ಸರಕಾರಿ ಪ್ರೌಢ ಶಾಲೆಗಳಲ್ಲಿ ಕರಾಟೆ ತರಬೇತಿಗೆ ಕೊಕ್‌!


Team Udayavani, Dec 15, 2018, 2:27 PM IST

vij-4.jpg

ಮುದ್ದೇಬಿಹಾಳ: ಹೆಣ್ಣು ಮಕ್ಕಳನ್ನು ಸದೃಢರಾಗಿಸಿ ಸಮಾಜದಲ್ಲಿ ಧೈರ್ಯದಿಂದ ಇರಲು ಕೇಂದ್ರ ಹಾಗೂ ರಾಜ್ಯ ಸರಕಾರ ಎಲ್ಲ ಸರಕಾರಿ ಪ್ರೌಢ ಶಾಲೆಗಳಲ್ಲಿ ಆರ್‌ಎಂಎಸ್‌ಎ ಯೋಜನೆ ಅಡಿಯಲ್ಲಿ ಕರಾಟೆ ತರಬೇತಿಯನ್ನು ಪ್ರಾರಂಭಿಸಿ ಪಾಲಕರು ನೆಮ್ಮದಿಯಿಂದಿರಲು ಅನುಕೂಲ ಮಾಡಿಕೊಟ್ಟಿತ್ತು. ಆದರೆ ದಿಢೀರ್‌ನೆ 2018-19ನೇ ಸಾಲಿನ ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ ನಿಲ್ಲಿಸಿದ್ದು ಪಾಲಕರಲ್ಲಿ ಮತ್ತೆ ಆತಂಕ ಮೂಡಿದಂತಾಗಿದೆ.

ದೇಶದಲ್ಲಿ ನಿರ್ಭಯಾ ಸೇರಿದಂತೆ ಇನ್ನಿತರ ಬಾಲಕಿಯರ ಮೇಲಾಗುತ್ತಿದ್ದ ಅತ್ಯಾಚಾರಗಳನ್ನು ತಡೆಗಟ್ಟಲು ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರ ಜಂಟಿಯಾಗಿ ಈ ಯೋಜನೆಯನ್ನು ಜಾರಿಗೆ ತಂದಿತ್ತು. ಅದರಂತೆ ಕರಾಟೆಯಲ್ಲಿ
ನುರಿತ ತರಬೇತುದಾರರಿಂದ 2013-14ರಿಂದ ವಿದ್ಯಾರ್ಥಿನಿಯರಗೆ ಕರಾಟೆ ತರಬೇರಿಯನ್ನು ನೀಡಲು ಪ್ರಾರಂಭಿಸಲಾಯಿತು. ಇದರಿಂದ ವಿದ್ಯಾರ್ಥಿನಿಯರಲ್ಲಿ ಹೆಚ್ಚಿನ ಸಬಲತೆ ಕಾಣುವಂತಾಗಿತ್ತು. ಸದ್ಯಕ್ಕೆ ತರಬೇತಿ ನಿಲ್ಲಿಸಿದ್ದು ಪ್ರಸ್ತುತ ಪ್ರೌಢ ಶಾಲಾ ವಿದ್ಯಾರ್ಥಿನಿಯರಲ್ಲಿ ಮತ್ತೆ ಆತಂಕ ಎದುರಾಗಿದೆ.

ಬಾರದ ಕೇಂದ್ರದ ಹಣ: ಯೋಜನೆಯನ್ನು ಸಮರ್ಪಕವಾಗಿ ಮುಂದುವರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ನಿರ್ಲಕ್ಷ್ಯ ತೋರಿವೆ. ಕೇಂದ್ರ ಸರಕಾರದೊಂದಿಗೆ ಮಾತುಕತೆ ನಡೆಸಿ ಯೋಜನೆಯನ್ನು ರಾಜ್ಯದಲ್ಲಿ ಸಮಪರ್ಕವಾಗಿ
ಜಾರಿಗೆ ತರುವ ಕೆಲಸವನ್ನು ರಾಜ್ಯ ಸರಕಾರ ಮಾಡದೇ 2018-19ನೇ ಸಾಲಿನಲ್ಲಿ ಕರಾಟೆ ತರಬೇತಿ ಪ್ರಾರಂಭಿಸದಿರುವುದನ್ನು ರಾಜ್ಯ ಸರಕಾರದ ಸಂಬಂಧಿಸಿದ ಅಧಿಕಾರಿಗಳಿಗೆ ಕೇಳಿದರೆ ಕೇಂದ್ರದಿಂದ ಇನ್ನೂವರೆಗೂ ಹಣ ಬಾರದ ಕಾರಣ ಕರಾಟೆ ತರಬೇತಿ ಯೋಜನೆಯನ್ನು ನಿಲ್ಲಿಸಲಾಗಿದೆ ಎಂಬ ಬೇಜವಾಬ್ದಾರಿತ ಸ್ಪಷ್ಠನೆ ನೀಡುತ್ತಿದ್ದಾರೆ. 

