ಸ್ಫರ್ಧಾತ್ಮಕ ಪರೀಕ್ಷೆಗಳೇ ಉದ್ಯೋಗಕ್ಕೆ ರಹದಾರಿ
Team Udayavani, Sep 18, 2022, 3:22 PM IST
ವಿಜಯಪುರ: ವಿದ್ಯಾರ್ಥಿಗಳು ನಿರಂತರ ಓದಿನ ಪ್ರಯತ್ನದಿಂದಲೇ ಯಶಸ್ಸು ಹೊಂದಲು ಸಾಧ್ಯ. ಸ್ಪರ್ಧಾತ್ಮಕ ಪದ್ಧತಿಯಲ್ಲಿ ನಡೆಯುವ ಅರ್ಹತಾ ಪರೀಕ್ಷೆಗಳು ಉದ್ಯೋಗದ ರಹದಾರಿಗಿವೆ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವ ಬಿ.ಎಸ್.ನಾವಿ ಅಭಿಪ್ರಾಯಪಟ್ಟರು.
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ಕೋಚಿಂಗ್ ಅಕಾಡೆಮಿ ಹಮ್ಮಿಕೊಂಡಿದ್ದ ಎರಡು ದಿನಗಳ ಸಿಟಿಇಟಿ-ಕೆ-ಟಿಇಟಿ ಪರಿಚಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಶಿಕ್ಷಣ ಮತ್ತು ವೃತ್ತಿಗೆ ಸಿದ್ಧತೆ ಎರಡು ಕ್ರಮಗಳು ಒಟ್ಟಿಗೆ ನಡೆಸಬೇಕು ಹಾಗೂ ಅದಕ್ಕಾಗಿ ತರಬೇತಿ ಅಗತ್ಯ ಎಂದರು.
ಶಿಕ್ಷಣ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ| ವಿಷ್ಣು ಶಿಂಧೆ ಮಾತನಾಡಿ, ಕೌಶಲ್ಯ, ತರಬೇತಿ, ತಜ್ಞತೆ ಇವುಗಳಿಂದ ಮಾತ್ರ ಅರ್ಹತೆ ಪಡೆಯಲು ಸಾದ್ಯ. ಅದಕ್ಕಾಗಿ ನಿರಂತರ ಪ್ರಯತ್ನ ಮುಖ್ಯ ಎಂದರು. ಅಧ್ಯಕ್ಷತೆ ವಹಿಸಿದ್ದ ಡಾ| ಉದಕುಮಾರ ಕುಲಕರ್ಣಿ, ವಿಧ್ಯಾರ್ಥಿಗಳು ಶೃದ್ಧೆಯಿಂದ ತರಬೇತಿಯಲ್ಲಿ ಭಾಗವಹಿಸಿ ಬದ್ಧತೆಯಿಂದ ಕಲಿಯಬೇಕು. ಇಂಥ ಕಾರ್ಯಕ್ರಮಗಳ ಪ್ರಯೋಜನ ಪಡೆದು ನೀವೆಲ್ಲ ಉದ್ಯೋಗ ಪಡೆದಾಗಲೇ ಕಾರ್ಯಕ್ರಮ ಆಯೋಜನೆಗೆ ಅರ್ಥ ಬರಲಿದೆ ಎಂದರು.
ಕಾರ್ಯಕ್ರಮದ ಸಂಯೋಜಕ ಡಾ| ಪ್ರಕಾಶ ಸಣ್ಣಕ್ಕನವರ ಪ್ರಾಸ್ತಾವಿಕ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾದ ರಮೇಶ ಆವಜಿ, ಮಂಜುನಾಥ ಗದಗ, ಡಾ| ಪ್ರಕಾಶ ಬಡಿಗೇರ, ಲಿಂಗರಾಜ ಯತ್ನಳ್ಳಿ ಇದ್ದರು. ಪ್ರಶಿಕ್ಷಣಾರ್ಥಿಗಳು ಮಹಿಳಾ ಗೀತೆ ಹಾಡಿದರು. ತರನುಮ್ ಸಭಾ ಪರಿಚಯಿಸಿದರು. ನೇತ್ರಾ ತೊರವಿ ನಿರೂಪಿಸಿದರು. ರುಕ್ಸಾನಬೀ ಬಡೇಗಾರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್ ಕಾರ್ಡ್ ಸ್ಪರ್ಧಿಗಳು
Bengaluru: ಎಸ್‌ಎಸ್‌ಎಲ್‌ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.