ಮೋದಿ ಹೇಳಿದ ಅಚ್ಚೇದಿನ್ ಎಂದರೆ ಬೆಲೆ ಏರಿಕೆ: ಎನ್.ಎಸ್. ಭೋಸರಾಜು
Team Udayavani, Jun 14, 2021, 2:24 PM IST
ವಿಜಯಪುರ: ಒಂದೂವರೆ ವರ್ಷದಲ್ಲಿ ದೇಶದ ಜನರು ಕೋವಿಡ್ ಸೋಂಕಿನಿಂದ ಸಾವು, ನೋವು, ಲಾಕ್ ಡೌನ್ ಕಾರಣದಿಂದ ಜನರು ತತ್ತರಿಸಿದ್ದಾರೆ. ಇಂಥ ಸಂದರ್ಭದಲ್ಲಿ ಇಂಧನ ಬೆಲೆ ಏರಿಕೆ ಮೂಲಕ ದೇಶದಲ್ಲಿ ಬೆಲೆ ಏರಿಕೆ ಆಗಿದೆ. ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಆಡಳಿತ ವಿರೋಧಿಸಿ ಕಾಂಗ್ರೆಸ್ ನಿರಂತರ ಹೋರಾಟ ನಡೆಸಲಿದೆ ಎಂದು ಎಐಸಿಸಿ ಕಾರ್ಯದರ್ಶಿ ಎನ್.ಎಸ್. ಭೋಸರಾಜು ಟೀಕಿಸಿದರು.
ಸೋಮವಾರ ನಗರದ ಕಾಂಗ್ರೆಸ್ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಜ್ಞರು ಎರಡನೇ ಅಲೆಯ ಮುನ್ನೆಚ್ಚರಿಕೆ ನೀಡಿದರೂ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ನಿರ್ಲಕ್ಷ್ಯ ವಹಿಸಿತು. ದೀಪ ಹಚ್ವಿ, ಚಪ್ಪಾಳೆ ಬಡಿಯುವದರಿಂದ ಸೋಂಕು ಹೋಗಲಿದೆ ಎಂದು ಹೇಳಿದವರು ಇವರು ಟೀಕಾ ಪ್ರಹಾರ ನಡೆಸಿದರು.
ಸಂಸದೀಯ ಸಮಿತಿ, ತಜ್ಞರು ನೀಡಿದ ವರದಿಯನ್ನು ಕೇಂದ್ರ ನಿರ್ಲಕ್ಷ್ಯ ಕುಂಭಮೇಳ, ಚುನಾವಣೆ ನಡೆಸಿದರು. ಲಸಿಕೆ ಉತ್ಪಾದನೆಗೆ ಹೆಚ್ಚಿನ ಅವಕಾಶ ಇದ್ದರೂ ಹೆಚ್ಚಿನ ಮುತುವರ್ಜಿ ತೋರಲಿಲ್ಲ. ಪರಿಣಾಮ ದೇಶದ ಜನರು ರೋಗದಿಂದ ತತ್ತರಿಸುವಂತೆ ಮಾಡಿದೆ. ರಾಜ್ಯದಲ್ಲಿ ಕೋವಿಡ್ ಅಗತ್ಯ ವೈದ್ಯಕೀಯ ಪರಿಕರ ಖರೀದಿಯಲ್ಲಿ ದೊಡ್ಡ ಮಟ್ಡದ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು.
ಪೆಟ್ರೋಲಿಯಂ ಹಾಗೂ ಅಡುಗೆ ಅನಿಲ ಬೆಲೆ ನಿಯಂತ್ರಣದಲ್ಲಿ ಮೋದಿ ಸರ್ಕಾರ ವಿಫಲವಾಗಿದೆ. ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ ದೇಶಗಳಿಗಿಂತ ಭಾರತದಲ್ಲಿ ಇಂಧನ ಬೆಲೆ ಹೆಚ್ಚಾಗಿದೆ. ಅಧಿಕಾರಕ್ಕೆ ಬರುವ ಮುನ್ನ ಮೋದಿ ಅವರು ಹೇಳಿದ್ದ ಅಚ್ಚೆ ದಿನ್ ಎಂದರೆ ಇದೇ ಆಗಿದೆ. ಇದು ಸರ್ಕಾರದ ದುರ್ಬಲ ಆಡಳಿತದ ಪ್ರತೀಕ. ಇದರಿಂದಾಗಿ ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಗಮನಕ್ಕೆ ಏರಿದೆ. ಪರಿಣಾಮ ಜನರು ಸಹಜ ಜೀವನ ನಡೆಸಲು ಪರದಾಟ ನಡೆಸಿದ್ದಾರೆ ಎಂದು ದೂರಿದರು.
ಕಾಂಗ್ರೆಸ್ ಪ್ರತಿಭಟನೆ ಬಳಿಕ ಸರ್ಕಾರ ಉಚಿತ ಲಸಿಕೆ ನಿರ್ಧಾರ ಎನ್ನುತ್ತಿದೆ. ನರೇಗಾ ಯೋಜನೆ ಉದ್ಯೋಗ ದಿನಗಳ ಹೆಚ್ಚಳಕ್ಕೆ ಅಸಗ್ರಹಿಸಿದ್ದೇವೆ. ಯುಪಿಎ ಸರ್ಕಾರದ ಅವಧಿಯಲ್ಲಿ ಸಾಲ ಇಂದಿನ ದುಸ್ಥಿತಿಗೆ ಕಾರಣ ಎಂದು ದೇಶದ ಜನತೆಯ ದಾರಿ ತಪ್ಪಿಸುವ ಕೆಲಸ ಮೋದಿ ಹಾಗೂ ಅವರ ಸರ್ಕಾರ ಮಾಡುತ್ತಿದೆ ಎಂದು ವಾಗ್ದಾಳಿ ನಡೆದಿದರು.
ಮೋದಿ ಸರ್ಕಾರದ ಅವಧಿಯ ಆರು ವರ್ಷದಲ್ಲಿ ಮಾಡಿದ ಸಾಧನೆ ಎಂದರೆ ಅಂಬಾನಿ, ಅದಾನಿ ಅವರಂಥ ಕಾರ್ಪೋರೆಟ್ ವ್ಯವಸ್ಥೆಯನ್ನು ಬಲವರ್ಧನೆ ಮಾಡಿದ್ದೇ ಮೋದಿ ಸರ್ಕಾರದ ಪ್ರಮುಖ ಸಾಧನೆ ಕುಟುಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Koteshwar: ಬೀಜಾಡಿಯ ಯೋಧ ಅನೂಪ್ ಪೂಜಾರಿ ಮೃತ್ಯು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.