ ಹೊಂದಿರುವ ಪಟ್ಟಣಕ್ಕೆ ಬಸ್‌ ನಿಲ್ದಾಣ ಭಾಗ್ಯವಿಲ್ಲದಿರುವುದರಿಂದ ಬೇಸಿಗೆಯ ಬಿರುಬಿಸಿಲಿನಲ್ಲಿ ರಸ್ತೆಯ ಪಕ್ಕದಲ್ಲಿ ನಿಂತು ತಾವು ಪ್ರಯಾಣಿಸುವ ವಾಹನಕ್ಕಾಗಿ ಕಾಯುವ ಸ್ಥಿತಿ ತಲೆದೋರಿದೆ. ಇದರಿಂದ ರಾಜ್ಯ ಸಾರಿಗೆ ಸಂಸ್ಥೆಯ ಅಧಿಕಾರಿಗಳ ನಿಧಾನವೇ ಪ್ರಧಾನ ಎನ್ನುವ ನೀತಿಯಿಂದ ಕಂಗೆಟ್ಟಿರುವ ಪ್ರವಾಸಿಗರು ಹಿಡಿಶಾಪ ಹಾಕುವಂತಾಗಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.