ಕಾಂಗ್ರೆಸ್‌ ನಾಯಕರಿಗೆ ಬುದ್ಧಿ ಭ್ರಮಣೆ: ಸಚಿವ ಭಗವಂತ ಖೂಬಾ


Team Udayavani, Mar 26, 2022, 10:36 PM IST

ಕಾಂಗ್ರೆಸ್‌ ನಾಯಕರಿಗೆ ಬುದ್ಧಿ ಭ್ರಮಣೆ: ಸಚಿವ ಭಗವಂತ ಖೂಬಾ

ಕಾಳಗಿ: ಅಧಿಕಾರ ಕಳೆದುಕೊಂಡು ಹತಾಶರಾಗಿರುವ ಕಾಂಗ್ರೆಸ್‌ನ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಜಾಬ್‌ ವಿವಾದದಲ್ಲಿ ಸಂಬಂಧವೇ ಇಲ್ಲದ ಸ್ವಾಮೀಜಿಗಳನ್ನು ಎಳೆಯುತ್ತಿರುವುದು ನೋಡಿದರೆ ಕಾಂಗ್ರೆಸ್‌ ನಾಯಕರಿಗೆ ಬುದ್ಧಿ ಭ್ರಮಣೆಯಾದಂತೆ ಕಾಣುತ್ತಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು.

ಪಟ್ಟಣದ ನೀಲಕಂಠ ಕಾಳೇಶ್ವರ ಕಲ್ಯಾಣ ಮಂಟಪದಲ್ಲಿ ತಾಲೂಕು ನಾಗರಿಕ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭ ಉದ್ದೇಶಿಸಿ ಅವರು ಮಾತನಾಡಿದರು.

ದೇಶದಲ್ಲಿ ಕಾಂಗ್ರೆಸ್‌ ಧೂಳಿಪಟವಾಗಿದ್ದು, ರಾಜ್ಯದಲ್ಲಿ ಅಧಿಕಾರ ಹಿಡಿಯಲು ಜಾತಿಮತಗಳ ವಿಷ ಬೀಜ ಬಿತ್ತಿ ಕೋಮು ಕಲಭೆಗಳನ್ನು ಸೃಷ್ಟಿಸುತ್ತಾ ತಪ್ಪು ಮಾಡುವವರಿಗೆ ಬೆಂಬಲ ನೀಡುತ್ತಿದ್ದಾರೆ. ಶಾಲೆಯ ಮಕ್ಕಳಲ್ಲಿ ಎಲ್ಲರೂ ಸಮಾನರು ಎಂಬ ದೃಷ್ಟಿಯಿಂದ ಶಾಲೆಯಲ್ಲಿ ಹಿಜಾಬ್‌ ಬಳಸದಂತೆ ಕೋರ್ಟ್‌ ತೀರ್ಪು ನೀಡಿದರೂ ಕಾನೂನಿಗೆ ಗೌರವ ಕೊಡದೇ ಕಾಂಗ್ರೆಸ್‌ನವರು ಅಲ್ಪಸಂಖ್ಯಾತರಿಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಲಬುರಗಿ ಸಂಸದ ಡಾ| ಉಮೇಶ ಜಾಧವ ಮಾತನಾಡಿ, ತಾಲೂಕಿನ ಜನರಿಗೆ ನ್ಯಾಯ ಕೊಡಿಸುವಲ್ಲಿ ಮಾಜಿ ಶಾಸಕ ವಿಶ್ವನಾಥ ಪಾಟೀಲ ಹೆಬ್ಟಾಳ ಕೊಡುಗೆ ಅಪಾರವಾಗಿದೆ. ಇವರೊಬ್ಬ ಮಾದರಿ ರಾಜಕಾರಣಿಯಾಗಿದ್ದಾರೆ ಎಂದರಲ್ಲದೇ, ಮುಂದಿನ ಪೀಳಿಗೆಗೆ ಕಾಳಗಿ ತಾಲೂಕು ಕೇಂದ್ರ ಸಾಕಷ್ಟು ಅನುಕೂಲವಾಗುವಂತೆ ಮಾಡಲಾಗುವುದು ಎಂದರು.

