ಸಿಎಂ ಸಿದ್ದು ಬಣ ಕಾಂಗ್ರೆಸ್‌ನ ಬಿ ಟೀಂ
Team Udayavani, Apr 9, 2018, 1:07 PM IST
ವಿಜಯಪುರ: ಜೆಡಿಎಸ್‌ಗೆ ಮತ ಹಾಕಿದರೆ ಬಿಜೆಪಿಗೆ ಹಾಕಿದಂತೆ, ಜೆಡಿಎಸ್ ಪಕ್ಷ ಬಿಜೆಪಿ ಬಿ ಟೀಂ ಎಂದು ಸಿಎಂ ಸಿದ್ದರಾಮಯ್ಯ ಟೀಕೆ ಮಾಡುತ್ತಾರೆ. ಆದರೆ ಸ್ವಯಂತ ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ವಲಸೆ ಹೋಗಿದ್ದರಿಂದ ಆ ಖರ್ಗೆ, ಡಾ| ಪರಮೇಶ್ವರ ಅವರಂಥ ನಾಯಕರು ಮೂಲೆಗುಂಪಾದರು. ಹೀಗಾಗಿ ಸಿದ್ದರಾಮಯ್ಯ ಅವರು ತಮ್ಮದು ಕಾಂಗ್ರೆಸ್ ಬಿ ಟೀಂ ಎಂಬುವುದನ್ನು ಮರೆತಿದ್ದಾರೆ
ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಟೀಕಾಪ್ರಹಾರ ನಡೆಸಿದರು.
ರವಿವಾರ ನಗರದಲ್ಲಿ ನಾಗಠಾಣ ವಿಧಾನಸಭೆ ಕ್ಷೇತ್ರದ ಪಕ್ಷದ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆ ರಾಮಕೃಷ್ಣ ಹೆಗಡೆ ಸರ್ಕಾರದ ಕೊಡುಗೆ. ಇದನ್ನು ಸಿದ್ದರಾಮಯ್ಯ ಸರ್ಕಾರ ತನ್ನದೆಂದು ಹೇಳಿಕೊಳ್ಳುತ್ತಿದೆ. ಮತ್ತೂಂದು ರಾಜ್ಯದಲ್ಲಿ ಅಭಿವೃದ್ಧಿ ಮಾಡದೇ ಜಾಹೀರಾತು ಸರ್ಕಾರ ನಡೆಸಿದ ಸಿದ್ದರಾಮಯ್ಯ ಸರ್ಕಾರ, ಇದಕ್ಕಾಗಿ 1 ಸಾವಿರ ಕೋಟಿ ರೂ. ಖರ್ಚು ಮಾಡಿದ್ದು ಅನುಮೋದಿಸಿದೆ, ಮಂಜೂರು ಮಾಡಿದೆ ಎಂಬುದನ್ನು ಹೇಳಲು ಬಳಸಿದೆಯೇ ಹೊರತು ಮಾಡಿದ ಸಾಧನೆ ಹೇಳಲು ಅಲ್ಲ. ಇನ್ನು ನೀರಾವರಿ ಸಚಿವ ಎಂ.ಬಿ. ಪಾಟೀಲ ಬಲಲೇಶ್ವರ ಕ್ಷೇತ್ರಕ್ಕೆ ಮಿತಿಗೊಂಡರೇ ಹೊರತು ಬೇರೆಡೆ ಚಿತ್ತ ಹರಿಸಲೇ ಇಲ್ಲ ಎಂದು ಲೇವಡಿ ಮಾಡಿದರು.
