ವಿಜಯಪುರ ಪ್ರವಾಹ ಪ್ರದೇಶಗಳಲ್ಲಿ ಸಿಎಂ ಸಮೀಕ್ಷೆ: ಜಿಲ್ಲಾಡಳಿತದಿಂದ ಹಾನಿಯ ಅಂದಾಜು ಸಿದ್ಧ
Team Udayavani, Oct 21, 2020, 11:23 AM IST
ವಿಜಯಪುರ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ವಿಜಯಪುರ ಜಿಲ್ಲೆಯ ಅತಿವೃಷ್ಠಿ, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡಸಲಿದ್ದು, ಜಿಲ್ಲಾಡಳಿತ ಪ್ರಕೃತಿ ವಿಕೋಪದಿಂದ ಆಗಿರುವ ಹಾನಿಯ ಕುರಿತು ಪ್ರಾಥಮಿಕ ಅಂದಾಜು ಪಟ್ಟಿ ಸಿದ್ದಪಡಿಸಿದೆ.
ವಿಜಯಪುರ ಜಿಲ್ಲೆಯಲ್ಲಿ ಅತಿವೃಷ್ಠಿ ಹಾಗೂ ಪ್ರವಾಹ ಹಾನಿ ಬಗ್ಗೆ ಸಿಎಂಗೆ ಪ್ರಾಥಮಿಕ ವರದಿ ನೀಡಲು ಜಿಲ್ಲಾಧಿಕಾರಿ ಪಿ.ಸುನಿಲಕುಮಾರ ನೇತೃತ್ವದಲ್ಲಿ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ.
ಪ್ರಕೃತಿ ವಿಕೋಪದಿಂದ ಜಿಲ್ಲೆಯಲ್ಲಿ ಅಗಿರುವ ಹಾನಿಯ ಬಗ್ಗೆ ವೈಮಾನಿಕ ಸಮೀಕ್ಷೆ ಬಳಿಕ ಆಲಮಟ್ಟಿ ಲಾಲ ಬಹಾದ್ದೂರ ಶಾಸ್ತ್ರೀ ಜಲಾಶಯ ಪರಿಸರದ ಕೆಬಿಜೆಎನ್ಎಲ್ ವ್ಯವಸ್ಥಾಪಕ ನಿರ್ದೇಶಕರ ಕಛೇರಿ ಸಭಾಂಗಣದಲ್ಲಿ ನಡೆಯುವ ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆಯಲ್ಲಿ ಈ ಹಾನಿಯ ವರದಿ ಮಂಡನೆಯಾಗಲಿದೆ.
ಇದನ್ನೂ ಓದಿ:ಉತ್ತರ ಕರ್ನಾಟಕದಲ್ಲಿ ಮತ್ತೆ ನೆರೆ ಪರಿಹಾರ ಕಾರ್ಯವೇ ಸವಾಲು
ಜಿಲ್ಲೆಯಲ್ಲಿ 28 ಗ್ರಾಮಗಳು ಪ್ರವಾಹ ಪೀಡಿತವಾಗಿದ್ದು, 2543 ಮನೆಗಳು ಜಲಾವೃತವಾಗಿವೆ. ಮಳೆ ಹಾಗೂ ಪ್ರವಾಹದಿಂದ 72,534 ಜನರಿಗೆ ತೊಂದರೆ ಆಗಿದ್ದು,1516 ಸಂತ್ರಸ್ತರನ್ನು ರಕ್ಷಣಾ ತಂಡಗಳು ರಕ್ಷಿಸಿವೆ. 12,217 ಜನರನ್ನು ಸ್ಥಳಾಂತರಿಸಿ ಕಾಳಜಿ ಕೇಂದ್ರದಲ್ಲಿ ತಾತ್ಕಾಲಿಕ ಪುನರ್ವಸತಿ ಕಲ್ಪಿಸಲಾಗಿದೆ. ಸಂತ್ರಸ್ತರಿಗಾಗಿ 42 ಕಾಳಜಿ ಕೇಂದ್ರ ತೆರೆದಿದ್ದು, 1140 ಕುಟುಂಬಗಳಿಗೆ ಕಾಳಜಿ ಕೇಂದ್ರದಲ್ಲಿ ಆಶ್ರಯ ನೀಡಿದ್ದು, 5317 ಜನರು ಕಾಳಜಿ ಕೇಂದ್ರದಲ್ಲಿದ್ದಾರೆ. ಇದರಲ್ಲಿ 1955 ಪುರುಷರು, 1883 ಮಹಿಳೆಯರು, 1490 ಮಕ್ಕಳು ಸೇರಿದ್ದಾರೆ.
ಅತಿವೃಷ್ಠಿ ಹಾಗೂ ಪ್ರವಾಹದಿಂದ 160739 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ 63,646.65 ಲಕ್ಷ ರೂ. ಮೌಲ್ಯದ ಕೃಷಿ ಬೆಳೆ ಹಾನಿಯಾಗಿದೆ. 11929.10 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ತೋಟಗಾರಿಕಾ ಬೆಳೆಗಳು ಹಾನಿಯಾಗಿದ್ದು,15601.78 ಲಕ್ಷ ರೂ. ಮೌಲ್ಯದ ತೋಟಗಾರಿಕಾ ಬೆಳೆಗಳು ನಷ್ಟವಾಗಿವೆ.
ಮಳೆಯಿಂದ 4237.95 ಕಿಲೋ ಮೀಟರ್ ರಸ್ತೆಗಳು ಹಾಗೂ 77 ಸೇತುವೆಗಳಿಗೆ ಹಾನಿಯಾಗಿವೆ ಎಂದು ಜಿಲ್ಲಾಡಳಿತ ಅಂದಾಜಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.