ಪ್ರಶ್ನೆ ಪತ್ರಿಕೆ ಸೋರಿಕೆಗೆ ಖಂಡನೆ; ಎಬಿವಿಪಿ ಕಾರ್ಯಕರ್ತರ ಪ್ರತಿಭಟನೆ

ಭ್ರಷ್ಟಾಚಾರದ ಮೂಲಕ ಇದೇ ರೀತಿ ಹಲವು ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆ

Team Udayavani, Jan 25, 2021, 4:35 PM IST

ಪ್ರಶ್ನೆ ಪತ್ರಿಕೆ ಸೋರಿಕೆಗೆ ಖಂಡನೆ; ಎಬಿವಿಪಿ ಕಾರ್ಯಕರ್ತರ ಪ್ರತಿಭಟನೆ

ವಿಜಯಪುರ: ಕರ್ನಾಟಕ ಲೋಕಸೇವಾ ಆಯೋಗದ ಪ್ರಥಮ ದರ್ಜೆ ಸಹಾಯಕ ಹುದ್ದೆ ನೇಮಕಾತಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಖಂಡಿಸಿ ರವಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದ ಎಬಿವಿಪಿ ಕಾರ್ಯಕರ್ತರು ಸಮಗ್ರ ತನಿಖೆಗೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ನಗರದ ಮಹಾತ್ಮ ಗಾಂಧಿ ವೃತ್ತದಿಂದ ಡಾ| ಬಿ.ಆರ್‌. ಅಂಬೇಡ್ಕರ್‌ ವೃತ್ತದವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ಎಬಿವಿಪಿ ಕಾರ್ಯಕರ್ತರು, ಕೆಪಿಎಸ್‌ಸಿ ಆಡಳಿತ ವ್ಯವಸ್ಥೆ ವಿರುದ್ಧ ಆಕ್ರೋಶ  ವ್ಯಕ್ತಪಡಿಸಿದರು.

ಈ ವೇಳೆ ಸಂಘಟನೆಯ ರಾಜ್ಯ ಸಹ ಕಾರ್ಯದರ್ಶಿ ಸಚಿನ ಕುಳಗೇರಿ ಮಾತನಾಡಿ, ಕೆಪಿಎಸ್‌ಸಿ ಸ್ಪರ್ಧಾತ್ಮಕ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗುವುದು ಇದೇ ಮೊದಲೇನಲ್ಲ. ಭ್ರಷ್ಟಾಚಾರದ ಮೂಲಕ ಇದೇ ರೀತಿ ಹಲವು ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆ ಎಂಬುದು ಸಾಮಾನ್ಯವಾಗಿದೆ. ಒಂದೇ ತಾಲೂಕಿನಿಂದ ಒಂದೇ ಪರೀಕ್ಷಾ ಕೇಂದ್ರಗಳಿಂದ ನಡೆಸುವ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಭ್ಯರ್ಥಿಗಳು ಆಯ್ಕೆ ಆಗಿರುವ ಬಗ್ಗೆ ಪತ್ರಿಕೆಗಳಲ್ಲಿ ವರದಿ ಆಗಿದೆ.

ರಾಜ್ಯದಲ್ಲಿ ಇಂತಹ ಅಕ್ರಮಗಳು ಮತ್ತು ಭ್ರಷ್ಟಾಚಾರಗಳು ಕೆಪಿಎಸ್ಸಿಯಲ್ಲಿ ಮೇಲಿಂದ ಮೇಲೆ ನಡೆಯುತ್ತಿದ್ದರೂ ಕಡಿವಾಣ ಹಾಕುವ ಯಾವುದೇ ಉಪಾಯ ಕಂಡು ಹಿಡಿಯದ ಕೆಪಿಎಸ್‌ಸಿ ಕ್ರಮಕ್ಕೆ ಹೈಕೋರ್ಟ್‌ ಕೂಡ ಕಿಡಿ ಕಾರಿದೆ. ಇಂಥ ಹಂತದಲ್ಲೇ ಮತ್ತೆ ಪ್ರಶ್ನೆ ಪತ್ರಿಕೆಗಳು ಸೋರಿಕೆ ಆಗಿರುವುದು ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಮನೋಬಲ ಕುಗ್ಗಿಸಿ ಕೆಪಿಎಸ್ಸಿ ಮೇಲಿರುವ ಭರವಸೆಯನ್ನು ಕಳೆದುಕೊಳ್ಳುವಂತಾಗಿದೆ ಎಂದರು.

ಎಬಿವಿಪಿ ಹಾಸ್ಟೆಲ್‌ ಪ್ರಾಂತ ಸಹ ಪ್ರಮುಖ ನಿಂಗಣ್ಣ ಮನಗೂಳಿ ಮಾತನಾಡಿ, ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಅ ಧಿಕಾರಿಗಳು ತೊಡಸಿಕೊಂಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿ ಬರುತ್ತಿದೆ. ಪ್ರಶ್ನೆ ಪತ್ರಿಕೆ ಎಲ್ಲಿಂದ ಬಂತು, ಯಾರು ತಂದುಕೊಟ್ಟಿದ್ದಾರೆ. ಈ ಜಾಲದ ಹಿಂದೆ ಇನ್ನೂ ಯಾರ್ಯಾರಿದ್ದಾರೆ, ಇದರ ಹಿಂದಿರುವ ಕಾಣದ ಕೈಗಳು ಯಾವುದು ಎಂಬುದನ್ನು ಉನ್ನತ ಮಟ್ಟದ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಪರೀಕ್ಷೆಗಳಿಗೆ
ಸಂಬಂಧಪಟ್ಟ ಅವ್ಯವಹಾರಗಳು ಮತ್ತೂಮ್ಮೆ  ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ಆಗ್ರಹಿಸಿದರು.

ಎಬಿವಿಪಿ ಜಿಲ್ಲಾ ಸಂಚಾಲಕ ಬಸವರಾಜ ಪೂಜಾರಿ, ಸಿದ್ದು ಪತ್ತಾರ, ಐಶ್ವರ್ಯ ಕುಲಕರ್ಣಿ, ಸೃಷ್ಟಿ ಬಿರಾದಾರ, ಪಾಂಡು ಮೋರೆ, ಬಸವರಾಜ ಲಗಳಿ, ಮಹಾಂತೇಶ ಕಂಬಾರ, ಸಹನಾ ಬಿರಾದಾರ, ಕಿರಣ ಸಿಂಪಿ, ನಚಿಕೇತ, ಮನೋಜ್‌, ಸಂಗಮೇಶ, ಅಮಿತ್‌, ಶ್ರೀಧರ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.