ಮಾಜಿ ಸಚಿವ ಹಾಗೂ ಅಂಬಿಗರ ಚೌಡಯ್ಯ ನಿಗಮ ಅಧ್ಯಕ್ಷ ಬಾಬುರಾವ್‌ ಚಿಂಚನಸೂರ ಮಾತನಾಡಿ, 60 ವರ್ಷ ಕಾಂಗ್ರೆಸ್‌ ಪಕ್ಷ ಅಧಿಕಾರದಲ್ಲಿದ್ದರೂ ಕೋಲಿ ಸಮಾಜವನ್ನು ಎಸ್‌ಟಿಗೆ ಸೇರ್ಪಡೆ ಮಾಡಿಲ್ಲ. ಮನಸ್ಸು ಮಾಡಿದ್ದರೆ ಡಾ| ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸಚಿವರಾಗಿದ್ದಾಗಲೇ ಈ ಕೆಲಸ ಮಾಡಬಹುದಿತ್ತು. ಆದರೆ ನಮ್ಮನ್ನು ರಾಜಕೀಯವಾಗಿ ಬಳಸಿಕೊಂಡು ದ್ರೋಹ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನವ ಭಾರತ ನಿರ್ಮಾಣದ ಕನಸು ಕಂಡ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೋಲಿ ಸಮಾಜವನ್ನು ಎಸ್‌ಟಿಗೆ ಸೇರ್ಪಡೆ ಮಾಡೇ ತೀರುತ್ತೇನೆ ಎಂದು ಹೇಳಿದರು.

ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ ಮಾತನಾಡಿ, ಕಾಂಗ್ರೆಸ್‌ ಅವನತಿಯತ್ತ ಸಾಗುತ್ತಿದ್ದು ಬಿಜೆಪಿ ಮತ್ತೂಮ್ಮೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ. ಜೀವನಪೂರ್ತಿ ಕಾಂಗ್ರೆಸ್‌ನಲ್ಲಿದ್ದ ನಾನು ಮತ್ತು ಚಿಂಚನಸೂರ ಕೊನೆಗಾಲದಲ್ಲಾದರೂ ದೇಶ, ಧರ್ಮ ರಕ್ಷಣೆಗೆ ಮಾಡುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಪಕ್ಷದಲ್ಲಿರುವುದಕ್ಕೆ ಹೆಮ್ಮೆ ಎನಿಸುತ್ತಿದೆ ಎಂದರು.

ಕಾಳಗಿ ತಾಲೂಕು ನಾಗರಿಕ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ವಿಶ್ವನಾಥ ಪಾಟೀಲ ಹೆಬ್ಟಾಳ ಮಾತನಾಡಿ, ಅಭಿನಂದನಾ ಸಮಾರಂಭ ಯಾವುದೇ ರಾಜಕೀಯ ದುರದ್ದೇಶದಿಂದ ಮಾಡಿಲ್ಲ. ತಾಲೂಕಿನ ಇನ್ನುಳಿದ ಅಭಿವೃದ್ಧಿಗಾಗಿ ಮಾತ್ರ ಈ ಕಾರ್ಯಕ್ರಮ ಮಾಡಿದ್ದೇವೆ ಎಂದು ಹೇಳಿದರು.

ಚಿಂಚೋಳಿ-ಕಾಳಗಿ ಶಾಸಕ ಡಾ| ಅವಿನಾಶ ಜಾಧವ, ಗ್ರಾಮೀಣ ಶಾಸಕ ಬಸವರಾಜ ಮತ್ತಿಮಡು, ವಿಧಾನ ಪರಿಷತ್‌ ಸದಸ್ಯ ಬಿ.ಜಿ ಪಾಟೀಲ, ನಿವೃತ್ತ ನ್ಯಾಯಾಧಿಧೀಶ ಚನ್ನಮಲ್ಲಪ್ಪ ಬೆನಕನಳ್ಳಿ, ಭೂದಾನಿಗಳಾದ ಶಿವಶರಣಪ್ಪ ಕಮಲಾಪುರ, ನಿಂಗಯ್ಯ ಗುತ್ತೇದಾರ, ತುಳಸಿರಾಮ ಚವ್ಹಾಣ, ಅಸ್ಲಂಬೇಗ್‌ ಬಿಜಾಪುರ ಅವರನ್ನು ನಾಗರಿಕ ಸಮಿತಿಯಿಂದ ಸನ್ಮಾನಿಸಲಾಯಿತು.

ಮುಖಂಡರಾದ ಮಲ್ಲಿನಾಥ ಪಾಟೀಲ ಕಾಳಗಿ, ರೇವಣಸಿದ್ಧಪ್ಪ ಮಾಸ್ಟರ್‌ ಚಿಂಚೋಳಿ, ರಮೇಶ ಚಿಂಚನಸೂರ, ಶೇಖರ ಪಾಟೀಲ, ರಾಮಲಿಂಗರೆಡ್ಡಿ ದೇಶಮುಖ, ಶರಣಗೌಡ ಪೊಲೀಸ್‌ ಪಾಟೀಲ, ಶಿವರಾಜ ಪಾಟೀಲ ಗೊಣಗಿ, ಬಸವರಾಜ ಶಿವಗೋಳ, ಜಗದಿಧೀಶ ಪಾಟೀಲ, ಚಂದ್ರಶೇಖರ ಹರಸೂರ, ರಾಜಕುಮಾರ ರಾಜಾಪುರ ಇದ್ದರು.

ಟಾಪ್ ನ್ಯೂಸ್

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

Government will not turn a blind eye if public is inconvenienced: CM Siddaramaiah

Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.