ಕೇಂದ್ರ ಸರಕಾರದಲ್ಲಿ ಹಣವಿಲ್ಲವೇ?: ದೇಶದಲ್ಲಿ ನಾನಾ ಜನಪರ ಯೋಜನೆಗಳನ್ನು ತಂದಿರುವ ಕೇಂದ್ರ ಸರಕಾರದಲ್ಲಿ ಬೇಟಿ ಪಡಾವೊ,ಬೇಟಿ ಬಚಾವೊ ಒಂದಾಗಿದೆ. ಇಂತಹ ಯೋಜನೆಗಳಿಂದ ಬಹುತೇಕ ಎಲ್ಲ ಬಡ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವೂ ಹಾಗಿದೆ. ಅಲ್ಲದೇ ಇಂತಹ ಯೋಜನೆಗಳಿಗೆ ಕೇಂದ್ರದಲ್ಲಿ ಸಾಕಷ್ಟು ಹಣ ಇರುತ್ತದೆ. ಆದರೆ ಪ್ರೌಢ ಶಾಲಾ ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ ಯೋಜನೆಗೆ ಮಾತ್ರ ಹಣವಿಲ್ಲ ಎನ್ನುವುದು ಯಾವ ನ್ಯಾಯ ಎಂದು ರಾಜ್ಯದ ಕರಾಟೆ ತರಬೇತುದಾರರ ಪ್ರಶ್ನೆಯಾಗಿದೆ.
 
ಪ್ರತಿಭಟನೆಗೆ ಸಜ್ಜು: ರಾಜ್ಯದ ಸರಕಾರಿ ಶಾಲೆಗಳಲ್ಲಿ ಕಲಿಕೆ ನಡೆಸಿರುವವರು ಬಹುತೇಕರು ಆರ್ಥಿಕವಾಗಿ ಹಿಂದುಳಿದವರಾಗಿದ್ದಾರೆ. ಅಲ್ಲದೇ ಶೇ. 80ರಷ್ಟು ಗ್ರಾಮೀಣ ಪ್ರದೇಶದ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು
ಕರಾಟೆ ತರಬೇತಿಯಿಂದ ವಂಚಿತರಾಗಿದ್ದಾರೆ. ಆದ್ದರಿಂದ ಕೂಡಲೇ ರಾಜ್ಯ ಸರಕಾರ ಕೇಂದ್ರ ಸರಕಾರದೊಂದಿಗೆ ಮಾತುಕತೆ ನಡೆಸಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಕರಾಟೆ ತರಬೇತಿಯನ್ನು ಶೀಘ್ರದಲ್ಲಿಯೇ ಪ್ರಾರಂಭಿಸಬೇಕು.

ಇಲ್ಲವಾದಲ್ಲಿ ರಾಜ್ಯ ಕರಾಟೆ ಶಿಕ್ಷಕರ ಸಂಘದವತಿಯಿಂದ ಎಲ್ಲ ಜಿಲ್ಲೆಗಳಲ್ಲಿಯೂ ಸರಕಾರಗಳ ವಿರುದ್ಧ ಪ್ರತಿಭಟನೆ ಮಾಡಲು ಈಗಾಗಲೇ ಕರಾಟೆ ತರಬೇತುದಾರರು ವೇಧಿಕೆಯನ್ನು ಸಿದ್ಧಗೊಳಿಲಸಿದ ಮಾಹಿತಿ ಗೌಪ್ಯವಾಗಿಯೇ ಲಭ್ಯವಾಗಿದ್ದು ಕೂಡಲೇ ರಾಜ್ಯ ಸರಕಾರ ಇದರ ಬಗ್ಗೆ ಎಚ್ಚೆತ್ತುಕೊಂಡು ಕರಾಟೆ ತರಬೇತಿಯನ್ನು ಪ್ರಾರಂಭಿಸಬೇಕಾಗಿದೆ. ಇಲ್ಲವಾದರೆ ಪ್ರತಿ ಜಿಲ್ಲೆಯ ಕರಾಟೆ ತರಬೇತುದಾರರು ಪ್ರತಿಭಟನೆಯನ್ನು ಎದುರಿಸಬೇಕಾಗಿದೆ.

