Tungabhadra Reservoir ಕ್ರಸ್ಟ್ ಗೇಟ್ ಕುಸಿತದ ಸ್ಪಷ್ಟ ಮಾಹಿತಿ ತಿಳಿಯಬೇಕಿದೆ: ಪಾಟೀಲ
ಅಂತರ ರಾಜ್ಯ ನೀರು ಹಂಚಿಕೆ, ನವಲಿ ಸಮಾನಾಂತರ ಜಲಾಶಯ ಸುಲಭವಲ್ಲ
Team Udayavani, Aug 11, 2024, 11:01 AM IST
ವಿಜಯಪುರ: ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಕುಸಿತ ಪ್ರಕರಣದ ವಾಸ್ತವಿಕತೆ ಮಾಹಿತಿ ತಿಳಿಯದೆ ಮಾತನಾಡುವುದು ಸರಿಯಲ್ಲ ಎಂದಿರುವ ಜಲಸಂಪನ್ಮೂಲ ಖಾತೆ ನಿರ್ವಹಿಸಿದ ಅನುಭವ ಇರುವ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಯಾವ ಕಾರಣಕ್ಕೆ ಘಟನೆ ಆಗಿದೆ ಎನ್ನುವ ಬಗ್ಗೆ ಜಲಸಂಪನ್ಮೂಲ ಖಾತೆ ಹೊಂದಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೋಡಿಕೊಳ್ಳುತ್ತಾರೆ ಎಂದಿದ್ದಾರೆ.
ಭಾನುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಪ್ರಕರಣಕ್ಕೆ ತಾಂತ್ರಿಕವಾಗಿ ಕಾರಣವಾಗಿರುವ ಸಮಸ್ಯೆ ಬಗ್ಗೆ ತಿಳಿಯಬೇಕಿದೆ ಎಂದರು.
ಜಲಸಂಪನ್ಮೂಲ ಖಾತೆ ಹೊಂದಿರುವ ಶಿವಕುಮಾರ ಮುಂದಿನ ಕ್ರಮ ಕೈಗೊಳ್ಳುತ್ತಾರೆ ಎಂದರು.
ಇಂಥ ಘಟನೆ ಸಂದರ್ಭದಲ್ಲಿ ನವಲಿ ಬಳಿ ಸಮಾನಾಂತರ ಜಲಾಶಯ ನಿರ್ಮಿಸಿದ್ದರೆ ನೀರು ಪೋಲು ಆಗ್ತಿರಲಿಲ್ಲ ಎನ್ನುವ ಮಾತು ಕೇಳಿ ಬರುತ್ತಿದೆ. ಆದರೆ ನವಲಿ ಸಮಾನಾಂತರ ಜಲಾಶಯ ನಿರ್ಮಾಣ ಅಂತರ ರಾಜ್ಯ ಯೋಜನೆ. ಹೀಗಾಗಿ ಕರ್ನಾಟಕ ರಾಜ್ಯ ಮಾತ್ರ ಈ ವಿಷಯದಲ್ಲಿ ಏಕಪಕ್ಷೀಯ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದರು.
ನವಲಿ ಬಳಿ ಸಮಾನಾಂತರ ಜಲಾಶಯ ನಿರ್ಮಾಣದ ಕುರಿತು ಎರಡು ರಾಜ್ಯದವರ ಭಾವನೆಯನ್ನು ನ್ಯಾಯಾಲಯದಲ್ಲಿ ಚರ್ಚೆ ಮಾಡಬೇಕಾಗುತ್ತದೆ ಎಂದರು.
ತುಂಗಭದ್ರಾ ಮಂಡಳಿಯಲ್ಲಿ ಎರಡು ರಾಜ್ಯಗಳ ಚರ್ಚೆಯೂ ಆಗಬೇಕಾಗುತ್ತದೆ. ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದರು.
ನವಲಿ ಬಳಿ ತುಂಗಭದ್ರಾ ನದಿಗೆ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಒತ್ತು ಕೊಡುವ ಕುರಿತು ಡಿಸಿಎಂ ಶಿವಕುಮಾರ ಜೊತೆ ಮಾತನಾಡುತ್ತೇನೆ ಎಂದರು.
ನಿರ್ವಹಣೆ ಕೊರತೆಯಿಂದ ಟಿಬಿ ಡ್ಯಾಂ ಕ್ರಸ್ಟ್ ಗೇಟ್ ಲಿಂಕ್ ಕಟ್ ಆಗಿದೆ ಎಂದು ಸುಮ್ಮನೆ ಆರೋಪ ಮಾಡುವುದು ಸರಿಯಲ್ಲ. ಏನಾಗಿದೆ ಎಂದು ನೋಡೋಣ. ಘಟನೆ ಏಕಾಯಿತು ಎಂದು ಅರ್ಥ ಮಾಡಿಕೊಳ್ಳುವ ಕೆಲಸ ಆಗಬೇಕಿದೆ ಎಂದರು.
ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಘಟನೆಯಿಂದ ಇತರೆ ಜಲಾಶಯದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕಿದೆ. ಈ ವಿಷಯದಲ್ಲಿ ನಮ್ಮ ಸರ್ಕಾರ ಅಧಿಕಾರಿಗಳ ಜವಾಬ್ದಾರಿ ನಿರ್ವಹಿಸಲಿದ್ದಾರೆ ಎಂದರು.
ಡಿಕೆಶಿ ಭೇಟಿ ಸಾಧ್ಯತೆ
ತುಂಗಭದ್ರಾ ಡ್ಯಾಮ್ ನ 19ನೇ ಗೇಟ್ ಕಟ್ಟಾದ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ನೀರು ನದಿಪಾತ್ರಕ್ಕೆ ಹರಿದು ಹೋಗುತ್ತಿದ್ದು ಈ ಕುರಿತಂತೆ ಪರಿಶೀಲನೆ ನಡೆಸಲು ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರು ಡ್ಯಾಮ್ ಸ್ಥಳಕ್ಕೆ ಆಗಮಿಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Muddebihal: ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ
Waqf ಜೆಪಿಸಿ ಅಧ್ಯಕ್ಷ ಭೇಟಿ ಹಿನ್ನೆಲೆ: ವಿಜಯಪುರಕ್ಕೆ ಬಂದ ಜೊಲ್ಲೆ ದಂಪತಿ, ಜಾರಕಿಹೊಳಿ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
MUST WATCH
ಹೊಸ ಸೇರ್ಪಡೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ
Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.