ಬಿಜೆಪಿ ಹಾಗೂ ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖ. ಹೊಂದಾಣಿಕೆ ರಾಜಕೀಯ ಈ ಪಕ್ಷಗಳ ಗುಟ್ಟು ಎಂದು ಜರಿದ ಅವರು, ಬಿಜೆಪಿ ಹಿಂದೂ ಎಂದು, ಕಾಂಗ್ರೆಸ್ ದಲಿತ-ಮುಸ್ಲಿಂ ಸಮುದಾಯಗಳ ಪರ ಎಂದು ಬಿಂಬಿಸಿಕೊಳ್ಳುತ್ತಲೇ ಈ ಸಮುದಾಯಗಳನ್ನು ತಮ್ಮ ರಾಜಕೀಯ ದಾಳ ಮಾಡಿಕೊಂಡವು. ಆದರೆ ಈ ಸಮುದಾಯಗಳ ಅಭಿವೃದ್ಧಿಗೆ ಆದ್ಯತೆ ನೀಡಲಿಲ್ಲ. ಇದೇ ಕಾರಣಕ್ಕೆ ರಾಜ್ಯದಲ್ಲಿ ಬಹುತೇಕ ಅಧಿಕಾರ ನಡೆಸಿ ಕಾಂಗ್ರೆಸ್ ಓರ್ವ ದಲಿತನನ್ನೂ ಸಿಎಂ ಮಾಡಲಿಲ್ಲ ಎಂಬುದಕ್ಕೆ ಇದೇ ಪ್ರಮುಖ ಕಾರಣ ಎಂದು
ವಿಶ್ಲೇಷಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್-ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಬಂದರೂ ಅಭಿವೃದ್ಧಿ ಬಗ್ಗೆ ಚರ್ಚಿಸದೇ ಪರಸ್ಪರ ಕೆಸರು ಎರಚಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ರೈತರು ಮಾತ್ರವಲ್ಲ ನೂರಾರು ನೇಕಾರರೂ ಆತ್ಮಹತ್ಯೆ ಮಾಡಿಕೊಂಡಿದ್ದು, ಬೆಳಗಾವಿ ಒಂದೇ ಜಿಲ್ಲೆಯಲ್ಲಿ 70 ನೇಕಾರರು ನೇಣಿಗೆ ಕೊರಳೊಡ್ಡಿದ್ದಾರೆ. ಇಷ್ಟಾದರೂ ಈ ಸರ್ಕಾರ ಕಣ್ತೆರೆದು ನೋಡಲಿಲ್ಲ. ಆದರೆ ನಮ್ಮ ಸರ್ಕಾರ
ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ರಾಜ್ಯದ ರೈತರ ರಾಷ್ಟ್ರೀಕೃತ, ಗ್ರಾಮೀಣ ಹಾಗೂ ಸಹಕಾರಿ ಎಲ್ಲ ಸಾಲ ಮಾಡಲಿದೆ. ಜೊತೆಗೆ ಕೃಷಿ ಸಬಲೀಕರಣಕ್ಕಾಗಿ ಇಸ್ರೇಲ್ ಮಾದರಿಯಲ್ಲಿ ಕೃಷಿ ಕಾರ್ಯಕ್ರಮಗಳನ್ನು ರೂಪಿಸಿ, ರೈತರ ಬೆವರಿನ ಶ್ರಮ ವ್ಯರ್ಥವಾಗದಂತೆ ಉತ್ಪನ್ನಗಳಿಗೆ ಮಾರುಕಟ್ಟೆ ಸೇರಿ ಹಲವು ಯೋಜನೆ ಜಾರಿಗೆ ತರಲಿದೆ ಎಂದರು.
ಮಾಜಿ ಸಚಿವ ಬಸವರಾಜ ಹೊರಟ್ಟಿ, ಬಿಎಸ್‌ಪಿ ರಾಜ್ಯ ಉಸ್ತುವಾರಿ ಗೋಪಿನಾಥ ಮಾತನಾಡಿದರು. ಜಿಲ್ಲೆಯ ಜೆಡಿಎಸ್ ಘೋಷಿತ ಅಭ್ಯರ್ಥಿಗಳಾದ ನಾಗಠಾಣ-ದೇವಾನಂದ ಚವ್ಹಾಣ, ಇಂಡಿ-ಬಿ.ಡಿ. ಪಾಟೀಲ, ಸಿಂದಗಿ-ಎಂ.ಸಿ. ಮನಗೂಳಿ, ಮುಖಂಡರಾದ ಎಂ.ಆರ್. ಪಾಟೀಲ ಬಳ್ಳೊಳ್ಳಿ, ರೇಷ್ಮಾ ಪಡೇಕನೂರ, ಎಲ್.ಎಲ್. ಉಸ್ತಾದ, ಚಂದ್ರಕಾಂತ ಹಿರೇಮಠ, ಎಸ್.ವಿ. ಪಾಟೀಲ, ಗೋವಿಂದ ಜೋಶಿ, ಕವಿತಾ ರಾಠೊಡ, ಮಲ್ಲಿಕಾರ್ಜುನ ಯಂಡಿಗೇರಿ ಸೇರಿದಂಥೆ ಇತರರು ವೇದಿಕೆ ಮೇಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.