ಪ್ರಸ್ತುತ ಸಾಲಿನಲ್ಲಿ ಹಣವಿಲ್ಲ ಎಂದು ತರಬೇತಿ ನಿಲ್ಲಿಸಿದ್ದು ಗ್ರಾಮೀಣ ಬಡ ವಿದ್ಯಾರ್ಥಿಗಳು ಕರಾಟೆ ಕಲಿಕೆಯಿಂದ ವಂಚಿತಗೊಳ್ಳುವಂತೆ ಮಾಡಿದೆ. ಇದರ ಬಗ್ಗೆ ಈಗಾಗಲೇ ಸರಕಾರದ ಪ್ರತಿಯೊಬ್ಬ ರಾಜಕೀಯ ವ್ಯಕ್ತಿಗಳಿಗೂ ತಿಳಿಸಿದ್ದು ಎಲ್ಲರೂ ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಆದರೆ ಇಲ್ಲಿವರೆಗೂ ಕ್ರಮ ಕೈಗೊಳ್ಳದಿರುವುದು
ವಿಷಾಧವಾಗಿದೆ.? 
 ಮೌನೇಶ ವಡ್ಡಟ್ಟಿ, ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಅಧ್ಯಕ್ಷ, ಕೊಪ್ಪಳ

ಸರಕಾರಿ ಪ್ರೌಢ ಶಾಲಾ ಮಕ್ಕಳಿಗೆ ಕರಾಟೆ ತರಬೇತಿ ಪ್ರಾರಂಭಿಸಿದ್ದು ಸ್ವಾಗತಾರ್ಹವಾಗಿತ್ತು. ಸ್ವಯಂ ಪ್ರೇರಿತವಾಗಿ
ಸದೃಢರಾಗುವ ಕರಾಟೆ ತರಬೇತಿಯನ್ನೇ ಸರಕಾರ ನಿಲ್ಲಿಸಿದ್ದು ಖಂಡನೀಯ. ಕೂಡಲೇ ಇದನ್ನು
ಪ್ರಾರಂಭಿಸಬೇಕು. ಇಲ್ಲವಾದಲ್ಲಿ ರಾಜ್ಯಮಟ್ಟದಲ್ಲಿ ಪ್ರತಿಯೊಂದು ಜಿಲ್ಲೆಯಲ್ಲಿ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ. 
 ಕಟ್ಟೇಸ್ವಾಮಿ, ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಅಧ್ಯಕ್ಷ, ಬಳ್ಳಾರಿ

ಕಳೆದ 3 ವರ್ಷಗಳಿಂದ ಸರಕಾರ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆತ್ಮರಕ್ಷಣೆಗಾಗಿ ನೀಡುತ್ತಿದ್ದ ಕರಾಟೆ ತರಬೇತಿ ಮುಂದುವರಿಸುವಂತೆ ಸಾಕಷ್ಟು ಬಾರಿ ರಾಜ್ಯ ಸರಕಾರದ ಗಮನಕ್ಕೆ ತರಲಾಗಿದೆ. ಸರಕಾರವೂ ಶೀಘ್ರದಲ್ಲಿಯೇ ಪ್ರಾರಂಭಿಸುವುದಾಗಿ ತಿಳಿಸಿದೆ. ಆದರೆ ಕರಾಟೆ ತರಬೇತಿ ಯೋಜನೆ ಎಷ್ಟು ದಿನಗಳ ಮಟ್ಟಿಗೆ ಮುಂದೊಡುತ್ತದೆಯೋ ಅಷ್ಟೇ ಕರಾಟೆ ಕ್ರೀಡೆಯಿಂದ ವಂಚಿತ ವಿದ್ಯಾರ್ಥಿಗಳು ಹೆಚ್ಚಾಗುವುದನ್ನೂ ಗಮನಿಸಬೇಕಿದೆ.
 ನಿತ್ಯಾನಂದ ಕೆಮ್ಮಣ್ಣು, ರಾಜ್ಯಾಧ್ಯಕ್ಷ, ರಾಜ್ಯ ಕರಾಟೆ ಶಿಕ್ಷಕರ ಸಂಘ

ಶಿವಕುಮಾರ ಶಾರದಳ್ಳಿ

ಟಾಪ್ ನ್ಯೂಸ್

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.